ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗ; ಹತೋಟಿ ಕ್ರಮಗಳ ವಿವರಗಳು

|
Google Oneindia Kannada News

ಶಿವಮೊಗ್ಗ, ಅಕ್ಟೋಬರ್ 04; ಶಿವಮೊಗ್ಗ ಮತ್ತು ಇತರ ಜಿಲ್ಲೆಗಳಲ್ಲಿ ಅಡಿಕೆ ಬೆಳೆಯುವ ರೈತರು ಎಲೆ ಚುಕ್ಕೆ ರೋಗದ ಬಗ್ಗೆ ಮಾತನಾಡುತ್ತಿದ್ದಾರೆ. ಸಾಮಾಜಿಕ ತಾಲತಾಣದಲ್ಲಿ ರೋಗವನ್ನು ಹತೋಟಿ ಮಾಡುವ ಕುರಿತು ಹಲವಾರು ಚರ್ಚೆಗಳು ನಡೆಯುತ್ತಿವೆ.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಅಡಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ ಡಾ. ನಾಗರಾಜಪ್ಪ ಅಡಿಕೆ ಬೆಳೆಯಲ್ಲಿ ಕಾಣಿಸಿಕೊಂಡಿರುವ ಎಲೆಚುಕ್ಕೆ ರೋಗದ ಲಕ್ಷಣಗಳು, ಕಾರಣವಾಗುವ ಅಂಶ ಮತ್ತು ಹತೋಟಿ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ; ಬಾಳೆ, ಅಡಕೆ ಬೆಳೆ ನಾಶ ಮಾಡಿದ ಕಾಡಾನೆಗಳು ಶಿವಮೊಗ್ಗ; ಬಾಳೆ, ಅಡಕೆ ಬೆಳೆ ನಾಶ ಮಾಡಿದ ಕಾಡಾನೆಗಳು

ಎಲೆ ಚುಕ್ಕೆ ರೋಗ ಬಾಧಿತ ಮರಗಳ ಕೆಳಗಿನ ಸೋಗೆಗಳ ಮೇಲ್ಭಾಗದಲ್ಲಿ ಹಳದಿ ಮತ್ತು ಕಪ್ಪು ಬಣ್ಣದ ಚುಕ್ಕೆಗಳು ಕಾಣಿಸುತ್ತವೆ. ಈ ಚುಕ್ಕೆಗಳು ಶೀಘ್ರವಾಗಿ ಒಂದಕ್ಕೊಂದು ಕೂಡಿಕೊಂಡು ಪೂರ್ತಿ ಹೆಡೆಗಳನ್ನು ಆವರಿಸುತ್ತದೆ. ನಂತರ ಹೆಡೆಗಳು ಒಣಗಲಾರಂಭಿಸುತ್ತವೆ. ಇಂತಹ ಒಣಗಿದ ಎಲ್ಲಾ ಹೆಡೆಗಳು ಜೋತು ಬಿದ್ದು ಮರ ಶಕ್ತಿಕಳೆದುಕೊಂಡು ಇಳುವರಿ ಕುಂಠಿತವಾಗುತ್ತದೆ.

ಪುತ್ತೂರು; ಅಡಿಕೆಯಿಂದ ತಯಾರಾಯ್ತು ಘಮ ಘಮ ಹೋಳಿಗೆ! ಪುತ್ತೂರು; ಅಡಿಕೆಯಿಂದ ತಯಾರಾಯ್ತು ಘಮ ಘಮ ಹೋಳಿಗೆ!

 How To Control Yellow Leaf Disease At Arecanut Crop

ರೋಗಕ್ಕೆ ಕಾರಣ; ಎಲೆಚುಕ್ಕೆ ರೋಗವು ಕೊಲ್ಲೆಟೋಟ್ರೈಕಮ್ ಗ್ಲೀಯೋಸ್ಪೊರೈಡ್ಸ್ ಮತ್ತು ಫಿಲ್ಲೊಸ್ಟಿಕ್ಟ ಅರಕೆ ಎಂಬ ಎರಡು ಶಿಲೀಂದ್ರಗಳಿಂದ ಉಂಟಾಗುತ್ತದೆ. ಶಿಲೀಂದ್ರವು ಬಿದ್ದ ಗರಿಗಳಲ್ಲಿ ವಾಸಿಸುತ್ತದೆ. ಮಳೆಹನಿಗಳು ಚಿಮ್ಮುವುವಿಕೆಯಿಂದ ಶಿಲೀಂದ್ರದ ಕಣಗಳು ಗಾಳಿಯಲ್ಲಿ ಸೇರಿ ಗರಿಗಳನ್ನು ತಲುಪುತ್ತವೆ.

ಚಿತ್ರದುರ್ಗ ವಿಶೇಷ; ಕೈಕೊಟ್ಟ ಮಳೆ, ಸ್ಪಿಂಕ್ಲರ್ ಮೊರೆ ಹೋದ ರೈತ ಚಿತ್ರದುರ್ಗ ವಿಶೇಷ; ಕೈಕೊಟ್ಟ ಮಳೆ, ಸ್ಪಿಂಕ್ಲರ್ ಮೊರೆ ಹೋದ ರೈತ

ಹಾಗೆಯೇ ತೇವಭರಿತ ಬಿಸಿಲಿನ ವಾತಾವರಣ, ಕಡಿಮೆ ಉಷ್ಣಾಂಶ (180 ರಿಂದ 240 ಸೆ) ಮತ್ತು ಹೆಚ್ಚಿನ ಆದ್ರತೆ (80 ರಿಂದ 90%) ಈ ರೋಗದ ತೀವ್ರತೆ ಮತ್ತು ಹರಡುವಿಕೆಗೆ ಪೂರಕವಾದ ಅಂಶಗಳಾಗಿವೆ. ಈ ರೋಗ ವರ್ಷ ಪೂರ್ತಿ ಕಂಡುಬಂದರೂ ಮಾರ್ಚ್‌ನಿಂದ ಸೆಪ್ಟಂಬರ್ ತಿಂಗಳ ತನಕ ಹೆಚ್ಚಾಗಿ ಬಾಧೆ ಉಂಟುಮಾಡುತ್ತದೆ.

ರೋಗ ನಿರ್ವಹಣೆ ಹೇಗೆ?; ಎಲೆ ಚುಕ್ಕೆ ರೋಗ ಬಾಧಿತ ಗರಿಗಳನ್ನು ಕತ್ತರಿಸಿ ತೆಗೆದು ನಾಶಪಡಿಸುವುದರಿಂದ ರೋಗ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯಬಹುದು.

 How To Control Yellow Leaf Disease At Arecanut Crop

ಬಿಸಿಲು ಬೀಳುವಂತೆ ಮಾಡಲು ಅಂತರ ಬೆಳೆಗಳ ಅಥವಾ ಕಾಡು ಮರಗಳ ಹೆಚ್ಚುವರಿ ರೆಂಬೆಗಳನ್ನು ಕತ್ತರಿಸಿ ತೆಗೆಯಬೇಕು. ರೋಗ ಲಕ್ಷಣದ ಪ್ರಾರಂಭದಲ್ಲಿ ಮುಂಜಾಗ್ರತವಾಗಿ ಶಿಲೀಂಧ್ರನಾಶಕಗಳಾದ ಮ್ಯಾಂಕೋಜೆಬ್ (2.5 ಗ್ರಾಂ) ಅಥವಾ ಸಾಫ್ (ಮ್ಯಾಂಕೋಜೆಂಬ್ 63%+ ಕಾರ್ಬೆನ್‍ಡೈಜೀಮ್ 12%) 2 ಗ್ರಾಂ ಪ್ರತೀ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು.

ಹೆಕ್ಸಕೊನಜೋಲ್ ಶೇ 5 ಎಸ್. ಸಿ ಅಥವಾ ಪ್ರೊಪಿಕೊನಜೋಲ್ ಶೇ 25 ಇ. ಸಿ ಅಂತರವ್ಯಾಪಿ ಶಿಲೀಂಧ್ರನಾಶಕಗಳನ್ನು 1 ಮಿ.ಲೀ. ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಅಂಟು ದ್ರಾವಣದ (1 ಮಿ.ಲೀ) ಜೊತೆಗೆ ಸಿಂಪಡಿಸಬೇಕು.

ಹನಿ ನೀರಾವರಿ ಯೋಜನೆ ಅರ್ಜಿ ಆಹ್ವಾನ; ತೋಟಗಾರಿಕೆ ಇಲಾಖೆ ಪ್ರಸಕ್ತ ಸಾಲಿನ ಪಿ.ಎಂ.ಕೆ.ಎಸ್.ವೈ. ಯೋಜನೆಯಡಿ ಹನಿ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ಅರ್ಜಿ ಕರೆದಿದೆ. ರೈತರು ನಿಗದಿತ ನಮೂನೆಯ ಅರ್ಜಿಗಳನ್ನು ಶಿಕಾರಿಪುರ ತಾಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿ ಅಕ್ಟೋಬರ್ 30ರೊಳಗೆ ಸಲ್ಲಿಸಬೇಕು.

ಸಲ್ಲಿಕೆಯಾದ ಅರ್ಜಿಗಳನ್ನು ಅನುದಾನದ ಲಭ್ಯತೆಯನುಸಾರ ಕಾರ್ಯಾದೇಶ ನೀಡಿ ಸಹಾಯಧನಕ್ಕೆ ಪರಿಗಣಿಸಲಾಗುವುದು. ಕಡ್ಡಾಯವಾಗಿ ಕಾರ್ಯಾದೇಶ ಪಡೆದ ನಂತರವೇ ರೈತರು ತೋಟದಲ್ಲಿ ಹನಿ ನೀರಾವರಿ ವ್ಯವಸ್ಥೆಯನ್ನು ಅಳವಡಿಸಬೇಕು ಎಂದು ಸೂಚನೆ ನೀಡಲಾಗಿದೆ.

ಕಾರ್ಯಾದೇಶ ಪಡೆಯದೇ ಹನಿ ನೀರಾವರಿ ವ್ಯವಸ್ಥೆಯನ್ನು ಅಳವಡಿಸಿದರೆ ಸಹಾಯಧನಕ್ಕೆ ಪರಿಗಣಿಸಲಾಗುವುದಿಲ್ಲ. ಈ ಹಿಂದೆ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಸರ್ಕಾರದ ಮಾರ್ಗಸೂಚಿ ಪ್ರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಣ್ಣ, ಅತಿಸಣ್ಣ ರೈತರಿಗೆ ಶೇ 90ರಷ್ಟು ಹಾಗೂ ಇತರೆ ರೈತರಿಗೆ ಶೇ 45ರಷ್ಟು ಸಹಾಯಧನ ನೀಡಲಾಗುತ್ತದೆ. ಹೆಚ್ಚಿನ ವಿವರಗಳಿಗಾಗಿ ತಾಲೂಕಿನ ತೋಟಗಾರಿಕೆ ಕಚೇರಿ ಅಥವಾ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು.

English summary
Arecanut crop is affected by many diseases. Here are the tips to farmers about how to control Yellow leaf disease.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X