ತೋಟಗಾರಿಕಾ ಇಲಾಖೆ ನೇಮಕಾತಿ : ಎಸ್‌ಎಸ್‌ಎಲ್‌ಸಿ ಆದವರು ಅರ್ಜಿ ಹಾಕಿ

ಬೆಂಗಳೂರು, ಫೆಬ್ರವರಿ 27 : ತೋಟಗಾರಿಕಾ ಇಲಾಖೆ ತೋಟಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 7/3/2019 ಕೊನೆಯ ದಿನವಾಗಿದೆ.

ತೋಟಗಾರಿಕಾ ಇಲಾಖೆಯಲ್ಲಿನ ಹೈದ್ರಾಬಾದ್-ಕರ್ನಾಟಕ ಸ್ಥಳೀಯ ವೃಂದ ಮತ್ತು ಹೈದ್ರಾಬಾದ್-ಕರ್ನಾಟಕ ರಾಜ್ಯ ಮಟ್ಟದ ಸ್ಥಳೀಯ ವೃಂದದಡಿ 128 ತೋಟಗಾರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 7/3/2019 ಕೊನೆಯ ದಿನವಾಗಿದೆ. ಅರ್ಜಿ ಶುಲ್ಕವನ್ನು ಪಾವತಿ ಮಾಡಲು 6/3/2019 (ಕಚೇರಿ ವೇಳೆಯಲ್ಲಿ) ಕೊನೆಯ ದಿನವಾಗಿದೆ. ಅಂಚೆ ಅಥವ ಕೋರಿಯರ್ ಮೂಲಕ ಅರ್ಜಿ ಸಲ್ಲಿಸಿದರೆ ಸ್ವೀಕರಿಲಾಗುವುದಿಲ್ಲ.

ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಅಧಿಸೂಚನೆಯಲ್ಲಿ ನೀಡಿರುವ ಸೂಚನೆ, ಅರ್ಹತಾ ಷರತ್ತುಗಳನ್ನು ಕಡ್ಡಾಯವಾಗಿ ಓದಿಕೊಳ್ಳಬೇಕು. ಅಪೂರ್ಣ ಮತ್ತು ಅರ್ಜಿ ಶುಲ್ಕವನ್ನು ಪಾವತಿ ಮಾಡದ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶೈಕ್ಷಣಿಕ ವಿದ್ಯಾರ್ಹತೆ

ಶೈಕ್ಷಣಿಕ ವಿದ್ಯಾರ್ಹತೆ

ತೋಟಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಕೆಳಕಂಡ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತೋಟಗಾರಿಕಾ ಇಲಾಖೆಯಿಂದ ನಡೆಸಲಾಗುವ 10 ತಿಂಗಳ ತೋಟಗಾರಿಕೆ ತರಬೇತಿಯನ್ನು ಪಡೆದಿರಬೇಕು.

ವಯೋಮಿತಿ ವಿವರಗಳು

ವಯೋಮಿತಿ ವಿವರಗಳು

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಕೆಳಕಂಡ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರರಬಾರದು. ಕನಿಷ್ಠ ವಯೋಮಿತಿ 18 ವರ್ಷಗಳು

ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ, ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.

ಅರ್ಜಿ ಶುಲ್ಕಗಳು

ಅರ್ಜಿ ಶುಲ್ಕಗಳು

ಸಾಮಾನ್ಯ ಅಭ್ಯರ್ಥಿಗಳಿಗೆ 300 ರೂ., ಪವರ್ಗ 2(ಎ), 2(ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 150 ರೂ., ಮಾಜಿ ಸೈನಿಕರಿಗೆ 50 ರೂ. ಶುಲ್ಕವನ್ನು ನಿಗದಿ ಪಡಿಸಲಾಗಿದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿ ಹೇಗೆ?

ಶುಲ್ಕ ಪಾವತಿ ಹೇಗೆ?

ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ, ಚಲನ್ ಪ್ರತಿಯನ್ನು ಪಡೆದು ಅಂಚೆ ಕಚೇರಿಯ ಕೆಲಸದ ವೇಳೆಯೊಳಗೆ ಕರ್ನಾಟಕದ ಯಾವುದೇ ಎಲೆಕ್ಟ್ರಾನಿಕ್ ಅಂಚೆ ಕಚೇರಿಯಲ್ಲಿ ಈ ಪೇಮೆಂಟ್ ಮೂಲಕ ಶುಲ್ಕವನ್ನು ಪಾವತಿ ಮಾಡಬೇಕು. (ಡಿಡಿ/ಪೋಸ್ಟಲ್ ಆರ್ಡರ್/ಮನಿ ಆರ್ಡರ್ ಇವುಗಳನ್ನು ಸ್ವೀಕರಿಸುವುದಿಲ್ಲ) ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+