ಚಾಮರಾಜನಗರದಲ್ಲಿ ಹಸಿರು ಹಬ್ಬ ಕಾರ್ಯಕ್ರಮ

ಚಾಮರಾಜನಗರ, ಮಾ.7: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಇತರ ಅಭಿವೃದ್ಧಿ ಇಲಾಖೆಗಳಾದ ತೋಟಗಾರಿಕೆ, ರೇಷ್ಮೆ, ಅರಣ್ಯ, ಪಶುಸಂಗೋಪನೆ, ಜಲಾನಯನ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಕೃಷಿ ವಿಜ್ಞಾನ ಕೇಂದ್ರ ಇವರ ಸಹಯೋಗದೊಂದಿಗೆ ಸಮೂಹ ಜಾಗೃತಿ ಕಾರ್ಯಕ್ರಮಗಳು ರೈತರಿಗೆ ಸಂದೇಶಗಳನ್ನು ನೇರವಾಗಿ ತಲುಪಿಸುವ ಅಂಗವಾಗಿ 2009ರ ಮಾರ್ಚಿ 7ರಂದು ಬೆಳಿಗ್ಗೆ 11ಗಂಟೆಗೆ ಚಾಮರಾಜನಗರ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಹಸಿರು ಹಬ್ಬ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಹಸಿರು ಹಬ್ಬ ಕಾರ್ಯಕ್ರಮವನ್ನು ಚಾಮರಾಜನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಜಯರಾಂ ಅವರು ಉದ್ಘಾಟಿಸುವರು. ಚಾಮರಾಜನಗರ ಜಿಲ್ಲಾಧಿಕಾರಿ ಮನೋಜ್‌ಕುಮಾರ್ ಮೀನಾ ಅಧ್ಯಕ್ಷತೆ ವಹಿಸಲಿದ್ದಾರೆ.

ಸದರಿ ದಿನದಂದು ವಿವಿಧ ಇಲಾಖೆಗಳ ಪ್ರಗತಿ ಕಾರ್ಯಕ್ರಮಗಳ ವಸ್ತುಪ್ರದರ್ಶನ, ವಿಚಾರಗೋಷ್ಠಿಗಳು, ವಿಚಾರ ವಿನಿಮಯ, ರೈತರೊಂದಿಗೆ ಸಂವಾದ ಕಾರ್ಯಕ್ರಮಗಳು ನಡೆಯಲಿವೆ. ಸದರಿ ಕಾರ್ಯಕ್ರಮಕ್ಕೆ ಸಾರ್ವಜನಿಕರು/ರೈತರು/ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಅಮೂಲ್ಯವಾದ ಸಲಹೆ ಮತ್ತು ಅಭಿಪ್ರಾಯ ನೀಡಿ ಕೃಷಿಯಲ್ಲಿ ಹೆಚ್ಚಿನ ಉತ್ಪಾದನೆ ಮಾಡಿ ತನ್ಮೂಲಕ ರಾಷ್ಟ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ನೆರವಾಗಬೇಕಾಗಿ ಚಾಮರಾಜನಗರ ಸಹಾಯಕ ಕೃಷಿ ನಿರ್ದೇಶಕರು ಕೋರಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+