ಹೂವು ಬೆಳೆಗಾರರು 25 ಸಾವಿರ ಪರಿಹಾರ ಪಡೆಯುವುದು ಹೇಗೆ?

ಬೆಂಗಳೂರು, ಮೇ 15 : ಕರ್ನಾಟಕ ಸರ್ಕಾರ ಲಾಕ್ ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ ಜನರಿಗಾಗಿ 1,610 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಈ ಪ್ಯಾಕೇಜ್‌ ಅಡಿ ಹೂವು ಬೆಳೆಗಾರರು 25 ಸಾವಿರ ರೂ. ಪರಿಹಾರವನ್ನು ಪಡೆಯಬಹುದಾಗಿದೆ.

Recommended Video

      Muthappa Rai car collection | ಮುತ್ತಪ್ಪ ರೈ ಬಳಿ ಎಂತೆಂಥಾ ಕಾರ್ ಗಳಿದ್ವು ಗೊತ್ತಾ? | Oneindia Kannada

      ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕೋವಿಡ್ - 19 ಲಾಕ್‍ ಡೌನ್ ಹಿನ್ನೆಲೆಯಲ್ಲಿ ನಷ್ಟಹೊಂದಿರುವ ಹೂವು ಬೆಳಗಾರರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಹಾನಿಗೊಳಗಾದ ಹೂವಿನ ಬೆಳೆಗಾರರಿಂದ ಪರಿಹಾರ ಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

      ಪ್ರತಿ ಫಲಾನುಭವಿಗೆ ಒಂದು ಹೆಕ್ಟೇರ್ ವಿಸ್ತೀರ್ಣಕ್ಕೆ ಮಿತಿಗೊಳಿಸಿ ಪರಿಹಾರ ಧನ ನೀಡಲಾಗುತ್ತಿದೆ. ಒಂದು ಹೆಕ್ಟೇರ್‌ಗೆ ರೂ. 25 ಸಾವಿರ ಗರಿಷ್ಠ ಪರಿಹಾರಧನ ಘೋಷಿಸಲಾಗಿದೆ. ಪರಿಹಾರ ಪಡೆಯುವ ಫಲಾನುಭವಿಗಳು ರೈತರಾಗಿರಬೇಕು ಹಾಗೂ ಜಮೀನು ಅವರ ಹೆಸರಿನಲ್ಲಿರಬೇಕು.

      How Flower Growers To Get 25 Thousand Rs From Govt

      ಒಂದು ವೇಳೆ ಜಂಟಿ ಖಾತೆಗಳು ಆಗಿದ್ದಲ್ಲಿ ಇತರ ಖಾತೆದಾರರ ಒಪ್ಪಿಗೆ ಪತ್ರವನ್ನು ಪಡೆದಿರಬೇಕು (ನೋಟರಿ ದೃಢೀಕರಣ ಮಾಡಿಸುವುದು ಕಡ್ಡಾಯವಾಗಿದೆ.). ತಂದೆ ಅಥವಾ ತಾಯಿ ಹೆಸರಿನಲ್ಲಿ ಜಮೀನು ಇದ್ದು ಅವರು ಮರಣಹೊಂದಿದ್ದಲ್ಲಿ ಮಾತ್ರ ಗ್ರಾಮ ಲೆಕ್ಕಿಗರಿಂದ ದೃಢೀಕರಿಸಿ ಕುಟುಂಬದ ಇತರ ಸದಸ್ಯರಿಂದ ಒಪ್ಪಿಗೆ ಪಡೆದು ತಮ್ಮ ಹೆಸರಿನಲ್ಲಿ ಇತರರು ಅರ್ಜಿ ಸಲ್ಲಿಸಬೇಕು.

      ಮಹಿಳೆಯ ಹೆಸರಿನಲ್ಲಿ ಖಾತೆ ಹೊಂದಿದ್ದು, ಕುಟುಂಬದ ಇತರೆ ಪುರುಷ ಸದಸ್ಯರ ಹೆಸರಿನಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ ಯಾವುದೇ ಕಾರಣಕ್ಕೂ ಮಾನ್ಯ ಮಾಡಲಾಗುವುದಿಲ್ಲ. ಜಮೀನು ಯಾರ ಹೆಸರಿನಲ್ಲಿದೇ ಅವರ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

      ಅರ್ಜಿಗಳನ್ನು ಸಲ್ಲಿಸುವ ರೈತರು ಅರ್ಜಿಯ ಜೊತೆ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಝೆರಾಕ್ಸ್ ಪ್ರತಿ ಲಗತ್ತಿಸಬೇಕು. ಲಾಕ್‍ಡೌನ್ ಅವಧಿಯಲ್ಲಿ ಹೂವು ಬೆಳೆ ನಷ್ಟ ಹೊಂದಿದ ರೈತರಿಗೆ ಮಾತ್ರ ಪರಿಹಾರ ಧನ ಸಿಗಲಿದೆ ಎಂದು ತೋಟಗಾರಿಕಾ ಇಲಾಖೆ ಸ್ಪಷ್ಟಪಡಿಸಿದೆ.

      ಹಾವೇರಿ ಹೊರತುಪಡಿಸಿ ಉಳಿದ ಜಿಲ್ಲೆಯ ರೈತರು ಜಿಲ್ಲಾಧಿಕಾರಿಗಳ ಕಚೇರಿಯಿಂದ ಅಧಿಸೂಚನೆ ಹೊರಡಿಸುವ ತನಕ ಕಾಯಬೇಕು. ಎಲ್ಲಾ ಜಿಲ್ಲೆಗಳಲ್ಲಿ ಅರ್ಹತೆ ಒಂದೇ ಆಗಿರುತ್ತದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+