ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಲಸಿನ ಹಬ್ಬಕ್ಕೆ ಎರಡನೇ ದಿನವೂ ಉತ್ತಮ ಸ್ಪಂದನೆ
ಮೈಸೂರು, ಜೂನ್, 25: ಸಹಜ ಸಮೃದ್ಧದ ವತಿಯಿಂದ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಶನಿವಾರ "ಮೈಸೂರು ಹಲಸಿನ ಹಬ್ಬ"ವನ್ನು ಆಯೋಜಿಸಲಾಗಿತ್ತು. ಈ ಹಬ್ಬ ಇಂದು ಕೂಡ ಮುಂದುವರೆದಿದ್ದು, ಹಲಸು ಕೊಳ್ಳಲು ಈಗಾಗಲೇ ಜನರು ಸರದಿ ಸಾಲಿನಲ್ಲಿ ನಿಂತಿದ್ದಾರೆ.
ಇಂದಿನ ಸ್ಪರ್ಧೆಯ ವಿವರ
ಇಂದು (ಭಾನುವಾರ) ಕೂಡ ಬೆಳಗ್ಗೆ 10 ಗಂಟೆಯಿಂದ 2-12 ವಯಸ್ಸಿನ ಮಕ್ಕಳಿಗೆ "ನಾ ಕಂಡಂತೆ ಹಲಸು" ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಲಾಗಿದೆ. ಇನ್ನು ಮಧ್ಯಾಹ್ನ ಹಲಸಿನ ಅಡುಗೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಹಲಸಿನ ಹಣ್ಣು, ಕಾಯಿ, ಬೀಜ, ಎಲೆಯಿಂದ ಮಾಡುವ ಸಾಂಪ್ರದಾಯಿಕ ಅಥವಾ ಹೊಸ ಬಗೆಯ ಅಡುಗೆಗಳನ್ನು ತಯಾರಿಸಿ ಮೇಳಕ್ಕೆ ತರಬಹುದು. ಉತ್ತಮ ಅಡುಗೆಗಳಿಗೆ ಆಕರ್ಷಕ ಬಹುಮಾನವನ್ನು ಇಡಲಾಗಿದೆ.

2 ಗಂಟೆಗೆ "ಹಲಸಿನ ಹಣ್ಣು ತಿನ್ನುವ ಸ್ಪರ್ಧೆ" ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ನಿಗದಿತ ಸಮಯದಲ್ಲಿ ಹೆಚ್ಚು ಹಲಸಿನ ಹಣ್ಣಿನ ತೊಳೆ ತಿಂದವರನ್ನು ವಿಜೇತರಾಗಿ ಘೋಷಿಸಿ, ಬಹುಮಾನವನ್ನು ಕೂಡ ನೀಡಲಾಗುತ್ತದೆ.
ಇನ್ನು ನಿನ್ನೆ ಮೇಳದಲ್ಲಿ ಕೆಂಪು, ಹಳದಿ ಮತ್ತು ಬಿಳಿ ಹಲಸಿನ ಹಣ್ಣುಗಳು ಜನರನ್ನು ತನ್ನತ್ತ ಆಕರ್ಷಿಸಿದವು. ಜೊತೆಗೆ ಹಲಸಿನ ಐಸ್ ಕ್ರೀಂ, ಚಿಪ್ಸ್, ಕಬಾಬ್, ಚಾಕೋಲೇಟ್, ಹಪ್ಪಳ, ಹಲ್ವಾ, ಹೋಳಿಗೆ, ವಡೆ, ದೋಸೆ, ಹಲಸಿನ ಬಿರಿಯಾನಿ ರುಚಿಯನ್ನು ಸಾರ್ವಜನಿಕರು ಸವಿದರು. ಅಲ್ಲದೆ ಹಲಸಿನ ಬೀಜದ ಪೇಯ ಕಾಫಿಗೆ ಜನರು ಮುಗಿಬಿದ್ದಿದ್ದರು.
ಹಸಿದು ಹಲಸು ತಿನ್ನುವ ಎಂಬ ಮಾತಿದೆ. ಹಾಗೆಯೇ ಬರಗಾಲ ಎದುರಿಸಿ ನಿಲ್ಲುವ ಹಲಸು ರಾಸಾಯನಿಕ ಔಷಧಿ, ಗೊಬ್ಬರ ಇಲ್ಲದೆ ಬೆಳೆಯುತ್ತದೆ. ರೈತರ ಜೇಬು ತುಂಬುವ ಆಪ್ತಮಿತ್ರನೂ ಔದು. ಹಲಸಿನ ಮಹತ್ವವನ್ನು ಗ್ರಾಹಕರಿಗೆ ಮತ್ತು ರೈತರಿಗೆ ತಿಳಿಸಿಕೊಡುವ ಉದ್ದೇಶದಿಂದ ಸಹಜ ಸಮೃದ್ಧ ಮತ್ತು ನಮ್ಮ ರೈತರ ಮಾರ್ಕೆಟ್ ಜೊತೆಗೂಡಿ ಎರಡು ದಿನ ಹಲಸಿನ ಹಬ್ಬವನ್ನು ಏರ್ಪಡಿಸಲಾಗಿತ್ತು.
ಇನ್ನು ಮೊದಲ ದಿನದ (ಶನಿವಾರ) ಹಲಸಿನ ಹಬ್ಬವನ್ನು ಜಿಲ್ಲಾಧಿಕಾರಿ ಡಾ.ಕೆ.ರಾಜೇಂದ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇನ್ನು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ನಿರ್ದೇಶಕ ಪ್ರೊ.ಸಂಜಯ್ ಕುಮಾರ್ ಸಿಂಗ್ "ಹಲಸಿನ ಅಡುಗೆ" ಪುಸ್ತಕವನ್ನು ಬಿಡುಗಡೆ ಮಾಡಿದರು. ಹಾಗೆಯೇ ಹಲಸಿನ ತಜ್ಞ ಡಾ. ಕರುಣಾಕರನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ನಾನಾ ಸ್ಪರ್ಧೆಗಳ ಆಯೋಜನೆ
ಜೊತೆಗೆ ಹಲಸು ಭಾರ ಎತ್ತುವ ಮತ್ತು ಹಲಸಿನ ತೂಕ ಊಹಿಸಿಸುವ ಸ್ಪರ್ಧೆಯನ್ನೂ ಕೂಡ ಏರ್ಪಡಿಸಲಾಗಿತ್ತು. ಕರ್ನಾಟಕದ ವಿವಿಧ ಭಾಗಗಳಿಂದ ಬರುವ 40 ಗ್ರಾಮೀಣ ಉದ್ದಿಮೆದಾರರು, ರೈತ ಕಂಪನಿಗಳು, ರೈತ ಮತ್ತು ಮಹಿಳಾ ಗುಂಪುಗಳು ಹಲಸಿನ ಮೌಲ್ಯವರ್ಧಿತ ಪದಾರ್ಥಗಳು, ಸಿರಿಧಾನ್ಯ, ಸಾವಯವ ಉತ್ಪನ್ನಗಳು ಮತ್ತು ಕರಕುಶಲ ವಸ್ತುಗಳನ್ನು ಮಾರಾಟಕ್ಕೆ ಇಡಲಾಗಿತ್ತು.
ರುದ್ರಾಕ್ಷಿ ಬಕ್ಕೆ, ತೂಬಗೆರೆ, ಬೈರಸಂದ್ರ, ಸರ್ವ ಋತು, ಲಾಲ್‌ಬಾಗ್ ಮಧುರ, ಥಾಯ್ ರೆಡ್, ವಿಯಟ್ನಾಂ ಸೂಪರ್ ಹರ್ಲಿ, ಗಮ್ ಲೆಸ್, ನಾಗಚಂದ್ರ, ರಾಮಚಂದ್ರ ಮೊದಲಾದ ಇಪ್ಪತ್ತೈದು ತಳಿಗಳು ಮಾರಾಟಕ್ಕೆ ಇಡಲಾಗಿದೆ. ಸಸ್ಯ ತಳಿ ಸಂರಕ್ಷಣೆ ಮತ್ತು ರೈತರ ಹಕ್ಕು ಪ್ರಾಧಿಕಾರದಲ್ಲಿ ನೋಂದಣಿ ಆಗಿರುವ ಕರ್ನಾಟಕ ರಾಜ್ಯದ ಮೊದಲ ಕೆಂಪು ಹಲಸಿನ ತಳಿ ಸಿದ್ದು ಹಲಸು ಗಿಡಗಳು ಆಕರ್ಷಣೀಯ ಕೇಂದ್ರಬಿಂದುವಾಗಿದ್ದವು.
ಸಹಜ ಸಮೃದ್ಧ ಸಂಸ್ಥೆಯ ಕೃಷ್ಣಪ್ರಸಾದ್ ಮಾತನಾಡಿ, ಬಾಯಿಗಿಟ್ಟರೆ ಜೇನು ಸದಂತೆನಿಸುವ ಹಲಸು. ಳೆಯ ಕಾಯಿಯಿಂದ ತೊಳೆ ಬಿಡಿಸಿದ ಬೀಜದವರೆಗೆ ತಿನ್ನಲು ಬರುತ್ತದೆ. ಹಲಸಿನ ಕಾಯಿಯ ನಿರಂತರ ಸೇವನೆಯಿಂದ ಮಧುಮೇಹಿಗಳು ಇನ್ಸುಲಿನ್ ಬಳಕೆ ನಿಲ್ಲಿಸಬಹುದು. ಕ್ಯಾನ್ಸರ್, ಮಲಬದ್ದತೆಯನ್ನು ದೂರವಿಡಬಹುದು. ಹೀಗೆ ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಹಲಸನ್ನು ಮನೆ ಮಂದಿಯೆಲ್ಲಾ ತಿಂದುತೇಗಬೇಕು ಎಂದರು.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications