ಕೊಪ್ಪಳದಲ್ಲಿ ಪೇರಲ ಬೆಳೆ ಸಂಸ್ಕರಣೆ ಕ್ಲಸ್ಟರ್ ಸ್ಥಾಪನೆ
ಕೊಪ್ಪಳ, ಮಾರ್ಚ್ 02: ಕರ್ನಾಟಕ ತೋಟಗಾರಿಕೆ ಇಲಾಖೆ ವತಿಯಿಂದ ಕೊಪ್ಪಳ ಜಿಲ್ಲೆಗೆ 'ಒಂದು ಜಿಲ್ಲೆ ಒಂದು ಬೆಳೆ' ಯೋಜನೆಯಡಿ ಪೇರಲ ಬೆಳೆಯನ್ನು ಆಯ್ಕೆ ಮಾಡಲಾಗಿದೆ. ಜಿಲ್ಲೆಯಲ್ಲಿ ಪೇರಲ ಬೆಳೆಯುವ ಕ್ಷೇತ್ರವನ್ನು ಆಧರಿಸಿ ಈ ಬೆಳೆಯನ್ನು ನಿರ್ಧರಿಸಲಾಗಿದೆ.
ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಚಿವ ಆರ್. ಶಂಕರ್ ಪೇರಲ ಬೆಳೆಗೆ ಸಂಬಂಧಿಸಿದಂತೆ ಕೊಪ್ಪಳ ಪೇರಲ ಲಾಂಛನವನ್ನು, ಪೇರಲ ಬೆಳೆ ಕುರಿತ ತಾಂತ್ರಿಕ ಕೈಪಿಡಿಯನ್ನು, ಕೊಪ್ಪಳ ಪೇರಲ ಬಾಕ್ಸ್ ಬಿಡುಗಡೆ ಮಾಡಿದ್ದಾರೆ.
ಮಾಧ್ಯಮ ಜೊತೆ ಮಾತನಾಡಿದ ಸಚಿವರು, "ರೈತರು ಬೆಳೆದ ಬೆಳೆಗೆ ಉತ್ತಮ ವೇದಿಕೆ, ಮಾರುಕಟ್ಟೆ ಒದಗಿಸುವುದು ಇಲಾಖೆಯ ಉದ್ದೇಶವಾಗಿದೆ. ಒಂದು ಜಿಲ್ಲೆ ಒಂದು ಬೆಳೆ ಯೋಜನೆಯಡಿ ಆಯ್ಕೆಯಾದ ಬೆಳೆಗೆ ಸಾಮಾನ್ಯ ಮೂಲಭೂತ ಸೌಕರ್ಯ, ಬ್ರಾಂಡಿಂಗ್, ಸಂಸ್ಕರಣೆ ಮತ್ತು ರಫ್ತು ಮಾರುಕಟ್ಟೆ ಕುರಿತು ರೈತರಿಗೆ ತರಬೇತಿ ನೀಡಲಾಗುತ್ತಿದೆ" ಎಂದು ಹೇಳಿದರು.

"ರೈತರು ಬೆಳೆಯುವ ಯಾವುದೇ ಬೆಳೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸಲು ರಾಜ್ಯದಲ್ಲಿ ಒಟ್ಟು 715 ಕೃಷಿ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳಲ್ಲಿ ರೈತರು ತಮಗೆ ಬೇಕಾದ ಬೆಳೆ, ಬ್ಯಾಂಕ್ ಸಹಾಯ, ಸರ್ಕಾರದ ಸೌಲಭ್ಯ, ಸಬ್ಸಿಡಿ ಮುಂತಾದ ವಿಷಯಗಳ ಕುರಿತು ಮಾಹಿತಿ ಪಡೆಯಬಹುದು" ಎಂದು ಸಚಿವರು ವಿವರಣೆ ನೀಡಿದರು.
"ಕೊಪ್ಪಳ ಜಿಲ್ಲೆಯ ಬಸಾಪುರ ಕೈಗಾರಿಕಾ ವಲಯದಲ್ಲಿ ಪೇರಲ ಬೆಳೆಯ ಸಂಸ್ಕರಣೆ ಕ್ಲಸ್ಟರ್ ಅನ್ನು ಸ್ಥಾಪಿಸಲು ಜಿಲ್ಲಾಧಿಕಾರಿಗಳು ಯೋಜನೆ ರೂಪಿಸಿದ್ದಾರೆ. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು" ಎಂದು ಸಚಿವರು ಭರವಸೆ ನೀಡಿದರು.

ಕೊಪ್ಪಳ ಜಿಲ್ಲೆಯ 4 ತಾಲೂಕಿಗಳಲ್ಲಿ 700 ಹೆಕ್ಟೇರ್ ಪ್ರದೇಶದಲ್ಲಿ ಪೇರಲ ಬೆಳೆಯನ್ನು ಬೆಳೆಯಲಾಗುತ್ತಿದೆ. ಒಟ್ಟು ಮೂರು ಸಾವಿರ ಹೆಕ್ಟೆರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ. ಇತರೆ ಬೆಳೆಗಳಿಗಿಂತ ಪೇರಲ ಬೆಳೆ ಕೃಷಿಯು ಕಡಿಮೆ ವೆಚ್ಚದ್ದಾಗಿದೆ.
ಪೇರಲ ಬೆಳೆಗೆ ರೋಗಗಳು ಬಾಧಿಸುವುದು ಕಡಿಮೆ ಹಾಗೂ ನಿರ್ವಹಣಾ ವೆಚ್ಚವೂ ಸಹ ಕಡಿಮೆ. ಪೇರಲ ಬೆಳೆಯಲ್ಲಿ ಅಲಹಾಬಾದ್ ಸಫೇದ್, ಬನಾರಸಿ, ನಾಸಿಕ್ ಸೀಬೆ, ಲಕ್ನೋ 49 ಅರ್ಕಾಕಿರಣ್ ಪ್ರಮುಖ ತಳಿಗಳಾಗಿವೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications