ತೋಟಗಾರಿಕೆ ಇಲಾಖೆಯಿಂದ ಭರ್ಜರಿ ಗುಡ್‌ನ್ಯೂಸ್!
ಹುಬ್ಬಳ್ಳಿ ಮೇ.20: 2025-26ನೇ ಸಾಲಿನ ಹುಬ್ಬಳ್ಳಿ ತಾಲ್ಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ), ಯಂತ್ರೋಪಕರಣ ಯೋಜನೆಗಳಡಿಯಲ್ಲಿ ಅರ್ಹ ಫಲಾನುಭವಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಹಣ್ಣು(ಬಾಳೆ), ಹೈಬ್ರಿಡ್ ತಕಾರಿಗಳ ಪ್ರದೇಶ ವಿಸ್ತರಣೆ ಮತ್ತು ಹೂವು ಪ್ರದೇಶ ವಿಸ್ತರಣೆ (ಕತ್ತರಿಸಿದ ಹೂ, ಗಡ್ಡೆ ಜಾತಿಯ ಹೂ, ಬಿಡಿ ಹೂ) ವೈಯಕ್ತಿಕ ಕೃಷಿಹೊಂಡ, ಸಣ್ಣ ಟ್ರ್ಯಾಕ್ಟರ್ ಪಾಲಿಹೌಸ್, ನೆರಳು ಪರದೆ, ಈರುಳ್ಳಿ ಶೇಖರಣಾ ಘಟಕ, ಎರೆಹುಳು ಘಟಕ, ಜೇನುಪೆಟ್ಟಿಗೆ, ಪ್ಲಾಸ್ಟಿಕ್ ಮಲ್ಚಿಂಗ್, ಮಾವು ಪುನಃಶ್ಚೇತನ, ಪವರ್ ಟಿಲ್ಲರ್ ಹಾಗೂ ತಳ್ಳುವ ಗಾಡಿ ಘಟಕಗಳಿಗೆ ರೈತರಿಗೆ ಸಹಾಯಧನ ಸೌಲಭ್ಯಗಳಿರುತ್ತವೆ.

ಹನಿ ನೀರಾವರಿ ಯೋಜನೆಯಡಿ ಹಣ್ಣು ಮತ್ತು ತರಕಾರಿ ಬೆಳೆಗಳಿಗೆ ಹನಿ ನೀರಾವರಿ ಸಹಾಯಧನ ಸೌಲಭ್ಯ ಇರುತ್ತದೆ. ಯಂತ್ರೋಪಕರಣಗಳ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿದ ಯಂತ್ರೋಪಕರಣಗಳಿಗೆ ಸಹಾಯಧನ ಸೌಲಭ್ಯ ಇರುತ್ತದೆ. ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ರೈತರು ಸ್ವಂತ ಜಮೀನು ಮತ್ತು ನೀರಾವರಿ ಸೌಲಭ್ಯ ಹೊಂದಿರಬೇಕು. ಆಧಾರ ಕಾರ್ಡ್, ಮತದಾರರ ಗುರುತಿನ ಚೀಟಿ, ಗಣಕೀಕೃತ ಬೆಳೆ ದೃಢೀಕರಣ ಪತ್ರ ಹಾಗೂ ರಾಷ್ಟ್ರೀಕೃತ ಬ್ಯಾಂಕಗಳ ಪಾಸ್ ಬುಕ್ ಗಳನ್ನು ಹೊಂದಿರಬೇಕು. (ಎಫ್ಐಡಿ ಸಂಖ್ಯೆ ಹೊಂದಿರಬೇಕು) ಪರಿಶಿಷ್ಟ ಜಾತಿ 17%, ಪರಿಶಿಷ್ಟ ಪಂಗಡ 7%, ಮಹಿಳೆ 33%, ಅಲ್ಪಸಂಖ್ಯಾತರು 5 % ಹಾಗೂ ಅಂಗವಿಕಲರಿಗೆ ಶೇ.3 ರಂತೆ ಮೀಸಲಾತಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಲಾಗಿದೆ.
