ಯಾದಗಿರಿ: ಹತ್ತಿ ಬೆಳೆಗಾರರನ್ನು ಕಂಗೆಡಿಸಿದ ತಾಮ್ರ ರೋಗ
ಯಾದಗಿರಿ, ನವೆಂಬರ್ 02 : ರೈತರಿಗೆ ಮಳೆ ಬಂದರೂ ಒಂದು ಚಿಂತೆ, ಮಳೆ ಬಾರದಿದ್ದರೂ ಒಂದು ಚಿಂತೆ. ಹೌದು, ಯಾದಗಿರಿ ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಸತತ ಮಳೆ ರೈತರನ್ನು ಸಂಕಷ್ಟಕ್ಕೀಡು ಮಾಡಿದೆ.
ಮಳೆಯಿಂದಾಗಿ ವಿವಿಧ ಬೆಳೆಗಳು ಜಲಾವೃತವಾಗಿ ಹೊಲದಲ್ಲಿಯೇ ಕೊಳೆಯುತ್ತಿವೆ. ಅದರಲ್ಲೂ ಬಡವರ ರೇಷ್ಮೆ ಹತ್ತಿ ಬೆಳೆಗೆ ತಾಮ್ರದ ರೋಗ ಆವರಿಸಿದ್ದು, ಇದು ರೈತರನ್ನ ಚಿಂತೆಗೀಡು ಮಾಡಿದೆ.
ಎಡೆ ಬಿಡದೆ ಸುರಿದ ಮಳೆಯಿಂದ ತೇವಾಂಶ ಹೆಚ್ಚಾಗಿ ಹತ್ತಿ ಹಾಗೂ ತೊಗರಿ ಬೆಳೆಗಳು ಕೊಳೆಯುತ್ತಿರುವುದು ಒಂದೆಡೆಯಾದರೆ ಗಾಯದ ಮೇಲೆ ಬರೆ ಎನ್ನುವಂತೆ ಹತ್ತಿ ಬೆಳೆಗೆ ತಾಮ್ರದ ರೋಗ ಆವರಿಸಿದೆ.
ಈ ದೃಶ್ಯ ಕಂಡು ಬರುವುದು ಯಾದಗಿರಿ ಜಿಲ್ಲೆಯ ವಿವಿಧೆಡೆ. ವಾರದ ಹಿಂದೆ ಸತತವಾಗಿ ಸುರಿದ ಮಳೆಯಿಂದ ಜಿಲ್ಲೆಯ ಅನ್ನದಾತರು ಸಂಕಷ್ಟದ ಭೀತಿ ಎದುರಿಸುತ್ತಿದ್ದಾರೆ.

ನಷ್ಟದ ಹಾದಿ ತಲುಪಿದ ವಾಣಿಜ್ಯ ಬೆಳೆಗಳು
ಇತ್ತೀಚೆಗೆ ಸುರಿದ ಮಳೆಯಿಂದ ಮುಂಗಾರು ಹಂಗಾಮಿನ ವಾಣಿಜ್ಯ ಬೆಳೆಗಳಾದ ಹತ್ತಿ, ತೊಗರಿ, ಭತ್ತದ ಬೆಳೆಗಳು ನಷ್ಟದ ಹಾದಿ ತಲುಪಿವೆ. ಜಿಲ್ಲೆಯ ಸಾವಿರಾರು ಹೆಕ್ಟೆರ್ ಪ್ರದೇಶದ ಹತ್ತಿ ಬೆಳೆಗೆ ತಾಮ್ರದ ರೋಗ ಅಂಟಿಕೊಂಡಿದೆ. ಇದು ಎಕೆರೆ ಸಾವಿರಾರು ರೂಪಾಯಿ ಖರ್ಚು ಮಾಡಿ ಭಿತ್ತನೆ ಮಾಡಿದ್ದ ರೈತರಲ್ಲಿ ಆತಂಕ ತಂದಿದೆ.

52 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆ
ಸುರಪುರ, ಶಹಾಪುರ ಹಾಗೂ ಯಾದಗಿರಿ ತಾಲೂಕಿನ 52 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಈ ಬಾರಿ ಹತ್ತಿ ಬಿತ್ತನೆ ಮಾಡಲಾಗಿದೆ. ಇದೀಗ ಸತತ ಮಳೆಯಿಂದ ಬೆಳಗಳು ಜಲಾವೃತವಾಗಿವೆ. ತೇವಾಂಶ ಹೆಚ್ಚಾಗಿ ಹತ್ತಿ ಹಾಗೂ ತೊಗರಿ ಬೇರುಗಳು ಕೊಳೆಯುತ್ತಿದೆ.

ತಾಮ್ರ ರೋಗದ ಲಕ್ಷಣಗಳು
ಹತ್ತಿಯ ಬೇರಿನ ಮೂಲಕ ಎಲೆ, ಕಾಂಡ, ಹತ್ತಿಕಾಯಿ ಕೆಂಪಾಗುತ್ತದೆ. ಇದನ್ನು ತಾಮ್ರದ ರೋಗ ಎಂದು ರೈತರು ಕರೆಯುತ್ತಾರೆ. ಬಳಿಕ ಎಲೆ, ಕಾಯಿ ಉದುರಲು ಆರಂಭಿಸುತ್ತವೆ. ಅದಾದ ನಂತರ ಹತ್ತಿ ಗಿಡವೇ ಬಾಡುತ್ತದೆ.

ಸೂಕ್ತ ಪರಿಹಾರಕ್ಕೆ ಆಗ್ರಹ
ಸದ್ಯ ಹತ್ತಿ ಬಿಡುವ ಹಂತದಲ್ಲಿರುವ ಕಾಯಿಗಳು ನೆಲಕಚ್ಚುತ್ತಿವೆ. ಇನ್ನೂ ತೇವಾಂಶ ಹೆಚ್ಚಾದರೆ ತೊಗರಿಯದ್ದು ಅದೇ ಕತೆ. ಹಾಗಾಗಿ ತಕ್ಷಣವೇ ಬೆಳೆ ನಷ್ಟದ ಬಗ್ಗೆ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ರೈತ ಮುಖಂಡರ ಆಗ್ರಹ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications