ಅಣಬೆ ಕೃಷಿ:ಅಣಬೆ ಘಟಕ ಸ್ಥಾಪನೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬೆಂಗಳೂರು ಆಗಸ್ಟ್11: ತಾಂತ್ರಿಕ ಪ್ರಗತಿ, ಪೌಷ್ಠಿಕಾಂಶ ಮತ್ತು ಸಹಾಯಕ ಆದಾಯದ ಮೂಲವಾಗಿರುವುದರಿಂದ ಭಾರತದಲ್ಲಿ ಮಶ್ರೂಮ್ ಕೃಷಿಯ ವೇಗ ಪಡೆದುಕೊಂಡಿದೆ. ರೈತರು ಹೆಚ್ಚಿನ ಪ್ರಮಾಣದಲ್ಲಿ ಈ ಅಣಬೆ ಬೇಸಾಯ ಮಾಡುವತ್ತ ಒಲವು ತೋರುತ್ತಿದ್ದಾರೆ.
ತಾಂತ್ರಿಕತೆಯ ಪ್ರಗತಿಯ ಪರಿಣಾಮ ಇಂದು ಗುಡ್ಡಗಾಡು ಪ್ರದೇಶಗಳು ಹಾಗೂ ಇನ್ನಿತರ ಕಡೆಗಳಲ್ಲಿ ವಿವಿಧ ತಳಿಯ ಅಣಬೆಗಳನ್ನು ಬೆಳೆಯಲು ರೈತರಿಗೆ ಸಾಧ್ಯವಾಗಿದೆ. ಅಲ್ಲದೇ ಈ ಅಣಬೆ ಕೃಷಿ ಮಾಡುವವರನ್ನು ಸರ್ಕಾರವು ಸಹಾಯನ ಧನ ನೀಡುತ್ತಿದೆ. ತೋಟಗಾರಿಕೆ ಇಲಾಖೆ ಯು ಸಹ ಅಗತ್ಯ ಸಲಹೆ, ಸಹಾಯ ಮಾಡುತ್ತಿವೆ.
ಸ್ವಾವಲಂಬಿ ಜೀವನಕ್ಕೆ ಆಧಾರವಾದ ಅಣಬೆ ಬೇಸಾಯ
ಈ ನಿಟ್ಟಿನಲ್ಲಿ ಹೆಚ್ಚಿನ ರೈತರು ಅಣಬೆ ಬೇಸಾಯ ಆರಂಭಿಸುವಂತೆ ಉತ್ತೇಜಿಸಲು ಹರಿಯಾಣ ರಾಜ್ಯ ಸರ್ಕಾರವು ಅಣಬೆ ಘಟಕ ಸ್ಥಾಪಿಸುವ ರೈತರಿಗೆ ಸಹಾಯಧನ ನೀಡಲು ಮುಂದಾಗಿದೆ. ಇತ್ತೀಚಿನ ವರ್ಷಗಳಲ್ಲಿ ಹರಿಯಾಣದಲ್ಲಿ ಅಣಬೆ ಕೃಷಿ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ರೈತರು ಬೃಹತ್ ಪ್ರಮಾಣದಲ್ಲಿ ಅಣಬೆಗಳನ್ನು ಬೆಳೆಸಿ ಉತ್ತಮ ಇಳುವರಿ ಜತೆಗೆ ಉತ್ತಮ ಲಾಭವನ್ನೂ ಪಡೆದಿದ್ದಾರೆ.

ಇದನ್ನು ಮನಗಂಡ ರಾಜ್ಯ ಸರ್ಕಾರ ಇನ್ನಿತರ ರೈತರು ಅಣಬೆ ಕೃಷಿಗೆ ಆದ್ಯತೆ ನೀಡಬೇಕು. ಹೆಚ್ಚು ಬೆಳೆದು ಉತ್ತಮ ಆದಾಯ ಪಡೆಯಬೇಕು ಎಂದು ಬಯಸಿದೆ. ಈ ಕಾರಣಕ್ಕೆ ಅಣಬೆ ಕೃಷಿ ಮತ್ತು ಅಣಬೆ ಬೆಲೆಯುವ ರೈತರನ್ನು ಪ್ರೊತ್ಸಾಹಿಸುತ್ತಿದೆ. ಅವರಿಗೆ ಅಗತ್ಯ ನೆರವು ಒದಗಿಸುತ್ತಿದೆ.
ಇನ್ನು ಅಣಬೆ ಘಟಕ ಸ್ಥಾಪಿಸಲು ಇಚ್ಛಿಸುವ ರೈತರಿಂದ ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ರೈತರು ಲಿಂಕ್ ಮೂಲಕ https://hortnet.gov.in/?QUERY ಅರ್ಜಿ ಸಲ್ಲಿಸಬಹುದಾಗಿದೆ.

2 ವಿಧದ ಘಟಕಕ್ಕಾಗಿ ಅರ್ಜಿ ಸಲ್ಲಿಸಿ
ವೈಯಕ್ತಿಕ ಘಟಕ ಹಾಗೂ ಜಂಟಿ ಘಟಕ ಎಂದು ವಿಭಾಗಿಸಲಾಗಿದೆ. ರಾಜ್ಯ ಸರ್ಕಾರದಿಂದ ಅಣಬೆ ಕೃಷಿಗೆ ಸಹಾಯಧನ ಪಡೆಯಲು ಇಚ್ಛಿಸುವ ರೈತರು ಈ ಎರಡು ವಿಭಾಗಳಿಗೆ ಅರ್ಜಿ ಸಲ್ಲಿಸಬಹುದು. ಮೊದಲು ಅರ್ಜಿ ಸಲ್ಲಿಸದವರನ್ನು ಸಹಾಯಧನಕ್ಕಾಗಿ ಪರಿಗಣಿಸಲಾಗುವುದು ಎಂದು ಹರಿಯಾಣ ಸರ್ಕಾರ ತಿಳಿಸಿದೆ. ಯೋಜನೆ, ಸಹಾಯಧನ ಹಾಗೂ ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ರೈತರು ಜಿಲ್ಲಾ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಸಹಾಯವಾಣಿ ಸಂಖ್ಯೆ 1800 180 2021ಗೆ ಕರೆ ಮಾಡಿ ವಿಚಾರಿಸಬಹುದು ಎಂದು ತಿಳಿಸಲಾಗಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications