ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆ ವಿರುದ್ಧ ಸಂಸತ್ ಚಲೋ

ನವದೆಹಲಿ, ಮಾರ್ಚ್ 31: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ಕೃಷಿ ಕಾಯ್ದೆ ರದ್ದುಗೊಳಿಸುವಂತೆ ಆಗ್ರಹಿಸಿ ಮೇ ತಿಂಗಳ ಎರಡನೇ ವಾರದಲ್ಲಿ ಸಂಸತ್ ಚಲೋ ನಡೆಸುವುದಕ್ಕೆ ರೈತರು ನಿರ್ಧರಿಸಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಳೆದ ನವೆಂಬರ್.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಡೆಸುತ್ತಿರು ಪ್ರತಿಭಟನೆ ಮತ್ತೊಂದು ಹಂತಕ್ಕೆ ತಲುಪಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ಸಾವಿರಾರು ರೈತರು ಈ ಹೋರಾಟದಲ್ಲಿ ಭಾಗಿಯಾಗಿದ್ದು, ಮೇ ತಿಂಗಳಿನಲ್ಲಿ ಸಂಸತ್ ಚಲೋ ನಡೆಸುವುದಾಗಿ ಘೋಷಿಸಲಾಗಿದೆ.

Farmers Unions Announces Parliament Chalo Against Farm Laws In May

ಕೃಷಿ ಕಾಯ್ದೆ ವಿರುದ್ಧ ಸಂಸತ್ ಚಲೋ:

ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಮೇ ತಿಂಗಳ ಎರಡನೇ ವಾರದಲ್ಲಿ ಸಂಸತ್ ಚಲೋ ನಡೆಸಲಾಗುತ್ತದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಘೋಷಿಸಿದೆ. ರೈತರು, ಕಾರ್ಮಿಕರು, ಮಹಿಳೆಯರು, ದಲಿತರು, ಆದಿವಾಸಿಗಳು, ನಿರುದ್ಯೋಗಿಗಳು ಮತ್ತು ಯುವಕರು ಸೇರಿದಂತೆ ಎಲ್ಲ ವರ್ಗದ ಜನರು ಈ ಸಂಸತ್ ಚಲೋ ಹೋರಾಟದಲ್ಲಿ ಭಾಗಿ ಆಗಲಿದ್ದಾರೆ. ಶಾಂತಿಯುತ ರೀತಿಯಲ್ಲಿ ಸಂಸತ್ ಚಲೋ ನಡೆಸಲಾಗುತ್ತದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ಒನ್ ಇಂಡಿಯಾ ಕನ್ನಡ ಟೆಲಿಗ್ರಾಂ ಚಾನಲ್ ಸೇರಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+