ರೈತರಿಗೆ ಸಿಹಿ ಸುದ್ದಿ: ಕಬ್ಬು ಬೆಳೆಗಾರರಿಗೆ ಟನ್‌ಗೆ 100 ರೂ. ಮೊಲ್ಯಾಸಿಸ್ ಲಾಭ ನೀಡಲು ಸರ್ಕಾರ ಆದೇಶ
ಬೆಂಗಳೂರು, ಡಿಸೆಂಬರ್ 30: ಕಬ್ಬಿನಿಂದ ಉತ್ಪಾದನೆಯಾಗುವ ಎಥೆನಾಲ್‌ನಿಂದ ಬರುವ ಲಾಭಾಂಶದಲ್ಲಿ 50 ರೂ. ನೀಡಲು ಮನಸ್ಸು ಮಾಡಿದ್ದ ರಾಜ್ಯ ಸರ್ಕಾರ ಇದೀಗ ಕಬ್ಬು ಬೆಳೆಗಾರರಿಗೆ ಹೊಸ ವರ್ಷಕ್ಕೆ ಮತ್ತೊಂದು ಕೊಡುಗೆ ನೀಡಿ ಆದೇಶ ಹೊರಡಿಸಿದೆ.
ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರ ಮೊಲ್ಯಾಸಿಸ್‌ನಿಂದ ಬರುವ ಲಾಭಾಂಶದಲ್ಲಿ ರೈತರಿಗೆ ಪ್ರತಿ ಮೆಟ್ರಿಕ್ ಟನ್‌ಗೆ 100 ರೂಪಾಯಿ ಹೆಚ್ಚು ಪಾವತಿಸಲು ಆದೇಶಿಸಿದೆ. ಈ ಮೂಲಕ ರಾಜ್ಯದ ಕಬ್ಬು ಬೆಳೆಗಾರರಿಗೆ 2023ರ ಹೊಸವರ್ಷಕ್ಕೆ ವಿಶೇಷ ಕೊಡುಗೆ ನೀಡಿದೆ ಎನ್ನಬಹುದು. ಈ ಹಿಂದೆ ಎಥೆನಾಲ್‌ನಿಂದ ಬರುವ ಲಾಭಾಂಶದಲ್ಲಿ 50 ರೂ.ಗಳಂತೆ ಒಟ್ಟು ಎಥೆನಾಲ್‌ನಿಂದ 204 ಕೋಟಿ ರೂ.ಹಣವನ್ನು ಬೆಳಗಾರರಿಗೇ ನೀಡಲು ಸರ್ಕಾರ ಆದೇಶಿಸಿತ್ತು.
ಹೌದು. ಮೊಲ್ಯಾಸಿಸ್ ಮಾರಾಟದಿಂದ ಕಾರ್ಖಾನೆಗಳಿಗೆ ಬರುವ ಲಾಭಾಂಶವನ್ನು ರೈತರಿಗೆ ವರ್ಗಾಯಿಸಲು ಸಕ್ಕರೆ ಕಾರ್ಖಾನೆಗಳಿಗೆ ರಾಜ್ಯ ಸರ್ಕಾರ ಇಂದು(ಡಿಸೆಂಬರ್ 29) ಆದೇಶ ಹೊರಡಿಸಿದೆ. ಕಬ್ಬಿನ ಉಪ ಉತ್ಪನ್ನಗಳಾದ ಎಥೆನಾಲ್ ಮತ್ತು ಮೊಲ್ಯಾಸಿಸ್ ಮೂಲಕ ಒಟ್ಟಾರೆ ಈ ಸಾಲಿನಲ್ಲಿ ಎಫ್‌ಆರ್‌ಪಿ ದರ ಹೊರತುಪಡಿಸಿ, ಕಬ್ಬು ಬೆಳೆಗಾರರಿಗೆ ಒಟ್ಟು 804 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಪಾವತಿಸಲು ಈವರೆಗೆ ಆದೇಶಿಸಲಾಗಿದೆ.

ರೈತರ ಬೇಡಿಕೆ ಆಗಿರುವ ಎಫ್‌ಆರ್‌ಪಿ (ನ್ಯಾಯಸಮ್ಮತ ಮತ್ತು ಪ್ರೋತ್ಸಾಹದಾಯಕ ಬೆಲೆ) ದರ ಹೊರತುಪಡಿಸಿ, ಪ್ರತಿ ಮೆಟ್ರಿಕ್ ಟನ್‌ಗೆ 100 ರೂಪಾಯಿ ಹೆಚ್ಚು ಪಾವತಿಸಲು ಕಾರ್ಖಾನೆಗಳಿಗೆ ಆದೇಶದಡಿ ಸೂಚಿಸಲಾಗಿದೆ. ಈ ಮೂಲಕ ರಾಜ್ಯದ ಕಬ್ಬು ಬೆಳೆಗಾರರಿಗೆ 622 ಕೋಟಿ ರೂ. ಹೆಚ್ಚುವರಿಯಾಗಿ ಸಂದಾಯವಾಗಲಿದೆ ಎಂದು ಸರ್ಕಾರ ಹೇಳಿದೆ.

ಪ್ರತಿಭಟನೆ ಮಾಡಿದ್ದ ರೈತರು
ರಾಜ್ಯದಲ್ಲಿ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರಲ್ಲಿ ಕಬ್ಬು ಬೆಳೆಗಾರರು ಸಹ ಇದ್ದಾರೆ. ಈ ವರ್ಷ ರೈತರು ಚೇತರಿಸಿಕೊಂಡರು ಎನ್ನುವಷ್ಟರಲ್ಲಿ ಹವಾಮನಾ ಬದಲಾವಣೆಗಳಿಂದ ಅಕಾಲಿಕ ಮಳೆ ಸುರಿದು ಗಾಯದ ಮೇಲೆ ಬರೆ ಎಳೆಯಿತು. ನೆರೆಯಿಂದ ಕೃಷಿ ಹಾನಿಯಾಗಿ ಸಂಕಷ್ಟದಲ್ಲಿ ಸಿಲುಕಿರುವ ರೈತರಿಗೆ ವಾಣಿಜ್ಯ ಬೆಳೆ ಕಬ್ಬು ಸಹ ಲಾಭದಾಯಕವಾಗಲಿಲ್ಲ ಎಂಬ ಕೊರಗು ಬೆಳೆಗಾರರಲ್ಲಿದೆ. ಹೀಗಾಗಿಯೇ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡಿದ್ದರು. ಕಬ್ಬಿಗೆ ಬಂದಿರುವ ಮುಪ್ಪು ಕಾಯಿಲೆ ಆತಂಕಕ್ಕೆ ದೂಡಿತ್ತು. ಕಬ್ಬಿಗೆ ಬೆಂಬಲ ಬೆಲೆ, ಉಪ ಉತ್ಪನ್ನಗಳ ಲಾಭಾಂಶ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹೋರಾಟ ನಡೆಸಿದ್ದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್












Click it and Unblock the Notifications