ರೈತರಿಗೆ ಸಿಹಿಸುದ್ದಿ: ಬಳ್ಳಾರಿಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆ

ಬಳ್ಳಾರಿ, ಜನವರಿ 19: ಬಳ್ಳಾರಿ ಜಿಲ್ಲೆಯಲ್ಲಿ ಮೆಣಸಿನಕಾಯಿ ಬೆಳೆಯುವ ರೈತರಿಗೆ ಸಿಹಿಸುದ್ದಿ ಇದೆ. ಕೃಷಿ ಮಾರುಕಟ್ಟೆ ಖಾತೆ ಸಚಿವ ಶಿವಾನಂದ ಪಾಟೀಲ ಬಳ್ಳಾರಿ ಜಿಲ್ಲೆಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆ ಮಾಡುವ ಕುರಿತು ಭರವಸೆ ನೀಡಿದ್ದಾರೆ. ಮಾರುಕಟ್ಟೆಗೆ ಖರೀದಿದಾರರನ್ನು ಕರೆತರುವ ಜವಾಬ್ದಾರಿ ನಮ್ಮದು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹೇಳಿದೆ.

ಬಳ್ಳಾರಿ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಸಚಿವ ಶಿವಾನಂದ ಪಾಟೀಲ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು, "ಅತಿ ಹೆಚ್ಚು ಮೆಣಸಿನಕಾಯಿ ಬೆಳೆಯುತ್ತಿರುವ ಬಳ್ಳಾರಿ ಜಿಲ್ಲೆಯಲ್ಲಿ ಚಿಲ್ಲಿ ಮಾರುಕಟ್ಟೆ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಇದೆ. ಹೀಗಾಗಿ ಕೋಲ್ಡ್ ಸ್ಟೋರೇಜ್ ಜತೆಗೆ ಚಿಲ್ಲಿ ಮಾರುಕಟ್ಟೆಯನ್ನೂ ನಿರ್ಮಾಣ ಮಾಡಲಾಗುವುದು" ಎಂದರು.

Good News For Farmers Chilli Market Will Set Up In Ballari

"ಚಿಲ್ಲಿ ಮಾರುಕಟ್ಟೆ ನಿರ್ಮಾಣಕ್ಕೆ ಎಪಿಎಂಸಿಯಿಂದ 5 ಕೋಟಿ ರೂ. ಅನುದಾನ ನೀಡಲಿದ್ದು, ಇತರ ಮೂಲಗಳಿಂದ ಅಗತ್ಯ ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು. ಶಾಸಕ ನಾರಾ ಭರತ್‌ರೆಡ್ಡಿ ಅವರು ಸಹ ನೆರವಿನ ಭರವಸೆ ನೀಡಿದ್ದಾರೆ. ಈಗ ಚಿಲ್ಲಿ ಮಾರುಕಟ್ಟೆ ನಿರ್ಮಾಣಕ್ಕೆ ಗುರುತಿಸಿರುವ 23 ಎಕರೆ ಪ್ರದೇಶ ಕಡಿಮೆಯಾಗಲಿದೆ. ಭವಿಷ್ಯದ ದೃಷ್ಟಿಯಿಂದ ಕನಿಷ್ಟ 50 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡುವುದು ಸೂಕ್ತ" ಎಂದು ಸಚಿವರು ಸಲಹೆ ನೀಡಿದರು.

"ಪಿಪಿಪಿ ಮಾಡೆಲ್‌ನಲ್ಲಿ ಚಿಲ್ಲಿ ಮಾರುಕಟ್ಟೆ ನಿರ್ಮಾಣ ಕಷ್ಟ ಸಾಧ್ಯ. ಹೀಗಾಗಿ ಈ ಯೋಜನೆ ಬದಲಿಗೆ ಅಗತ್ಯ ಸಂಪನ್ಮೂಲ ಕ್ರೋಢೀಕರಣ ಮಾಡಿ ನಿರ್ಮಿಸಲು ಉದ್ದೇಶಿಸಲಾಗಿದೆ. ಎಪಿಎಂಸಿ ಸಚಿವನಾಗಿ ಈ ಜಿಲ್ಲೆಯಲ್ಲಿ ಚಿಲ್ಲಿ ಮಾರುಕಟ್ಟೆಯನ್ನು ನಿರ್ಮಾಣ ಮಾಡುವೆ" ಎಂದು ಸಚಿವರು ಭರವಸೆಯನ್ನು ಕೊಟ್ಟರು.

ಸಭೆಯಲ್ಲಿ ಮಾತನಾಡಿದ ವಾಣೀಜ್ಯೋದ್ಯಮ ಸಂಸ್ಥೆ, ಬಳ್ಳಾರಿಯ ಮಾಜಿ ಅಧ್ಯಕ್ಷ ಮಹಾರುದ್ರ ಗೌಡ, "ಬಳ್ಳಾರಿಯಲ್ಲಿ ಚಿಲ್ಲಿ ಮಾರುಕಟ್ಟೆ ನಿರ್ಮಿಸಿದರೂ ಖರೀದಿದಾರರು ಬರುವುದಿಲ್ಲ ಎಂಬ ಸುದ್ದಿ ಹರಡಲಾಗುತ್ತಿದೆ. ಬಳ್ಳಾರಿಗೆ ಖರೀದಿದಾರರನ್ನು ತರುವ ಜವಾಬ್ದಾರಿ ನಮ್ಮದು. ಈ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಯಾವುದೇ ಸಂದೇಹ ಬೇಡ" ಎಂದರು.

ಶಾಸಕ ನಾರಾ ಭರತ್‌ ರೆಡ್ಡಿ ಮಾತನಾಡಿ, "ಚಿಲ್ಲಿ ಮಾರುಕಟ್ಟೆ ನಿರ್ಮಾಣಕ್ಕೆ ಎಪಿಎಂಸಿ ಸಚಿವ ಶಿವಾನಂದ ಪಾಟೀಲ ಅವರೊಂದಿಗೆ ಕೈ ಜೋಡಿಸಲಾಗುವುದು. ಬಹು ದಿನಗಳ ಬೇಡಿಕೆಯಾಗಿರುವ ಚಿಲ್ಲಿ ಮಾರುಕಟ್ಟೆಯನ್ನು ಶೀಘ್ರವಾಗಿ ನಿರ್ಮಾಣ ಮಾಡಬೇಕು. ಈಗಾಗಲೇ ನಿವೇಶನ ಗುರುತು ಮಾಡಿರುವುದರಿಂದ ಸಮಸ್ಯೆ ಇಲ್ಲ" ಎಂದು ಹೇಳಿದರು.

ಇಲಾಖೆಯ ಆದಾಯ ಏರಿಕೆ: ಸಚಿವ ಶಿವಾನಂದ ಪಾಟೀಲ ಮಾತನಾಡಿ, "ಕಳೆದ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಪೂರ್ವದಲ್ಲಿ ವಾರ್ಷಿಕ ಸುಮಾರು 600 ರಿಂದ 680 ಕೋಟಿ ರೂ. ಆದಾಯ ಇತ್ತು . ಕಾಯ್ದೆ ತಿದ್ದುಪಡಿ ನಂತರ ಆದಾಯ 180 ಕೋಟಿ ರೂ.ಗಳಿಗೆ ಕುಸಿಯಿತು. ನಮ್ಮ ಪಕ್ಷ ಚುನಾವಣೆ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಎಪಿಎಂಸಿ ಕಾಯ್ದೆಯನ್ನು ಮರು ಸ್ಥಾಪನೆ ಮಾಡಿದ ನಂತರ ಆದಾಯದಲ್ಲಿ ಏರಿಕೆಯಾಗಿದ್ದು, ಈ ವರ್ಷ ಸುಮಾರು 450 ಕೋಟಿ ರೂ. ಸಂಗ್ರಹವಾಗುವ ವಿಶ್ವಾಸ ಇದೆ. ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೂ ಅನುಕೂಲವಾಗಿದೆ" ಎಂದರು.

"ರಾಜ್ಯದಲ್ಲಿ ಎಪಿಎಂಸಿ ಸುಮಾರು 23 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದೆ. ಈ ಆಸ್ತಿಯನ್ನು ಉಳಿಸಿಕೊಳ್ಳುವುದಷ್ಟೇ ಅಲ್ಲ. ಆರ್ಥಿಕವಾಗಿ ಮತ್ತಷ್ಟು ಬಲಶಾಲಿಯಾಗಿ ಮಾಡಬೇಕಿದೆ. ಲಾಭ ಮಾಡುವ ಉದ್ದೇಶ ಅಲ್ಲದಿದ್ದರೂ ಆರ್ಥಿಕವಾಗಿ ಸಬಲ ಇರುವಂತೆ ನೋಡಿಕೊಳ್ಳಬೇಕಿದೆ" ಎಂದು ತಿಳಿಸಿದರು.

"ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಎಪಿಎಂಸಿಯಲ್ಲಿ ತೆರಿಗೆ ವಸತಿ ಮತ್ತು ವೈದ್ಯಕೀಯ ಸೌಲಭ್ಯ ಒದಗಿಸುವ ಮೂಲಕ ರಾಜ್ಯಕ್ಕೆ ಮಾದರಿಯಾದ ಕೆಲಸ ಮಾಡಿದೆ. ಈ ಯೋಜನೆಯನ್ನು ಎಲ್ಲ ಎಪಿಎಂಸಿಗಳಲ್ಲಿ ವಾಣಿಜ್ಯೋದ್ಯಮ ಸಂಸ್ಥೆಗಳ ಸಹಕಾರದೊಂದಿಗೆ ವಿಸ್ತರಿಸುವ ಉದ್ದೇಶ ಹೊಂದಿದ್ದೇನೆ. ಈ ಯೋಜನೆ ರೈತರಿಗೆ ತುಂಬಾ ಅನುಕೂಲಕರವಾಗಿದೆ" ಎಂದು ಸಚಿವ ಶಿವಾನಂದ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.

"ಬಳ್ಳಾರಿ ಜಿಲ್ಲೆಯಲ್ಲಿ ಅತ್ಯಧಿಕ ಕೋಲ್ಡ್ ಸ್ಟೋರೇಜ್ ಇವೆ. ಹಾಗಾಗಿ ಸರ್ಕಾರದಿಂದ ನಿರ್ಮಾಣ ಮಾಡುವುದು ಬೇಡ ಎಂದು ಕೆಲವರು ಸಲಹೆ ನೀಡಿದ್ದಾರೆ. ಆದರೆ ಖಾಸಗಿ ಕೋಲ್ಡ್ ಸ್ಫೋರೇಜ್‌ಗಳ ಮಾಲೀಕರು ರೈತರನ್ನು ಶೋಷಣೆ ಮಾಡುವ ಸಾಧ್ಯತೆ ಇರುತ್ತದೆ. ಸಹಕಾರಿ ತತ್ವ ಅಥವಾ ಸರಕಾರದಿಂದಲೂ ನಿರ್ಮಾಣ ಮಾಡಿದರೆ ಸ್ಪರ್ಧಾತ್ಮಕ ಬೆಲೆಯನ್ನು ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ" ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+