ರೈತರ ಸಮಸ್ಯೆಗಳನ್ನ ಬಗೆಹರಿಸಲು ಶ್ರಮ ಹಾಕುತ್ತೇನೆ: ಸಚಿವ ಆರ್. ಅಶೋಕ್

ಮಂಡ್ಯ ಜಿಲ್ಲೆಯಲ್ಲಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ರೈತರು ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಲೇ ಬಂದಿದ್ದಾರೆ. ಆದರೆ ಸರ್ಕಾರ ಮಾತ್ರ ಬೇಡಿಕೆಗಳನ್ನು ಈಡೇರಿಸದೇ ಜಾಣಮೌನವಹಿಸಿತ್ತು. ಇದೀಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾದ ಆರ್‌. ಅಶೋಕ್‌ ರೈತರಿಗೆ ಕೆಲವ

ಮಂಡ್ಯ, ಜನವರಿ, 25: ಜೆಡಿಎಸ್ ಮತ್ತು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೈಶುಗರ್ ಕಾರ್ಖಾನೆ ಪುನರಾರಂಭಿಸಲು ವಿಫಲಗೊಂಡಿದ್ದವು. ಆದರೆ ನಮ್ಮ ಬಿಜೆಪಿ ಸರ್ಕಾರ ಕಾರ್ಖಾನೆ ಪುನರಾರಂಭಿಸಿ ರೈತರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸಾಗುತ್ತಿದೆ ಎಂದು ಸಚಿವ ಆರ್.ಅಶೋಕ್ ಮಂಡ್ಯದಲ್ಲಿ ಹೇಳಿದರು.

ನಗರದ ಫ್ಯಾಕ್ಟರಿ ವೃತ್ತದ ಬಳಿ ಬುಧವಾರ ಕಾರ್ಯನಿಮಿತ್ತ ತೆರಳುತ್ತಿದ್ದ ವೇಳೆ, ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ಬಳಿಕ ಸುದ್ಧಿಗಾರರೊಂದಿಗೆ ಅವರು ಮಾತನಾಡಿದರು. ಚುನಾವಣೆ ಬರುವ ಮುನ್ನವೇ ನನಗೆ ಉಸ್ತುವಾರಿ ಸಚಿವ ಸ್ಥಾನವೂ ಸಿಕ್ಕಿದೆ. ನನಗೆ ಇದು ಮೊದಲೇನಲ್ಲ, ಹಾಗಾಗಿ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಸಕ್ಕರೆ ಕಾರ್ಖಾನೆಯನ್ನು ಪುನರಾರಂಭಿಸಲು ನಮ್ಮ ಸರ್ಕಾರವೇ ಬರಬೇಕಿತ್ತು. ಇದನ್ನು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಮನಗಾಣಬೇಕಿದೆ. ಬಿಜೆಪಿ ಸರ್ಕಾರವು ಜಿಲ್ಲೆಯ ಹಾಗೂ ರಾಜ್ಯದ ಅಭಿವೃದ್ಧಿಗೆ ಹೆಚ್ಚು ಶ್ರಮಿಸುತ್ತಿದೆ ಎಂದರು.

ಜನರಿಗೂ ಬಿಜೆಪಿ ಮೇಲೆ ವಿಶ್ವಾಸವಿದೆ

ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ಒಂದು ಖಾತೆಯನ್ನು ವಿಧಾನಸಭಾ ಚುನಾವಣೆಯಲ್ಲಿ ತೆರೆಯುವ ಮೂಲಕ ಶುಭಾರಂಭ ಮಾಡಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಶಯದಂತೆ ದೇಶದ ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಚುನಾವಣೆಯಲ್ಲಿ ಮತಯಾಚನೆ ಮಾಡುತ್ತೇವೆ. ಜನರಿಗೂ ಬಿಜೆಪಿ ಪಕ್ಷದ ಮೇಲೆ ವಿಶ್ವಾಸವಿದೆ. ಹಳೇ ಮೈಸೂರು ಭಾಗದಲ್ಲಿಯೂ ಬಿಜೆಪಿ ಹೆಚ್ಚು ಸ್ಥಾನಗಳಿಸುವ ಉದ್ದೇಶ ಇಟ್ಟುಕೊಂಡಿದ್ದು, ಇದಕ್ಕೆ ತಯಾರಿ ಹಾಗೂ ಯೋಜನೆಗಳನ್ನು ರೂಪಿಸಲಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

I will solve the problems of farmers: R. Ashok promise

ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಶ್ರಮ

ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯುತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳನ್ನು ನೋಡಿ ಮಂಡ್ಯ ಜಿಲ್ಲೆಯ ಜನ ಸಾಕಾಗಿದ್ದಾರೆ. ಹಾಗಾಗಿ ಬಿಜೆಪಿ ಮೇಲೆ ಜನರಿಗೆ ವಿಶ್ವಾಸವಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ರೀತಿಯಲ್ಲಿ ಶ್ರಮ ಹಾಕಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ವಿದ್ಯಾ ನಾಗೇಂದ್ರ, ಎಚ್.ಪಿ.ಮಹೇಶ್, ಅಶೋಕ್ ಜಯರಾಂ, ಸಿ.ಟಿ.ಮಂಜುನಾಥ್, ಎಚ್.ಆರ್.ಅರವಿಂದ್, ಎಚ್.ಆರ್.ಅಶೋಕ್‌ ಕುಮಾರ್, ವಿವೇಕ್, ರಮೇಶ್, ಪುಟ್ಟರ್‌ಮಲ್ಲು ಜೈನ್, ಮರ್ದಿನಿ ರಮೇಶ್ ಸೇರಿದಂತೆ ಮತ್ತತರರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+