ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಬಲ ಬೆಲೆ ಯೋಜನೆಗೆ ಹೆಸರು ಹಾಗೂ ಉದ್ದಿನಕಾಳು ಸೇರ್ಪಡೆ

|
Google Oneindia Kannada News

ಧಾರವಾಡ, ಸೆಪ್ಟೆಂಬರ್ 17 : ಧಾರವಾಡ ಜಿಲ್ಲೆಯಲ್ಲಿ 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಹಾಗೂ ಉದ್ದಿನಕಾಳನ್ನು ಖರೀದಿ ಮಾಡಲಾಗುತ್ತದೆ.

ಕರ್ನಾಟಕ ಸರ್ಕಾರ ರೈತರಿಂದ ಬೆಂಬಲ ಬೆಲೆಯಡಿ ಹೆಸರುಕಾಳು ಹಾಗೂ ಉದ್ದಿನಕಾಳನ್ನು ಖರೀದಿಸಲು ಅನುಮತಿ ನೀಡಿದೆ. ಸೆಪ್ಟೆಂಬರ್ 21ರ ಸೋಮವಾರದಿಂದ ರೈತರು ಖರೀದಿಗಾಗಿ ನೋಂದಣಿ ಮಾಡಿಕೊಳ್ಳಬಹುದು ಎಂದು ಜಿಲ್ಲಾಡಳಿತ ಹೇಳಿದೆ.

 ಕಡಿಮೆ ಖರ್ಚಿನಲ್ಲಿ ಕಳೆ ಕೀಳುವ ಯಂತ್ರ ಪರಿಚಯಿಸಿದ ಕೋಲಾರದ ರೈತ ಕಡಿಮೆ ಖರ್ಚಿನಲ್ಲಿ ಕಳೆ ಕೀಳುವ ಯಂತ್ರ ಪರಿಚಯಿಸಿದ ಕೋಲಾರದ ರೈತ

ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಈ ಕುರಿತು ಮಾಹಿತಿ ನೀಡಿದ್ದಾರೆ. "ಎಫ್. ಎ. ಕ್ಯೂ ಗುಣಮಟ್ಟದ ಹೆಸರು ಕಾಳನ್ನು ಪ್ರತಿ ಕ್ವಿಂಟಲ್ ಗೆ 7,196 ರೂ.ಗಳಂತೆ ಪ್ರತಿ ರೈತರಿಂದ ಗರಿಷ್ಠ 4 ಕ್ವಿಂಟಲ್ ಖರೀದಿಸಲಾಗುವುದು" ಎಂದರು.

ರೈತ ಬೆಳೆ ಸಮೀಕ್ಷೆ ಅಪ್ಲಿಕೇಶನ್‌ಗೆ ಮಾಹಿತಿ ತುಂಬುವುದು ಹೇಗೆ? ರೈತ ಬೆಳೆ ಸಮೀಕ್ಷೆ ಅಪ್ಲಿಕೇಶನ್‌ಗೆ ಮಾಹಿತಿ ತುಂಬುವುದು ಹೇಗೆ?

Farmers To Register Name For Sell Of Blackgram And Moong

"ಎಫ್. ಎ. ಕ್ಯೂ ಗುಣಮಟ್ಟದ ಉದ್ದಿನ ಕಾಳನ್ನು ಪ್ರತಿ ಕ್ವಿಂಟಲ್ ಗೆ 6.000 ರೂ.ಗಳಂತೆ ಪ್ರತಿ ರೈತರಿಂದ ಎಕರೆಗೆ 3 ಕ್ವಿಂಟಲ್ ಅಥವಾ ಗರಿಷ್ಠ 6 ಕ್ವಿಂಟಲ್ ಖರೀದಿಸಲು ಸರ್ಕಾರ ಸೂಚನೆ ನೀಡಿದೆ. ಇದಕ್ಕಾಗಿ ರೈತರು ನೋಂದಣಿ ಮಾಡಿಸಬೇಕು" ಎಂದು ಹೇಳಿದರು.

 ಮಳೆ ಕೊರತೆ ಜೊತೆ ಅಂತರ್ಜಲ ಸಮಸ್ಯೆ; ಬೆಳೆಗೆ ಟ್ಯಾಂಕರ್ ನೀರು ಹಾಯಿಸಿದ ರೈತ ಮಳೆ ಕೊರತೆ ಜೊತೆ ಅಂತರ್ಜಲ ಸಮಸ್ಯೆ; ಬೆಳೆಗೆ ಟ್ಯಾಂಕರ್ ನೀರು ಹಾಯಿಸಿದ ರೈತ

ಯಾವುದೇ ಗೊಂದಲಗಳು ಆಗದಂತೆ ರೈತರಿಗೆ ಅಗತ್ಯವಿರುವ ಕಡೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಬೇಕು. ಎಫ್. ಎ. ಕ್ಯೂ ಗುಣಮಟ್ಟದ ಫಸಲು ಹಾಗೂ ನೋಂದಣಿ, ಖರೀದಿ ಪ್ರಕ್ರಿಯೆ ಬಗ್ಗೆ ರೈತರಿಗೆ ಸಮರ್ಪಕವಾದ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಖರೀದಿ ಕೇಂದ್ರಗಳಲ್ಲಿ ಖರೀದಿಸುವ ಪೂರ್ವದಲ್ಲಿ ರೈತರ ನೋಂದಣಿಯನ್ನು ಎನ್‍ಐಸಿ ಸಂಸ್ಥೆಯು ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಬೆಳೆಗಳ ಉತ್ಪನ್ನವನ್ನು ಖರೀದಿಸಲು ಸಿದ್ದಪಡಿಸಿರುವ ತಂತ್ರಾಂಶವನ್ನು ಸೂಕ್ತವಾಗಿ ಉನ್ನತೀಕರಿಸಿ ಹೆಸರುಕಾಳು ಹಾಗೂ ಉದ್ದಿನಕಾಳು ಬೆಂಬಲ ಬೆಲೆ ಯೋಜನೆಯಡಿ ನೋಂದಾಯಿಸಲು ಬಳಕೆ ಮಾಡಲಾಗುತ್ತದೆ.

ಈ ದತ್ತಾಂಶದಲ್ಲಿ ರೈತರಿಗೆ ಸಂಬಂಧಿಸಿದ ಭೂಮಿ, ಆಧಾರ್, ಬೆಳೆ ಸಮೀಕ್ಷೆ ವಿವಿರಗಳನ್ನು ತಾಳೆ ಮಾಡಿ ಸಂಗ್ರಹ ಮಾಡಲಾಗಿದೆ. ಬೆಂಬಲ ಬೆಲೆ ಯೋಜನೆಯಡಿ ನೋಂದಣಿ ಮಾಡಿದ ನಂತರ ಎನ್‍ಐಸಿ ತಂತ್ರಾಂಶದಿಂದ ನಾಫೆಡ್ ಸಂಸ್ಥೆಯ ತಂತ್ರಾಶಕ್ಕೆ ರೈತರ ನೋಂದಣಿ ಮಾಹಿತಿ ಒದಗಿಸಲಾಗುವುದು.

ತಂತ್ರಾಂಶದಲ್ಲಿನ ಮಾಹಿತಿಯನ್ನು ಬಳಸಿ ರೈತರಿಂದ ಹೆಸರು ಹಾಗೂ ಉದ್ದಿನ ಕಾಳನ್ನು ಖರೀದಿ ಕೇಂದ್ರಗಳ ಮೂಲಕ ಖರೀದಿಸಲಿದೆ. ಆಧಾರ್ ಸಂಖ್ಯೆಗೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಉತ್ಪನದ ಮೌಲ್ಯವು ನೇರ ವರ್ಗಾವಣೆ ಮೂಲಕ ಜಮಾ ಆಗಲಿದೆ.

English summary
Farmers of Dhrwad district can register their name for sell of blackgram and moong from September 21, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X