• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಹೂವಿನ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಪರಿಹಾರ: ಅರ್ಜಿ ಆಹ್ವಾನ

|

ಚಿತ್ರದುರ್ಗ, ಮೇ 13: ಮಹಾಮಾರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದೇಶದಲ್ಲಿ ವಿಧಿಸಿದ ಲಾಕ್ ಡೌನ್ ನಿಂದ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿನ ಹೂವಿನ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡುವ ಕಾರ್ಯ ಆರಂಭಗೊಂಡಿದೆ. ಹಾನಿಗೊಳಗಾದ ಹೂ ಬೆಳೆಗಳಿಗೆ ಪ್ರತಿ 01 ಹೆಕ್ಟೇರ್ ಗೆ 25,000 ರೂ. ಗರಿಷ್ಠ ಪರಿಹಾರ ಧನ ನೀಡುವ ಯೋಜನೆಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ಫಲಾನುಭವಿಗೆ 01 ಹೆಕ್ಟೇರ್ ವಿಸ್ತೀರ್ಣಕ್ಕೆ ಮಿತಿಗೊಳಿಸಿ, ಪರಿಹಾರ ಧನ ನೀಡಲಾಗುವುದು. ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದ್ದು, ಮೇ 13 ರಿಂದ 28 ರೊಳಗೆ ಅರ್ಜಿಗಳನ್ನು ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬೇಕು.

ಎತ್ತಿನಹೊಳೆ ಯೋಜನೆಯಿಂದ ವಿವಿ ಸಾಗರಕ್ಕೆ ನೀರು: ರಮೇಶ್ ಜಾರಕಿಹೊಳಿ

ಅರ್ಜಿಗಳನ್ನು ಸಲ್ಲಿಸಬೇಕಾದ ದಾಖಲಾತಿಗಳ ವಿವರ ಇಂತಿದೆ- ಫಲಾನುಭವಿಗಳು ರೈತರಾಗಿದ್ದು (ಆರ್‍ಟಿಸಿ) ಜಮೀನು ಅವರ ಹೆಸರಿನಲ್ಲಿರಬೇಕು ಹಾಗೂ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪಾಸ್ ಬುಕ್ ಜೆರಾಕ್ಸ್ ಪ್ರತಿ ಸಲ್ಲಿಸಬೇಕು. ಜಂಟಿ ಖಾತೆಯಾಗಿದ್ದಲ್ಲಿ ಇತರೆ ಖಾತೆದಾರರ ಒಪ್ಪಿಗೆ ಪತ್ರ ಪಡೆದಿರಬೇಕು (ನೋಟರಿರವರಿಂದ ದೃಢೀಕರಣ ಮಾಡಿಸಿರಬೇಕು), ತಂದೆ ಅಥವಾ ತಾಯಿ ಹೆಸರಿನಲ್ಲಿ ಜಮೀನು ಇದ್ದು, ಅವರು ಮರಣ ಹೊಂದಿದ್ದಲ್ಲಿ ಮಾತ್ರ ಗ್ರಾಮ ಲೆಕ್ಕಿಗರಿಂದ ದೃಢೀಕರಿಸಿ, ಕುಟುಂಬದ ಇತರೆ ಸದಸ್ಯರಿಂದ ಒಪ್ಪಿಗೆ ಪಡೆದು ತಮ್ಮ ಹೆಸರಿನಲ್ಲಿ ಅರ್ಜಿ ಸಲ್ಲಿಸಬೇಕು.

ಮಹಿಳೆಯ ಹೆಸರಿನಲ್ಲಿ ಖಾತೆ ಹೊಂದಿದ್ದು, ಕುಟುಂಬದ ಇತರೆ ಪುರುಷ ಸದಸ್ಯರ ಹೆಸರಿನಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ ಯಾವುದೇ ಕಾರಣಕ್ಕೂ ಮಾನ್ಯ ಮಾಡಲಾಗುವುದಿಲ್ಲ. ಹೀಗಾಗಿ, ಮಹಿಳೆಯರ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸಬೇಕು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಡಾ. ಜಿ. ಸವಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
Application to provide relief to flower growers in Chitradurga district who suffered loss due to corona virus
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X