ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಧಾರವಾಡ; ಜನರನ್ನು ಸೆಳೆದ ಸಿರಿಧಾನ್ಯ ನಡಿಗೆ

|
Google Oneindia Kannada News

ಧಾರವಾಡ, ಜನವರಿ 13; 26ನೇ ರಾಷ್ಟ್ರೀಯ ಯುವಜನೋತ್ಸವದ ಅಂಗವಾಗಿ ಧಾರವಾಡದಲ್ಲಿ ಶುಕ್ರವಾರ ಸಿರಿಧಾನ್ಯ ನಡಿಗೆ ಆಯೋಜನೆ ಮಾಡಲಾಗಿತ್ತು. ನೂರಾರು ಜನರು ನಡಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು, ಸಿರಿಧಾನ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.

ಧಾರವಾಡ ಕೃಷಿ ಇಲಾಖೆಯಿಂದ ಸಿರಿಧಾನ್ಯ ಮತ್ತು ಸಾವಯವ ಮೇಳದ ಅಂಗವಾಗಿ ಕೃಷಿ ಇಲಾಖೆ ಹಾಗೂ ಕಂದಾಯ ಸೇರಿದಂತೆ ವಿವಿಧ ಇಲಾಖೆ ಹಾಗೂ ರೆಡ್‍ಕ್ರಾಸ್ ಸಂಸ್ಥೆಯ ಸದಸ್ಯರೊಂದಿಗೆ ಸಿರಿಧಾನ್ಯ ನಡಿಗೆ ಆಯೋಜನೆ ಮಾಡಲಾಗಿತ್ತು.

ಬೆಂಗಳೂರಲ್ಲಿ ಜ.20ರಿಂದ ಮೂರು ದಿನ 'ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ -2023': ಬಿ.ಸಿ.ಪಾಟೀಲ್ಬೆಂಗಳೂರಲ್ಲಿ ಜ.20ರಿಂದ ಮೂರು ದಿನ 'ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ -2023': ಬಿ.ಸಿ.ಪಾಟೀಲ್

ಧಾರವಾಡ ತಹಶೀಲ್ದಾರ ಸಂತೋಷ ಹಿರೇಮಠ ಅವರು 'ಸಿರಿಧಾನ್ಯ' ನಡಿಗೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿ, 'ಕೃಷಿ ಲಾಭದಾಯಕ ಉದ್ಯೋಗವನ್ನಾಗಿ ರೂಪಿಸುವುದರ ಜೊತೆಗೆ ಜನರಿಗೆ ಆರೋಗ್ಯಕರವಾಗಿಯೂ ಸಿಗುವಂತೆ ಮಾಡಲು ಸರ್ಕಾರ ಸಾವಯವ ಕೃಷಿಯನ್ನು ಪ್ರೋತ್ಸಾಹಿಸುತ್ತಿದೆ' ಎಂದು ಹೇಳಿದರು.

ಸಿರಿಧಾನ್ಯ ಮೂಲಕ ಕ್ಯಾನ್ಸರ್‌ಗೆ ಔಷಧಿಕೊಡುವ ಮೈಸೂರಿನ ಡಾ.ಖಾದರ್ಸಿರಿಧಾನ್ಯ ಮೂಲಕ ಕ್ಯಾನ್ಸರ್‌ಗೆ ಔಷಧಿಕೊಡುವ ಮೈಸೂರಿನ ಡಾ.ಖಾದರ್