ಜೂನ್ 6 ರ ಒಳಗೆ ಅರ್ಜಿಯನ್ನು ಸಹಾಯಕ ತೋಟಗಾರಿಕೆ ಅಧಿಕಾರಿ, ರೈತ ಸಂಪರ್ಕ ಕೇಂದ್ರ, ಹುಬ್ಬಳ್ಳಿ, (ಮೊ.ನಂ.9740164868) ಸಹಾಯಕ ತೋಟಗಾರಿಕೆ ಅಧಿಕಾರಿ, ರೈತ ಸಂಪರ್ಕ ಕೇಂದ್ರ, ಛಬ್ಬಿ, (ಮೊ.ನಂ.9164126426) ಸಹಾಯಕ ತೋಟಗಾರಿಕೆ ಅಧಿಕಾರಿ, ರೈತ ಸಂಪರ್ಕ ಕೇಂದ್ರ, ಶಿರಗುಪ್ಪಿ (ಮೊ.ನಂ. 9663474155) ಸಂಪರ್ಕಿಸಿ ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಲ್ಲಿಸುವಂತೆ ಹುಬ್ಬಳ್ಳಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಅಜಿತಕುಮಾರ ಎಸ್. ಮಶಾಲ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಟಿಟಿಸಿ-ಟೂಲರೂಮ್: ತಾಂತ್ರಿಕ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ
ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಹತ್ತನೇ ತರಗತಿ ಉತ್ತೀರ್ಣ ಮತ್ತು ಅನುತ್ತೀರ್ಣರಾದ ಯುವಕರಿಗೆ 'ಟೂಲರೂಮ್ ಮಶಿನಿಸ್ಟ್' ತಾಂತ್ರಿಕ ವೃತ್ತಿ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ತರಬೇತಿ ಹೊಂದಿದ ಅಭ್ಯರ್ಥಿಗಳಿಗೆ ಕೈಗಾರಿಕೆಗಳಲ್ಲಿ ಹೆಚ್ಚಿನ ಬೇಡಿಕೆಯಿರುತ್ತದೆ. ಒಂದೇ ಕೋರ್ಸಿನಲ್ಲಿ ಟರ್ನರ್, ಮಿಲ್ಲರ್, ಸಿಎನ್‌ಸಿ, ಕ್ಯಾಡ್-ಕ್ಯಾಮ್ ಮತ್ತುಟೂಲ್‌ಆಂಡ್‌ಡೈ ಮೇಕಿಂಗ್ ಟ್ರೇಡ್‌ಗಳಲ್ಲಿ ಆನ್ ದಿ ಜಾಬ್ ತರಬೇತಿ ನೀಡುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಉದ್ಯೋಗಾವಕಾಶಗಳು ದೊರಕುತ್ತವೆ. ಜೊತೆಗೆ ಅಟೊಕ್ಯಾಡ್, ಕನ್ನಡ ಮತ್ತು ಇಂಗ್ಲಿಷ್ ಭಾಷಾ ಕೌಶಲ್ಯ ಹಾಗೂ ಉದ್ಯೋಗ ಕೌಶಲ್ಯಗಳನ್ನು ಕಲಿಸಲಾಗುತ್ತದೆ.
ಜಿಟಿಟಿಸಿ ಸಂಸ್ಥೆಯು ಉನ್ನತ ತಂತ್ರಜ್ಞಾನ ಮತ್ತು ತರಬೇತಿ ಸೌಲಭ್ಯಗಳನ್ನು ಅಳವಡಿಸಿಕೊಂಡಿದ್ದು, ಕೈಗಾರಿಕೆಗಳಲ್ಲಿ ಅನುಭವ ಹೊಂದಿದ ಶಿಕ್ಷಕರನ್ನು ಹೊಂದಿದೆ. ತರಬೇತಿಯ ನಂತರ ವಿದ್ಯಾರ್ಥಿಗಳಿಗೆ ಟೂಲಿಂಗ್, ವಿಮಾನ ತಯಾರಿಕೆ, ಮತ್ತು ಅಟೊಮೊಬೈಲ್ ವಲಯಗಳ ಪ್ರತಿಷ್ಠಿತ ಕೈಗಾರಿಕೆಗಳಲ್ಲಿ ಉದ್ಯೋಗ ದೊರಕಿಸಿ ಕೊಡಲಾಗುವುದು. ಕಳೆದ ವರ್ಷ ಜಿಟಿಟಿಸಿಯಲ್ಲಿ ತರಬೇತಿ ಪಡೆದ ಎಲ್ಲ ಅಭ್ಯರ್ಥಿಗಳು ಕ್ಯಾಂಪಸ್ ಸಂದರ್ಶನದ ಮೂಲಕ ಏರೋಸ್ಪೇಸ್ ಉತ್ಪಾದನೆ ಮತ್ತು ಟೂಲರೂಮ್ ಕೈಗಾರಿಕೆಗಳಲ್ಲಿ ನೇಮಕಾತಿ ಹೊಂದಿರುತ್ತಾರೆ.
ಆಸಕ್ತ ಅಭ್ಯರ್ಥಿಗಳು ಮೇ. 30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ತರಬೇತಿಗಳು ಜೂನ್ 2 ರಿಂದ ಪ್ರಾರಂಭವಾಗಲಿವೆ. ಆಸಕ್ತ ಅಭ್ಯರ್ಥಿಗಳು ಹುಬ್ಬಳ್ಳಿ ಮತ್ತು ನರಗುಂದ ಕೇಂದ್ರಗಳಿಗೆ ಭೇಟಿ ನೀಡಿ ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಜಿಟಿಟಿಸಿ, ಗೋಕುಲ ರಸ್ತೆ, ಹುಬ್ಬಳ್ಳಿ ಕಚೇರಿ ಅಥವಾ ದೂರವಾಣಿ 8183860552, 9902101010 ಮತ್ತು ಜಿಟಿಟಿಸಿ, ಅಳಗವಾಡಿ ರಸ್ತೆ, ನರಗುಂದ ಕಚೇರಿ ಅಥವಾ ದೂರವಾಣಿ 8088536896 ಸಂಪರ್ಕಿಸಬಹುದು ಎಂದು ಹೇಳಲಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications