ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ವಯಂಪ್ರೇರಿತರಾಗಿ ಬೆಳೆ‌ ನಾಶಪಡಿಸಿಕೊಂಡಲ್ಲಿ ಪರಿಹಾರವಿಲ್ಲ: ಬಿ.ಸಿ.ಪಾಟೀಲ್

|
Google Oneindia Kannada News

ದಾವಣಗೆರೆ, ಏಪ್ರಿಲ್ 16: ಯಾವುದೇ ರೈತರು ಆತುರದ ಬುದ್ಧಿಗೆ ಬೆಲೆಕೊಟ್ಟು ತಮ್ಮ ಬೆಳೆಗಳನ್ನು ನಾಶ ಪಡಿಸಿಕೊಳ್ಳಬಾರದು. ಕೊರೊನಾ‌ ಲಾಕ್ಡೌನ್ ಅನಿರೀಕ್ಷಿತವಾಗಿದ್ದು, ಯಾರೂ ಸಹ ಇದನ್ನು ನಿರೀಕ್ಷಿಸಿರಲಿಲ್ಲ. ಲಾಕ್ಡೌನ್ ಮುಗಿದ ಮೇಲೆ ರೈತರ ಫಸಲುಗಳಿಗೆ ಒಳ್ಳೆಯ ಬೆಲೆ ಬಂದೇ ಬರುತ್ತದೆ. ಆತುರಕ್ಕೆ ಸ್ವಯಂಪ್ರೇರಿತರಾಗಿ ಬೆಳೆ ನಾಶ ಪಡಿಸಿಕೊಂಡರೆ ಪರಿಹಾರ ಸಾಧ್ಯವಿಲ್ಲ. ಪ್ರಾಕೃತಿಕ ನಷ್ಟಕ್ಕೆ ಮಾತ್ರ ಪರಿಹಾರ ಒದಗಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಲಾಕ್ಡೌನ್ ಹಿನ್ನಲೆಯಲ್ಲಿ ರೈತರ ಪರಿಸ್ಥಿತಿ, ಕೃಷಿ ಚಟುವಟಿಕೆ ಕುರಿತು ಜಿಲ್ಲೆಯ ಕೃಷಿ, ತೋಟಗಾರಿಕೆ ಅಧಿಕಾರಿಗಳು, ಜನಪ್ರತಿನಿಧಿಗಳ ಜೊತೆ ಸಚಿವರು ಗುರುವಾರ ಸಂಜೆ ಜಿಲ್ಲಾಡಳಿತ ಭವನದಲ್ಲಿ ‌ಸಭೆ ನಡೆಸಿದರು.

ಸರ್ಕಾರ ನಮ್ಮನ್ನು ಸರಿಯಾಗಿ ಉಪಯೋಗಿಸಿಕೊಳ್ಳುತ್ತಿಲ್ಲ ಎಂದು ದೂರಿದ ಡಿಕೆಶಿಸರ್ಕಾರ ನಮ್ಮನ್ನು ಸರಿಯಾಗಿ ಉಪಯೋಗಿಸಿಕೊಳ್ಳುತ್ತಿಲ್ಲ ಎಂದು ದೂರಿದ ಡಿಕೆಶಿ

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಪ್ರಕೃತಿ ವಿಕೋಪಕ್ಕೆ ಬೆಳೆ ನಾಶವಾದರೆ ಮಾತ್ರ ಪರಿಹಾರ ‌ನೀಡುತ್ತೇವೆ. ರೈತರು ಬೆಳೆಗಳನ್ನು ನಾಶ ಪಡಿಸಿಕೊಂಡರೆ ಅದಕ್ಕೆ ಪರಿಹಾರ ‌ನೀಡುವುದಿಲ್ಲ. ಹೂವಿನ ಬೆಳೆ ನಷ್ಟಕ್ಕೆ ಪರಿಹಾರ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು.

If You Destroy Crops Voluntarily You Will Not Get Compensation

ದಾವಣಗೆರೆ ಜಿಲ್ಲೆಯಲ್ಲಿ ಸುಮಾರು 2.58 ಕೋಟಿಯಷ್ಟು ನಷ್ಟವಾಗಿದೆ ಎಂದು ತಿಳಿದುಬಂದಿದೆ. ಪ್ರಾಕೃತಿಕ ನಷ್ಟದ ಬಗ್ಗೆ ಮುಖ್ಯಮಂತ್ರಿಗಳು ಎಲ್ಲಾ ಜಿಲ್ಲೆಗಳಿಂದ ವರದಿ ತರೆಸಿಕೊಂಡಿದ್ದಾರೆ ಎಂದು ಬಿ.ಸಿ.ಪಾಟೀಲ್ ಹೇಳಿದರು. ಲಾಕ್ಡೌನ್ ನಿಂದ ರಾಜ್ಯದಲ್ಲಿ ಕೃಷಿ ಚಟುವಟಿಕೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಬಾರದು ಎಂದು ಸರ್ಕಾರ ಎಲ್ಲಾ ಇಲಾಖೆಗಳಿಗೆ ನಿರ್ದೇಶನ ನೀಡಿದೆ. ಈ ಬಗ್ಗೆ ತಾವು ಖುದ್ದಾಗಿ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವುದಾಗಿ ಸ್ಪಷ್ಟಪಡಿಸಿದರು.

ಕೃಷಿ ಚಟುವಟಿಕೆಗಳಿಗೆ ಎಲ್ಲಾ ರೀತಿಯ ಬೆಂಬಲ ‌ನೀಡುತ್ತೇವೆ. ದಾವಣಗೆರೆ ಜಿಲ್ಲೆಯ ಕೆಲವು ಕಡೆಗಳಲ್ಲಿ ಕಳಪೆ ಬೀಜಗಳನ್ನು ಮಾರಾಟ ಮಾಡುತ್ತಾರೆ ಎನ್ನುವುದು ತಮ್ಮ ಗಮನಕ್ಕೆ ಬಂದಿದೆ.ಕಳಪೆ ಬೀಜ ಮಾರಾಟ ಮಾಡುವವರು ಎಷ್ಟೇ ದೊಡ್ಡವರಾಗಿರಲಿ ಅವರ ವಿರುದ್ಧ ಕೇಸ್ ದಾಖಲಿಸುತ್ತೇವೆ ಎಂದರು.

ಡಿಕೆಶಿ ಹೇಳಿಕೆಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ತಿರುಗೇಟುಡಿಕೆಶಿ ಹೇಳಿಕೆಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ತಿರುಗೇಟು

ಈ‌ ಸಂದರ್ಭದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಇನ್ನಿತರೆ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

English summary
If you destroy crops voluntarily, you will not get Compensation said farmer minister B.C Patil.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X