'ಸಾವಯವ ಕೃಷಿಯಿಂದ ಪಡೆಯುವ ಉತ್ಪನ್ನಗಳನ್ನು, ಸಿರಿಧಾನ್ಯಗಳನ್ನು ರೈತರು ಬೆಳೆಯಲು ಸರ್ಕಾರ ವಿವಿಧ ಪ್ರೋತ್ಸಾಹದಾಯಕ ಸಹಾಯಧನ ಹೊಂದಿರುವ ಯೋಜನೆಗಳನ್ನು ಜಾರಿಗೊಳಿಸಿದೆ. ಇಂದು ಸಾವಯವ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿದೆ. ಸಿರಿಧಾನ್ಯ ಬಳಕೆಯು ಹೆಚ್ಚುತ್ತಿದೆ. ಆರೋಗ್ಯ ಪೂರ್ಣ ಸಮಾಜ ನಿರ್ಮಿಸುವಲ್ಲಿ ಸಿರಿಧಾನ್ಯಗಳ ಬಳಕೆ ಮಹತ್ವದ್ದಾಗಿದೆ. ಮಕ್ಕಳಿಗೆ ಆರಂಭದಿಂದಲೇ ಸಿರಿಧಾನ್ಯ ಆಹಾರ ಉತ್ಪನ್ನಗಳನ್ನು ನೀಡುವ ಮೂಲಕ ರುಚಿ ಉಣಿಸಬೇಕು" ಎಂದು ತಿಳಿಸಿದರು.

ಮರಳಿ ಸಿರಿ ಧಾನ್ಯ ಬೆಳೆಯಲು ರೈತರಿಗೆ ಕರೆ ನೀಡಿದ ಕಂದಾಯ ಸಚಿವ ಆರ್.ಅಶೋಕಮರಳಿ ಸಿರಿ ಧಾನ್ಯ ಬೆಳೆಯಲು ರೈತರಿಗೆ ಕರೆ ನೀಡಿದ ಕಂದಾಯ ಸಚಿವ ಆರ್.ಅಶೋಕ

ಸಾವಯವ ಕೃಷಿ ಹೆಚ್ಚಿಸಲು ತರಬೇತಿ

ಸಾವಯವ ಕೃಷಿ ಹೆಚ್ಚಿಸಲು ತರಬೇತಿ

ಸಿರಿಧಾನ್ಯ ನಡಿಗೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಜಶೇಖರ ಐ.ಬಿ. "ಧಾರವಾಡ ಜಿಲ್ಲೆಯಲ್ಲಿ ಸಾವಯವ ಕೃಷಿ ಮತ್ತು ಸಿರಿಧಾನ್ಯ ಉತ್ಪನ್ನಗಳನ್ನು ಹೆಚ್ಚಿಸಲು ಇಲಾಖೆಯಿಂದ ಹೆಚ್ಚಿನ ಪ್ರಯತ್ನ ಮಾಡಲಾಗುತ್ತಿದೆ. ಜಿಲ್ಲೆಯ ಅಂದಾಜು 1800 ಹೆಕ್ಟೇರ್ ಪ್ರದೇಶದಲ್ಲಿ 1200 ಜನ ಸಾವಯವ ಕೃಷಿ ಮಾಡುತ್ತಿದ್ದಾರೆ.

ಸಾವಯವ ಕೃಷಿ ಹೆಚ್ಚಿಸಲು ಆಸಕ್ತ ರೈತರಿಗೆ ಉತ್ತಮ ತರಬೇತಿ ಮತ್ತು ಯಶಸ್ವಿ ಸಾವಯವ ರೈತರ ತೋಟಗಳಿಗೆ ಅಧ್ಯಯನ ಪ್ರವಾಸಗಳನ್ನು ಕೈಗೊಳ್ಳಲಾಗುತ್ತಿದೆ" ಎಂದರು.

"ಆತ್ಮ ಯೋಜನೆಯಡಿ ಜೇನು ಸಾಕಾಣಿಕೆ ಸೇರಿದಂತೆ ವಿವಿಧ ತರಬೇತಿಗಳನ್ನು ನೀಡಲಾಗುತ್ತಿದೆ. ಜಿಲ್ಲೆಯ ವಿವಿಧ ರೈತರ ಜಮೀನುಗಳಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಏರೆಹುಳು ನಿರ್ಮಾಣದ ತೊಟ್ಟಿಗಳನ್ನು ನಿರ್ಮಿಸಲಾಗಿದೆ. ಸರ್ಕಾರದ ಕೃಷಿಪರ ಯೋಜನೆಗಳನ್ನು ರೈತರಿಗೆ ತಲುಪಿಸುವ ಮೂಲಕ ಕೃಷಿಗೆ ಆದ್ಯತೆ, ಆಕರ್ಷಣೆ ಸಿಗುವಂತೆ ಮತ್ತು ಆರೋಗ್ಯವರ್ಧಕ ಆಹಾರ ಉತ್ಪನ್ನಗಳನ್ನು ಬೆಳೆಯುವಂತೆ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಲಾಗುತ್ತಿದೆ" ಎಂದು ಹೇಳಿದರು.

ಕಲಾಭವನದಿಂದ ಮ್ಯಾರಾಥಾನ್

ಕಲಾಭವನದಿಂದ ಮ್ಯಾರಾಥಾನ್

ಧಾರವಾಡದ ಕಲಾಭವನದಿಂದ ಆರಂಭವಾದ ಸಿರಿಧಾನ್ಯ ಮ್ಯಾರಾಥಾನ್ ನಡಿಗೆಯು ಕೋರ್ಟ್ ಸರ್ಕಲ್ ಮುಖಾಂತರ ಜಿಲ್ಲಾಧಿಕಾರಿ ಕಛೇರಿ ಆವರಣ ಆಲೂರು ವೆಂಕಟರಾವ ಭವನ ಕರ್ನಾಟಕ ಕಾಲೇಜು ತಲುಪಿ ಅಂತಿಮವಾಗಿ ಆರ್. ಎನ್. ಶೆಟ್ಟಿ ಕ್ರಿಡಾಂಗಣದಲ್ಲಿ ಸಮಾಪ್ತಿಗೊಂಡಿತು.

ಸಿರಿಧಾನ್ಯ ಜಾಗೃತಿ ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾಲಯ, ಗ್ರೀನ್ ಪೌಂಡೇಶನ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಮತ್ತು ಇನ್ನಿತರ ಸ್ವಯಂ ಸೇವಾ ಸಂಸ್ಥೆಗಳು ಭಾಗವಹಿಸಿದ್ದವು. ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ಪ್ರತಿನಿಧಿಗಳು ಕೈಯಲ್ಲಿ ಪ್ರಚಾರ ಫಲಕಗಳನ್ನು ಹಿಡಿದು ಸಿರಿಧಾನ್ಯ ಬಳಕೆ ಮತ್ತು ಆರೋಗ್ಯ ರಕ್ಷಣೆ ಕುರಿತಂತೆ ಘೋಷಣೆಗಳನ್ನು ಕೂಗುತ್ತ ನಡೆದರು.

ಸಿರಿಧಾನ್ಯ ಪ್ರದರ್ಶನ, ಮಾರಾಟ

ಸಿರಿಧಾನ್ಯ ಪ್ರದರ್ಶನ, ಮಾರಾಟ

ಧಾರವಾಡದ ಆರ್. ಎನ್. ಶೆಟ್ಟಿ ಸ್ಟೇಡಿಯಂ ಎದುರಿಗಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಆವರಣದಲ್ಲಿ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಹಾಕಲಾಗಿದೆ. ಈ ಮಳಿಗೆಗಳಲ್ಲಿ ಕೃಷಿ ವಿಶ್ವ ವಿದ್ಯಾಲಯದ ವಿಜ್ಞಾನಿಗಳು, ವಿವಿಧ ಕೃಷಿ ವಿಜ್ಞಾನ ಕೇಂದ್ರಗಳ ವಿಜ್ಞಾನಿಗಳು ಮಾದರಿ ಹಾಗೂ ಪ್ರಚಾರ ಸಾಮಗ್ರಿಗಳನ್ನು ಪ್ರದರ್ಶಿಸುತ್ತಿದ್ದಾರೆ.

ಕೃಷಿ ಇಲಾಖೆಯ ಕಾರ್ಯಕ್ರಮಗಳ ಕುರಿತು ಪ್ರಚಾರ ಹಾಗೂ ಸ್ಥಳದಲ್ಲಿಯೆ ಫಲಾನುಭವಿಗಳ ಆನ್ ಲೈನ್ ಸೇವೆ ನೀಡಲು ಮಳಿಗೆ ತೆರೆಯಲಾಗಿದೆ ಹಾಗೂ ರೈತ ಉತ್ಪಾದಕ ಕಂಪನಿಗಳು ಸ್ವ ಸಹಾಯ ಸಂಘಗಳು, ಸ್ತ್ರೀ ಶಕ್ತಿ ಗುಂಪುಗಳು, ಸಾವಯವ ಒಕ್ಕೂಟ, ಖಾಸಗಿ ಕಂಪನಿಗಳು, ಆತ್ಮ ನಿರ್ಭರ ಭಾರತ ಫಲಾನುಭವಿಗಳು, ಉದ್ದಿಮೆದಾರರು ವಿವಿಧ ಮಾರಾಟ ಸಾಮಗ್ರಿಗಳನ್ನು ಪ್ರದರ್ಶನ ಮತ್ತು ಮಾರಾಟ ಮಾಡುತ್ತಿದ್ದಾರೆ.

ರೊಟ್ಟಿ, ಚಟ್ನಿ, ಉಪ್ಪಿನಕಾಯಿ, ಸಿಹಿ ತಿನಿಸುಗಳು, ಮಾದಲಿ, ಸಿರಿಧಾನ್ಯ ಉತ್ಪನ್ನಗಳು, ಶುದ್ಧ ಗಾಣದ ಎಣ್ಣೆ, ಸಾವಯವ ಸಂಸ್ಕರಿತ ಆಹಾರ ಉತ್ಪನ್ನಗಳು, ಸಾವಯವ ಸಂಸ್ಕರಿತ ಆಹಾರ ಉತ್ಪನ್ನಗಳು ಮಾರಾಟಕ್ಕೆ ಲಭ್ಯವಿರುತ್ತವೆ.

ಸಿರಿಧಾನ್ಯ ಬಳಕೆಗೆ ಪ್ರೋತ್ಸಾಹ

ಸಿರಿಧಾನ್ಯ ಬಳಕೆಗೆ ಪ್ರೋತ್ಸಾಹ

ಸಿರಿಧಾನ್ಯಗಳು ಕೃಷಿ ಪರಿಸರದಿಂದ ಕಣ್ಮರೆಯಾಗುತ್ತಿದ್ದು ಮಾನವನ ಆಹಾರದಲ್ಲಿ ಪೋಷಕಾಂಶಗಳ ಕೊರತೆ ಉಂಟಾಗಿದೆ, ಇದರಿಂದ ಬೇರೆ ಬೇರೆ ಅನಾರೋಗ್ಯದ ಸಮಸ್ಯೆಗಳು ತಲೆದೊರುತ್ತಿದ್ದು ಸಿರಿಧಾನ್ಯಗಳು ಕೃಷಿ ಮತ್ತು ಬಳಕೆಯನ್ನು ಉತ್ತೇಜಿಸಬೇಕಾಗಿದೆ. ನಮ್ಮ ಸಂಪ್ರದಾಯಿಕ ಆಹಾರ ಧಾನ್ಯಗಳಾದ ಜೋಳ, ರಾಗಿ, ಸಜ್ಜೆ, ನವಣೆ, ಅರಕ, ಉದಲು, ಕೊರಲು, ಸಾವೆ, ಬರಗು ಇವೆಲ್ಲ ಉತ್ತಮ ಪೋಷಕಾಂಶಗಳ ಮೂಲಗಳಾಗಿದ್ದು ಯಥೇಚ್ಚ ನಾರಿನ ಅಂಶವನ್ನು ಒಳಗೊಂಡಿವೆ.

ಇವುಗಳ ಸೇವನೆಯಿಂದ ಮನುಷ್ಯನ ಆರೋಗ್ಯದಲ್ಲಿ ಶೀಘ್ರ ಸುಧಾರಣೆ ಆಗುವುದನ್ನು ತಜ್ಞರು ಗುರುತಿಸಿದ್ದಾರೆ. ಈ ಎಲ್ಲ ಸಂಗತಿಗಳ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸಲು ಜನವರಿ 12 ರಿಂದ 16ರ ವರೆಗೆ ಬೆಳೆಗ್ಗೆ 10 ರಿಂದ ಸಂಜೆ 7 ರ ವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

English summary
Millet Marathon organized in Dharwad on January 13th in the the occasion of 26th National Youth Festival. Hundreds of people participated in the event.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X