ಬಿಜೆಪಿ ಪಾದಯಾತ್ರೆಯನ್ನು ಸ್ವಾಗತಿಸಿದ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಜುಲೈ 26 : ಕರ್ನಾಟಕದಲ್ಲಿ ರೈತರ ಸಾಲ ಮನ್ನಾ ವಿಚಾರದಲ್ಲಿ ರಾಜಕೀಯ ನಡೆಯುತ್ತಿದೆ. ಪ್ರತಿಪಕ್ಷ ಬಿಜೆಪಿ ಸಂಪೂರ್ಣ ಸಾಲಮನ್ನಾ ಮಾಡುವಂತೆ ಒತ್ತಾಯಿಸಿ ರಾಮನಗರದಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸುತ್ತಿದೆ.
ಬಿಜೆಪಿ ಪಾದಯಾತ್ರೆ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗುರುವಾರ ಪ್ರತಿಕ್ರಿಯೆ ನೀಡಿದ್ದು, 'ಬಿಜೆಪಿ ಪಾದಯಾತ್ರೆಯನ್ನು ಸ್ವಾಗತಿಸುತ್ತೇನೆ. ಕನಿಷ್ಠ ಪಕ್ಷ ರೈತರ ಪರವಾಗಿ ಹೋರಾಟ ಮಾಡುತ್ತಿದ್ದಾರೆ. ನಾನು ರೈತರ ಸಾಲ ಮನ್ನಾ ಮಾಡಿದ್ದೇನೆ. ಅದಕ್ಕಾಗಿ ಅವರು ನನ್ನನ್ನು ಅಭಿನಂದಿಸಬೇಕು' ಎಂದರು.

ಕರ್ನಾಟಕ ಬಿಜೆಪಿ ಗುರುವಾರ ಕುಮಾರಸ್ವಾಮಿ ಅವರ ತವರು ಜಿಲ್ಲೆ ರಾಮನಗರದಿಂದ ಬೆಂಗಳೂರಿನ ತನಕ ಪಾದಯಾತ್ರೆ ಆರಂಭಿಸಿದೆ. ಒಟ್ಟು ಮೂರು ದಿನಗಳ ಕಾಲ ಪಾದಯಾತ್ರೆ ನಡೆಯಲಿದ್ದು, 48 ಕಿ.ಮೀ. ಪಾದಯಾತ್ರೆಯಲ್ಲಿ ಸುಮಾರು 3 ಸಾವಿರ ರೈತರು ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ಮೊದಲ ಬಜೆಟ್ನಲ್ಲಿ ಅವರು ರೈತರ 34 ಸಾವಿರ ಕೋಟಿ ಬೆಳೆ ಸಾಲ ಮನ್ನಾ ಮಾಡಿದ್ದರು. ಬಳಿಕ 10,700 ಕೋಟಿ ಸಾಲ ಮನ್ನಾಡಿದ್ದರು. ಒಟ್ಟು 44,700 ಕೋಟಿ ಸಾಲವನ್ನು ಮಾಡಿದ್ದಾರೆ.
ಆದರೆ, ಕರ್ನಾಟಕ ಬಿಜೆಪಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿ ಎಂದು ಪಾದಯಾತ್ರೆ ನಡೆಸುತ್ತಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಾದಯಾತ್ರೆಗೆ ಗೈರಾಗಿದ್ದು, ಅವರು ಚಿಕಿತ್ಸೆಗಾಗಿ ಜಿಂದಾಲ್ಗೆ ದಾಖಲಾಗಿದ್ದಾರೆ.
-
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications