ಕುಮಾರಸ್ವಾಮಿ ಭರವಸೆ, ರೈತರ ಮುಷ್ಕರ ವಾಪಸ್

Recommended Video

      ಎಚ್ ಡಿ ಕುಮಾರಸ್ವಾಮಿ ಭರವಸೆಯಿಂದ ರೈತರ ಮುಷ್ಕರ ವಾಪಾಸ್ | Oneindia Kannada

      ಬೆಂಗಳೂರು, ಜುಲೈ 11 : ಮಹದಾಯಿ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ರೈತರು ಹಮ್ಮಿಕೊಂಡಿದ್ದ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ. ಮುಖ್ಯಮಂತ್ರಿಗಳು ಸಮಸ್ಯೆ ಬಗೆಹರಿಸಲು 1 ತಿಂಗಳ ಗಡುವು ಕೇಳಿದ್ದಾರೆ.

      ಬುಧವಾರದಿಂದ ಉತ್ತರ ಕರ್ನಾಟಕ ಭಾಗದ ರೈತರು ಮಹದಾಯಿ ವಿವಾದ ಬಗೆಹರಿಸುವಂತೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದರು. ವಿಧಾನಸೌಧದಲ್ಲಿ ರೈತರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದರು.

      ಮಾಜಿ ಶಾಸಕ ಕೋನರೆಡ್ಡಿ ನೇತೃತ್ವದಲ್ಲಿ ರೈತ ನಾಯಕರ ನಿಯೋಗದ ಜೊತೆ ಎಚ್.ಡಿ.ಕುಮಾರಸ್ವಾಮಿ ಸಭೆ ನಡೆಸಿದರು. ರೈತರ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿಗಳು 1 ತಿಂಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು.

      Farmers withdraw strike after meeting HD Kumaraswamy

      ಒಂದು ತಿಂಗಳಿನಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ ಹಿನ್ನಲೆಯಲ್ಲಿ ರೈತರು ಮುಷ್ಕರವನ್ನು ವಾಪಸ್ ಪಡೆದರು. ಉತ್ತರ ಕರ್ನಾಟಕದ 4 ಜಿಲ್ಲೆಗಳ ರೈತರು ಫ್ರೀಡಂಪಾರ್ಕ್‌ನಲ್ಲಿ ಇಂದಿನಿಂದ ಪ್ರತಿಭಟನೆ ಆರಂಭಿಸಿದ್ದರು.

      ಮಹದಾಯಿ ವಿವಾದ ಬಗೆಹರಿಸುವ ಕುರಿತು ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ಎಂದು ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಆದರೆ, ಸಭೆ ನಡೆಯಲಿಲ್ಲ.

      ಈಗ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಹಾರಾಷ್ಟ್ರ, ಗೋವಾ ಮುಖ್ಯಮಂತ್ರಿಗಳ ಜೊತೆ ಸಮಸ್ಯೆ ಬಗೆಹರಿಸಲು ಸಭೆ ನಡೆಸುವರೇ? ಕಾದು ನೋಡಬೇಕು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+