ಚಿಕ್ಕಮಗಳೂರಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆಗಳನ್ನು ನುಂಗಿದ ಮಳೆರಾಯ, ಅನ್ನದಾತ ಕಾಂಗಾಲು
ಚಿಕ್ಕಮಗಳೂರು, ಮೇ, 12: ಈಗಾಗಲೇ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಅದೇ ರೀತಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆರಾಯ ಅವಾಂತರವನ್ನೇ ಸೃಷ್ಟಿಸಿದ್ದಾನೆ. ಧಾರಾಕಾರವಾಗಿ ಸುರಿದ ಮಳೆಯಿಂದ ಹಳ್ಳ ತುಂಬಿ ಹರಿದ ಪರಿಣಾಮ ಬೀರನಹಳ್ಳಿ ಅಜ್ಜನಹಟ್ಟಿ ಗ್ರಾಮಕ್ಕೆ ಸಂಪರ್ಕಿಸುವ ಸೇತುವೆ ಮುಳುಗಡೆ ಆಗಿದೆ. ಮತ್ತೊಂದೆಡೆ ಲಕ್ಷಾಂತರ ಮೌಲ್ಯದ ಬೆಳೆ ನಾಶ ಆದ ಘಟನೆಯು ನಡೆದಿದೆ.
ಇದು ಹತ್ತಕ್ಕೂ ಅಧಿಕ ಗ್ರಾಮಗಳಿಗೆ ಸಂಪರ್ಕಿಸುವ ಸೇತುವೆ ಆಗಿದ್ದು, ಸೇತುವೆ ಮುಳುಬಡೆಯಿಂದ ಇಲ್ಲಿನ ಗ್ರಾಮಸ್ಥರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಷ್ಟೇ ಅಲ್ಲದೆ ಮಳೆರಾಯನ ಆರ್ಭಟದಿಂದ ಬೀರನಹಳ್ಳಿಯ ಹಲವು ಜಮೀನುಗಳಿಗೆ ನೀರು ನುಗ್ಗಿದ್ದು, ಲಕ್ಷಾಂತರ ಮೌಲ್ಯದ ಅಡಿಕೆ, ಟೊಮೆಟೋ ಬೆಳೆ ನಾಶ ಆಗಿವೆ. ಇನ್ನು ಬೆಳೆಗಳನ್ನು ಕಳೆದುಕೊಂಡ ರೈತರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.

ಕಡೂರು ತಾಲೂಕಿನ ಸಖರಾಯಪಟ್ಟಣ ಬೀರನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿನ್ನೆ ಸಂಜೆಯಿಂದ ಆರಂಭವಾಗಿರುವ ಧಾರಾಕಾರ ಮಳೆ, ಇಂದು ಸಹ ಮುಂದುವರೆದಿದೆ ಎನ್ನುವ ಮಾಹಿತಿ ಭ್ಯವಾಗಿದೆ.
ಇಂದು ಈ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ
ಹಾಗೆಯೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಹಲವು ಲ್ಲೆಗಳಲ್ಲಿ ನಿನ್ನೆ ಭಾರಿ ಮಳೆ ಸುರಿದಿದೆ. ಬೆಂಗಳೂರಿನಲ್ಲಿ ತಡರಾತ್ರಿ ಗುಡುಗು ಸಹಿತ ಮಳೆಯಾಗಿದೆ. ಅಲ್ಲದೆ ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ನೀಡಿದೆ.
ಅದರಲ್ಲೂ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ. ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆ ಸುರಿಯುವ ಸಾಧ್ಯೆತ ಇದೆ ಎಂದು ತಿಳಿಸಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇನ್ನೂ ಎರಡು ದಿನಗಳ ಕಾಲ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಕೂಡಿದ ಭಾರಿ ಮಳೆ ಆಗಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದ ಎಂದು ಸೂಚನೆ ನೀಡಿದೆ.
ನಿನ್ನೆ ಸಂಜೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಿತ್ತು. ಇಂದು ಕೂಡ ಕರಾವಳಿಯ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹಾಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ತಿಳಿಸಿದೆ.
ಇನ್ನು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಒಣಹವೆ ಮುಂದುವರಿಯಲಿದ್ದು, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳಲಿದೆ. ಹಾಗೆಯೆ ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಮಾಹಿತಿ ನೀಡಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಕೂಡ ಗುಡುಗು, ಮಿಂಚು ಸಹಿತ ಮಳೆ ಆರ್ಭಟಿಸುವ ಸಾಧ್ಯೆತೆ ಇದೆ. ಮತ್ತೊಂದೆಡೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮತ್ತೊಂದೆಡೆ ಬಳ್ಳಾರಿ, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ಮೋಚಾ ಚಂಡಮಾಡುತ ಪರಿಣಾಮ ರಾಜ್ಯದ ವಿವಿಧ ಭಾಗಗಗಳಲ್ಲಿ ಭಾರಿ ಮಳೆ ಬೀಳುವ ನಿರೀಕ್ಷೆಯಿದೆ. ಅದರಲ್ಲೂ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಎಂದು ಮಾಹಿತಿ ನೀಡಿದೆ. ಒಟ್ಟಾರೆಯಾಗಿ ನಾಲ್ಕು ದಿನಗಳ ಕಾಲ ರಾಜಧಾನಿ ಬೆಂಗಳೂರಿನಲ್ಲಿ ಮಳೆರಾಯ ಬಿಡುವು ನೀಡಿದ್ದ. ಆದರೆ ನಿನ್ನೆ ತಡರಾತ್ರಿ ನಗರದಲ್ಲಿ ಗುಡುಗು, ಮಿಂಚು ಸಹಿತ ಮಳೆ ಬಿದ್ದಿದೆ. ಹಾಗೆಯೆ ಇಂದು ಬೆಳಗ್ಗೆ ಬಿಸಿಲಿನ ವಾತಾವರಣ ಇದ್ದು, ಮತ್ತೆ ಸಂಜೆ ಮಳೆರಾಯನ ಅಟ್ಟಹಾಸ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.












Click it and Unblock the Notifications