ಕಬ್ಬಿಗೆ ಬೆಲೆ ನಿಗದಿ ಮಾಡದ ಸರ್ಕಾರ: ಮಂಡ್ಯದಲ್ಲಿ ರೈತರಿಂದ ಚಡ್ಡಿ ಮೆರವಣಿಗೆ, ಆಕ್ರೋಶ
ಮಂಡ್ಯ, ಡಿಸೆಂಬರ್, 19: ಮಂಡ್ಯದಲ್ಲಿ ರೈತರು ಕಬ್ಬಿಗೆ ಬೆಲೆ ನಿಗದಿ ಮಾಡುವಂತೆ ಸರ್ಕಾರ ವಿರುದ್ಧ ಆಕ್ರೋಶ ಹೊರಹಾಕುತ್ತಲೇ ಬಂದಿದ್ದಾರೆ. ಆದರೆ ಇದುವರೆಗೂ ಸರ್ಕಾರ ಮಾತ್ರ ರೈತರ ಕಡೆಗೆ ಗಮನ ಹರಿಸುತ್ತಿಲ್ಲ. ರೈತರ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೃಷಿ ಉತ್ಪನ್ನಗಳ ಬೆಲೆ ಹೆಚ್ಚಳಕ್ಕೆ ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದವು. ಮಂಡ್ಯದಲ್ಲಿ ರೈತರು ಚಡ್ಡಿ ಮೆರವಣಿಗೆ ಮಾಡಿದರೆ, ಮಹಿಳಾ ರೈತರು ಬಾರುಕೋಲು ಚಳವಳಿ ನಡೆಸಿದರು.
ರೈತರು ನಡೆಸುತ್ತಿದ್ದ ಬೈಕ್ ರ್‍ಯಾಲಿಯಲ್ಲಿ ಕನ್ನಡ, ದಲಿತ, ಪ್ರಗತಿಪರ, ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು, ವಿದ್ಯಾರ್ಥಿಗಳು, ಚಾಲಕರು ಸಹ ಭಾಗವಹಿಸಿದ್ದರು. ರೈತರು ಟ್ರಾಕ್ಟರ್ ಮತ್ತು ಎತ್ತಿನ ಗಾಡಿಗಳಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು. ಬಳಿಕ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಮಹಿಳಾ ರೈತರಿಂದ ಬಾರುಕೋಲು ಚಳವಳಿ
ಮದ್ದೂರಿನ ರೈತರು ಚಡ್ಡಿ ಮೆರವಣಿಗೆ ಮಾಡಿದರೆ, ರೈತ ಮಹಿಳೆಯರು ಬಾರುಕೋಲು ಚಳವಳಿ ನಡೆಸಿದರು. ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ಹಲವು ಸಂಘಟನೆಗಳ ಬೆಂಬಲದೊಂದಿಗೆ ವಿಭಿನ್ನ ರೀತಿಯಲ್ಲಿ ರೈತರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಆದರೂ ಸಹ ರೈತರ ಹೋರಾಟಕ್ಕೆ ಸರ್ಕಾರ ಇದುವರೆಗೂ ಸ್ಪಂದನೆ ನೀಡಿಲ್ಲ. ಕಬ್ಬು, ಹಾಲಿನ ದರ ನಿಗದಿ ಬಗ್ಗೆ ಯಾವುದೇ ಭರವಸೆನ್ನೂ ನೀಡಿಲ್ಲ ಎಂದು ರೈತರು ಕಿಡಿ ಕಾರಿದರು. ಸರ್ಕಾರ ರೈತರ ಬೇಡಿಕೆ ಈಡೇರಿಸದೆ ಉದಾಸೀನ ತೋರುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿ ಹೋಗಿದ್ದಾರೆ. ಇತ್ತ ರೈತರ ಸಮಸ್ಯೆಗೆ ಪರಿಹಾರ ದೊರಕಿಸಿಕೊಡುವಲ್ಲಿ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಖಾನೆಗಳ ಮಾಲೀಕರ ವಿರುದ್ಧ ಆಕ್ರೋಶ
ಬಹುತೇಕ ಎಲ್ಲಾ ಸಕ್ಕರೆ ಕಾರ್ಖಾನೆಗಳ ಮಾಲೀಕರು ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಅವರು ಸರ್ಕಾರದ ಭಾಗವಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕಬ್ಬಿಗೆ ದರ ಹೆಚ್ಚಳ ಮಾಡುವಲ್ಲಿ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾರ್ಖಾನೆ ಮಾಲೀಕರು ಕೇವಲ ಸಕ್ಕರೆ ದರವನ್ನು ಮಾತ್ರ ಕಬ್ಬು ದರ ನಿಗದಿಗೆ ಮಾನದಂಡವಾಗಿ ತೆಗೆದುಕೊಳ್ಳುತ್ತಿದ್ದಾರೆ. ಆದರೆ ಉಪ ಉತ್ಪನ್ನಗಳಾದ ಸಹ ವಿದ್ಯುತ್ ಘಟಕ, ಡಿಸ್ಟಿಲರಿ ಸೇರಿದಂತೆ ಇತರ ಉತ್ಪನ್ನಗಳನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಈ ಎಲ್ಲ ಉತ್ಪನ್ನಗಳಿಂದಲೂ ಮಾಲೀಕರು ಲಾಭವನ್ನು ಪಡೆಯುತ್ತಿದ್ದಾರೆ. ಅದರಲ್ಲಿ ರೈತರಿಗೆ ಪಾಲು ನೀಡುತ್ತಿಲ್ಲ ಎಂದು ಕಿಡಿಕಾರಿದರು.
ಹಾಲಿಗೆ ವೈಜ್ಞಾನಿಕ ದರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಪಶು ಆಹಾರ ಪದಾರ್ಥಗಳ ದರ ಹೆಚ್ಚಳವಾಗಿದೆ. ಆದರೆ ಹಾಲಿನ ದರ ಹೆಚ್ಚಳ ಮಾಡುವಲ್ಲಿ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಭಾಗ್ಯಜ್ಯೋತಿ, ಕುಟೀರ ಜ್ಯೋತಿ ವಿದ್ಯುತ್ ಬಾಕಿ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications