ಲಾಲ್‌ಬಾಗ್‌ನಲ್ಲಿ ಅ.10ರಿಂದ ಫಲಪುಷ್ಪ ಪ್ರದರ್ಶನ

ಬೆಂಗಳೂರು, ಅ.6 : ಬೆಂಗಳೂರಿನ ಜನರು ಮತ್ತೊಮ್ಮೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಬಹುದಾಗಿದೆ. ನರ್ಸರಿಮೆನ್‌ ಕೋ-ಆಪರೇಟಿವ್‌ ಸೊಸೈಟಿ ತನ್ನ ಸುವರ್ಣ ಮಹೋತ್ಸವ ಅಂಗವಾಗಿ ಅ.10 ರಿಂದ 12 ರವರೆಗೆ ಲಾಲ್‌ಬಾಗ್‌ನಲ್ಲಿ ಪ್ರದರ್ಶನ ಆಯೋಜಿಸಿದೆ. ಇದರಿಂದ ಈ ವರ್ಷ ಲಾಲ್‌ಬಾಗ್ ಮೂರು ಫಲಪುಷ್ಪ ಪ್ರದರ್ಶನಗಳಿಗೆ ಸಾಕ್ಷಿಯಾಗಲಿದೆ.

ತೋಟಗಾರಿಕೆ ಇಲಾಖೆಯ ಅಂಗಸಂಸ್ಥೆಯಾದ ನರ್ಸರಿಮೆನ್‌ ಕೋ-ಆಪರೇಟಿವ್‌ ಸೊಸೈಟಿಗೆ ಸುವರ್ಣ ಮಹೋತ್ಸವ ಸಂಭ್ರಮ. ಆದ್ದರಿಂದ, 'ಸಸ್ಯಗಳು ಬೆಳೆದು ಬಂದ ಬಗೆ' ಎಂಬ ಶೀರ್ಷಿಕೆಯಡಿ ಎರಡು ದಿನಗಳ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. 100 ಮಂದಿ ನರ್ಸರಿ ಮೆನ್‌ಗಳು ಬೆಳೆಸಿರುವ ಅಪರೂಪದ 100 ಬಗೆಯ ಅಲಂಕಾರಿಕ ಹೂಗಳನ್ನು ಪ್ರದರ್ಶನದಲ್ಲಿ ಕಾಣಬಹುದಾಗಿದೆ.

Lal Bagh

ಸುಮಾರು 20 ಲಕ್ಷ ರೂ.ಗಳ ವೆಚ್ಚದಲ್ಲಿ ಪ್ರದರ್ಶನ ಆಯೋಜಿಸಲಾಗಿದ್ದು, ಸಸ್ಯಸಂತೆ, ರಿಯಾಯಿತಿ ದರದಲ್ಲಿ ಸಸಿ, ಬೀಜ ಮತ್ತು ಪರಿಕರಗಳ ಮಾರಾಟ ಮತ್ತು ಪ್ರದರ್ಶನವನ್ನು ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ. ಇದಕ್ಕೆ 40 ರೂ. ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ ಎಂದು ಸುವರ್ಣ ಮಹೋತ್ಸವ ಪ್ರದರ್ಶನ ಸಮಿತಿ ಅಧ್ಯಕ್ಷ ಟಿ.ಪಿ. ವೆಂಕಟೇಶ್‌ ಮಾಹಿತಿ ನೀಡಿದ್ದಾರೆ. [ಲಾಲ್ ಬಾಗ್‌ ನಲ್ಲಿ ಮೈಸೂರು ಅರಮನೆ ನೋಡಿ]

ಸಾಮಾನ್ಯವಾಗಿ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಮಯದಲ್ಲಿ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗುತ್ತದೆ. ಆದರೆ, ಈ ಬಾರಿ ಸುವರ್ಣ ಮಹೋತ್ಸವದ ಹಿನ್ನಲೆಯಲ್ಲಿ ಎರಡು ದಿನಗಳ ವಿಶೇಷ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.[ಲಾಲ್ ಬಾಗ್ ಫಲಪುಷ್ಪ ಪ್ರದರ್ಶನದ ಚಿತ್ರಗಳು]

ತೋಟಗಾರಿಕೆ ಪಿತಾಮಹ ಡಾ. ಎಂ.ಎಚ್‌. ಮರಿಗೌಡ ಅವರು ಲಾಲ್‌ಬಾಗ್‌ನಲ್ಲಿ ನರ್ಸರಿಮೆನ್‌ ಕೋ-ಆಪರೇಟಿವ್‌ ಸೊಸೈಟಿ ಸ್ಥಾಪಿಸಿದ್ದರು. ಉತ್ತಮ ಬೆಲೆ ಹಾಗೂ ಗುಣಮಟ್ಟದ ಸಸ್ಯ ಒದಗಿಸುವ ಉದ್ದೇಶದಿಂದ ಇದನ್ನು ಆರಂಭಿಸಲಾಗಿತ್ತು. ನರ್ಸರಿಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 600 ಮಂದಿ ಸದ್ಯರಿದ್ದಾರೆ. ಪ್ರತಿ ಐದು ವರ್ಷಕ್ಕೊಮ್ಮೆ ಇದರ ಚುನಾವಣೆ ನಡೆಯುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+