Lok Sabha Election 2024: ಬೆಳ್ಳಾವಿಯಲ್ಲಿ ನಾಳೆ ರೈತ ಸಮಾವೇಶ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಟ್ರ್ಯಾಕ್ಟರ್ ರ‍್ಯಾಲಿ
ತುಮಕೂರು ಮಾರ್ಚ್ 11: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಸಮಸ್ಯೆಯನ್ನು ಸಂಪೂರ್ಣ ನಿರ್ಲಕ್ಷಿಸಿದೆ ಎಂದು ತುಮಕೂರಿನ ಬೆಳ್ಳಾವಿಯಲ್ಲಿ ನಾಳೆ ರೈತ ಸಮಾವೇಶದೊಂದಿಗೆ ಟ್ರ್ಯಾಕ್ಟರ್ ರ‍್ಯಾಲಿ ನಡೆಸಲು ನಿರ್ಧರಿಸಲಾಗಿದೆ.
ರಾಜ್ಯ ಬಿಜೆಪಿ ಗ್ರಾಮ ಪರಿಕ್ರಮ ಯಾತ್ರೆಯ ಸಮಾರೋಪ ಸಮಾರಂಭ ತುಮಕೂರು ಗ್ರಾಮಾಂತರ ಕ್ಷೇತ್ರದ ಬೆಳ್ಳಾವಿಯಲ್ಲಿ ಮಾರ್ಚ್ 12 ರಂದು ಏರ್ಪಡಾಗಿದೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ ರೈತರ ಸಮಾವೇಶ ಉದ್ಘಾಟಿಸಿದರೆ, ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅಧ್ಯಕ್ಷತೆ ವಹಿಸುವರು ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎಎಸ್ ನಡಹಳ್ಳಿ ಹೇಳಿದರು.

ಭಾನುವಾರ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 400ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಗ್ರಾಮ ಪರಿಕ್ರಮ ಯಾತ್ರೆ ನಡೆದಿದ್ದು, ಅವರ ಸಮಾರೋಪ ಸಮಾರಂಭವನ್ನು ತುಮಕೂರು ಜಿಲ್ಲೆಯಲ್ಲಿ ಆಯೋಜಿಸಲಾಗಿದೆ. ಬೆಳ್ಳಾವಿಯಲ್ಲಿ ಅಂದು ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಈ ವೇಳೆ ರೈತರ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭೆ ವಿರೋಧ ಪಕ್ಷ ನಾಯಕ ಆರ್. ಅಶೋಕ್ ಸೇರಿ ಜಿಲ್ಲೆಯ ಬಿಜೆಪಿ ನಾಯಕರು ಭಾಗವಹಿಸುವರು ಎಂದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಸಮಸ್ಯೆಯನ್ನು ಸಂಪೂರ್ಣ ನಿರ್ಲಕ್ಷಿಸಿದೆ. ಅಲ್ಲದೆ ಬಿಜೆಪಿ ಅವಧಿಯ ರೈತಪರ ಕಾರ್ಯಕ್ರಮಗಳನ್ನೂ ರದ್ದುಗೊಳಿಸಿ ರೈತ ವಿರೋಧಿ ಧೋರಣೆ ಅನುಸರಿಸಿದೆ ಎಂದು ನಡಹಳ್ಳಿ ಟೀಕಿಸಿದರು. ಹಾಲು ಉತ್ಪಾದಕರಿಗೆ ಬಿಜೆಪಿ ಸರ್ಕಾರ ಅವಧಿಯಲ್ಲಿ ಜಾರಿಗೆ ತಂದಿದ್ದ ಫ್ರೋತ್ಸಾಹ ಧನವನ್ನಯ ಕಾಂಗ್ರೆಸ್ ಸರ್ಕಾರ ನೀಡಿಲ್ಲ.

