ನಿರಂತರ ವಿದ್ಯುತ್ ಪೂರೈಕೆ ಸಾಧ್ಯವಿಲ್ಲ: ಬಿಎಸ್ ವೈ
ಸಾಗರ,
ಫೆ. 8:ಸೋಮವಾರ ನಗರದ ಕೋಟೆ ಮಾರಿಕಾಂಬ ದೇವಾಲಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯದಲ್ಲಿ ನಿರಂತರ ವಿದ್ಯುತ್ ಪೂರೈಕೆ ಸಾಧ್ಯವಿಲ್ಲ.ನಮ್ಮ ಸರ್ಕಾರ ಈ ಬಗ್ಗೆ ಆಶ್ವಾಸನೆ ನೀಡಿಲ್ಲ ಎಂದರು. ದಂಡಾವತಿ ನೀರಾವರಿ ಯೋಜನೆಗೆ ಶೀಘ್ರವೇ ಚಾಲನೆ ನೀಡಲಾಗುವುದು, ಭೂಮಿ ಕಳೆದುಕೊಳ್ಳುವ ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಹೇಳಿದರು. id="toptextpromo">ಈಗಾಗಲೇ
240ಯೂನಿಟ್ ವಿದ್ಯುತ್ ಅನ್ನು ಹೊರರಾಜ್ಯದಿಂದ ಖರೀದಿ ಮಾಡಲಾಗಿದೆ. ರಾಜ್ಯದಲ್ಲಿ ಕೊರತೆ ಇರುವ ವಿದ್ಯುತ್ ಅಭಾವ ನೀಗಿಸಲು ಸುಧಾರಣೆ ಮಾಡಲು ಪ್ರಯತ್ನ ಮಾಡುವುದಾಗಿ ಭರವಸೆ ನೀಡಲಾಗಿದೆ. ಆದರೆ,ನಿರಂತರ ವಿದ್ಯುತ್ ನೀಡುತ್ತೇವೆ.ಭಾಗ್ಯಜ್ಯೋತಿ ಯೋಜನೆ ಜಾರಿಗೆ ಸರ್ವ ಪ್ರಯತ್ನವಂತೂ ನಡೆದಿದೆ ಎಂದರು. id='are-slot-1' class='oiad oi-axt oiadv'> id='top-searched-articles'>ಇಂಧನ
ಖಾತೆ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಕೂಡ ವಿದ್ಯುತ್ ಅಭಾವ ನೀಗಿಸಲು ಸಾಕಷ್ಟು ಶ್ರಮಿಸಿದ್ದರು. ಆ ನಿಟ್ಟಿನಲ್ಲಿಯೇ ವಿದ್ಯುತ್ ಕೊರತೆ ನೀಗಿಸಲು ತಾನು ಕೂಡ ಮುಂದುವರಿಯುತ್ತಿರುವುದಾಗಿ ಇಂಧನ ಖಾತೆಯ ಹೊಣೆ ಹೊತ್ತಿರುವ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.











Click it and Unblock the Notifications