• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕಬ್ಬಿನ ಬಾಕಿ ಹಣ ಕೊಡಿಸಲು ಸರ್ಕಾರ ಬದ್ಧ: ಪರಮೇಶ್ವರ್

|

ಬೆಂಗಳೂರು, ನವೆಂಬರ್ 19: ಕಬ್ಬು ಬೆಳೆಗಾರರ ಬಾಕಿ ಹಣವನ್ನು ಸಕ್ಕರೆ ಕಾರ್ಖಾನೆ ಮಾಲೀಕರಿಂದ ಕೊಡಿಸಲು ಸರ್ಕಾರ ಬದ್ಧವಾಗಿದೆ ಎಂದು ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.

ರೈತರ ಪ್ರತಿಭಟನೆ ದಿನೇ ದಿನೇ ಹೆಚ್ಚಾಗುತ್ತಿರುವ ಕಾರಣ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರವು ರೈತರ ಮನವಿಗಳಲ್ಲಿ ಧನಾತ್ಮಕವಾಗಿ ಪ್ರತಿಕ್ರಿಯಿಸಲು ತಯಾರಿದೆ ಎಂದು ಹೇಳಿದರು.

ವಿಧಾನಸೌಧಕ್ಕೆ ಅನ್ನದಾತರ ಮುತ್ತಿಗೆ: LIVE:ಫ್ರೀಡಂಪಾರ್ಕ್‌ನಲ್ಲಿ ಭುಗಿಲೆದ್ದ ಕಬ್ಬಿನ ಕಿಚ್ಚು

ಸಿಎಂ ಕುಮಾರಸ್ವಾಮಿ ಅವರು ರೈತ ಮಹಿಳೆ ಬಗ್ಗೆ ನೀಡಿದ ಕೀಳು ಹೇಳಿಕೆ ಬಗ್ಗೆ ಮಾತನಾಡಿದ ಪರಮೇಶ್ವರ್, ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ ಎಂದು ಅಂತರ ಕಾಯ್ದುಕೊಂಡರು.

ರೈತರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಪ್ರತಿಭಟನೆಗಳು ಒಳ್ಳೆಯದೇ ಆದರೆ ಪ್ರತಿಭಟನೆ ಶಾಂತ ರೀತಿಯಿಂದ ಮಾಡಬೇಕು. ಸುವರ್ಣಸೌಧದ ಗೇಟ್‌ ಒಡೆದುಹಾಕಿರುವುದು ಸರಿಯಾ? ಎಂದು ಮಾಧ್ಯಮಗಳಿಗೆ ಪ್ರಶ್ನೆ ಮಾಡಿದರು.

ವಿಡಿಯೋ : ಕುಮಾರಸ್ವಾಮಿಯನ್ನು ತರಾಟೆಗೆ ತೆಗೆದುಕೊಂಡ ರೈತರು

ಸರ್ಕಾರದ ಮೇಲೆ ಆರೋಪ ಹೊರಿಸುತ್ತಿರುವ ಬಿಜೆಪಿ ವಿರುದ್ಧ ಹರಿಹಾಯ್ದ ಅವರು, ರೈತರ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ, ನಮ್ಮ ಸರ್ಕಾರ 49,000 ಕೋಟಿ ರೈತರ ಸಾಲ ಮನ್ನಾ ಮಾಡುತ್ತಿದೆ. ಮೋದಿ ಅವರು ರೈತರ ಸಾಲ ಮನ್ನಾ ಮಾಡಿಲ್ಲ ಎಂದು ಹೇಳಿದರು.

English summary
DCM G Parameshwar said that coalition government committed to paying pending money to sugar cane farmers. Sugar cane farmers protest against government from few days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X