715 ಕೋಟಿ.ರೂ ಪ್ರೋತ್ಸಾಹ ಧನ ಬಾಕಿ ಇದೆ. ಬಿಜೆಪಿ ರಾಜ್ಯಾದ್ಯಂತ ಹೋರಾಟ ಮಾಡಿದ್ದಕ್ಕೆ ಒಂದು ತಿಂಗಳ ಬಾಕಿ ಹಣ ಬಿಡುಗಡೆ ಮಾಡಿದರು. ರಾಜ್ಯದೆಲ್ಲೆಡೆ ಬರ ಆವರಿಸಿದೆ. ಹಾಲು ಉತ್ಪಾದಕರಿಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಪ್ರೋತ್ಸಾಹ ಧನವನ್ನು ಕಾಂಗ್ರೆಸ್ ಸರ್ಕಾರ ನೀಡಿಲ್ಲ. 715 ಕೋಟಿ ರೂ ಪ್ರೋತ್ಸಾಹಧನ ಬಾಕಿ ಇದೆ. ಬಿಜೆಪಿ ರಾಜ್ಯಾದ್ಯಂತ ಹೋರಾಟ ಮಾಡಿದ್ದಕ್ಕೆ ಒಂದು ತಿಂಗಳ ಬಾಕಿ ಹಣ ಬಿಡುಗಡೆ ಮಾಡಿದರು. ರಾಜ್ಯದೆಲ್ಲಡೆ ಬರ ಆವರಿಸಿದೆ.
ರೈಥರಿಗೆ ಬರ ಪರಿಹಾರ ನೀಡಿಲ್ಲ. ಬರ ನಿರ್ವಹಣೆ ಕಾರ್ಯಕ್ರಮಗಳನ್ನೂ ಆರಂಭಿಸಿಲ್ಲ. ಯಾವೊಬ್ಬ ಜಿಲ್ಲಾ ಉಸ್ತುವಾರಿ ಸಚಿವರೂ ರೈತರ ಹೊಲಗಳಿಗೆ ಭೇಟಿ ನೀಡಿ ಅವರ ಕಷ್ಟ ಕೇಳಿಲ್ಲ. ರಾಸುಗಳಿಗೆ ನೀರು, ಮೇವು ಹೊಂದಿಸಲಾಗದೆ ರೈತರು ಕಂಗಾಲಾಗಿದ್ದಾರೆ. ಸರ್ಕಾರ ಇದೂವರೆಗೆ ಗೋಶಾಲೆಗಳನ್ನು ತೆರೆದಿಲ್ಲ. ಕನಿಷ್ಠ ಗ್ರಾಮ ಪಂಚಾಯ್ತಿಗೆ ಒಂದರಂತಾದರೂ ಗೋಶಾಲೆ ತೆರೆಯಬೇಕು ಎಂದು ಒತ್ತಾಯಿಸಿದರು.
ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ಮಾತನಾಡಿ, ಬೆಳ್ಳಾವಿಯಲ್ಲಿ ನಡೆಯುವ ಗ್ರಾಮ ಪರಿಕ್ರಮ ಯಾತ್ರೆಯ ಸಮಾರಂಭಕ್ಕೆ ಸಿದ್ಧತೆ ಮಾಡಲಾಘಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಸಮಾವೆಶದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಶಾಸಕ ಜಿಬಿ ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್ ಎಸ್ ರವಿಶಂಕರ್ ಹೆಬ್ಬಾಕ, ರಾಜ್ಯ ಬಿಜೆಪಿ ರೈತ ಮೋರ್ಚ್ ಉಪಾಧ್ಯಕ್ಷ ಎಂಆರ್ ರುದ್ರೇಶ್, ಬ್ಯಾಟರಂಗೇಗೌಡ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದರಾಮಣ್ಣ, ಮುಖಂಡರಾದ ಟಿ.ಆರ್ ಸದಾಶಿವಯ್ಯ, ಸತ್ಯ ಮಂಗಳಜಗಧೀಶ್ ವಿರೂಪಾಕ್ಷಯ್ಯ, ಜೆ.ಜಗದೀಶ್ ಮೊದಲಾದವರು ಭಾಗವಹಿಸಿದ್ದರು.












Click it and Unblock the Notifications