ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾರುಕಟ್ಟೆಗೆ ನ್ಯಾನೋ ರಸಗೊಬ್ಬರದಿಂದ ಹೊಸ ಕೃಷಿ ಕ್ರಾಂತಿ- ಸದಾನಂದ ಗೌಡ

|
Google Oneindia Kannada News

ನವದೆಹಲಿ, ಮೇ 30: ಸಹಕಾರಿ ವಲಯದ ರಸಗೊಬ್ಬರ ಕಂಪನಿ ಇಫ್ಕೋ ಅಭಿವೃದ್ಧಿಸಿರುವ ನ್ಯಾನೋ-ಯೂರಿಯಾ ರಸಗೊಬ್ಬರವು ಕೃಷಿಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಉಂಟುಮಾಡಲಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.

240 ರೂಪಾಯಿ ಬೆಲೆಯ 500 ಎಂಎಲ್ ನ್ಯಾನೋ ಯೂರಿಯಾ 45 ಕೆಜಿ ಮಾಮೂಲಿ ಯೂರಿಯಾಕ್ಕೆ ಸಮನಾಗಿದ್ದು ಜೂನ್ 15ನೇ ತಾರೀಖಿನಂದು ಮುಕ್ತ ಮಾರುಕಟ್ಟೆಗೆ ಲಗ್ಗೆ ಇಡಲಿದೆ.

ನ್ಯಾನೋ-ಯುರಿಯಾ ಉಪಯೋಗದ ಬಗ್ಗೆ ಇಫ್ಕೋ ಸಂಸ್ಥೆಯವರು ಏರ್ಪಡಿಸಿದ್ದ ವೆಬಿನಾರ್ ಚರ್ಚೆಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು - ಇದು ಪರಿಸರ ಸ್ನೇಹಿಯಾಗಿದ್ದು ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದರು.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಉಪಕುಲಪತಿ ಡಾ.ಎಸ್. ರಾಜೇಂದ್ರ ಪ್ರಸಾದ್ ಅಧ್ಯಕ್ಷತೆ ವಹಿಸಿದರು. ಕರ್ನಾಟಕ ಸರ್ಕಾರದ ಕೃಷಿ ನಿರ್ದೇಶಕ ಡಾ.ಬಿ.ವೈ. ಶ್ರೀನಿವಾಸ್; NBRC ಕಲೋಲ್ ಜನರಲ್ ಮ್ಯಾನೇಜರ್ (ನ್ಯಾನೋ ಟೆಕ್ನಾಲಜಿ) ಡಾ. ರಮೇಶ್ ರಾಲಿಯಾ; ಐಸಿಯೆಅರ್ (ಅಟಾರಿ) ನಿರ್ದೇಶಕ ಡಾ.ವೆಂಕಟಸುಬ್ರಮಣಿಯನ್ ಚರ್ಚೆಯಲ್ಲಿ ಪಾಲ್ಗೊಂಡರು.

ನ್ಯಾನೋ ರಸಗೊಬ್ಬರದಿಂದ ಸಾಗುವಳಿ ವೆಚ್ಚ

ನ್ಯಾನೋ ರಸಗೊಬ್ಬರದಿಂದ ಸಾಗುವಳಿ ವೆಚ್ಚ

ನ್ಯಾನೋ ರಸಗೊಬ್ಬರದಿಂದ ಸಾಗುವಳಿ ವೆಚ್ಚದಲ್ಲಿ ಸುಮಾರು 15 ಪ್ರತಿಶತ ಕಡಿಮೆಯಾಗಲಿದೆ. ಇನ್ನು ಇಳುವರಿಯಲ್ಲಿ 15ರಿಂದ 20ರಷ್ಟು ಹೆಚ್ಚಳವಾಗಲಿದೆ ಎಂದ ಸಚಿವರು ರೈತರು ಇದನ್ನು ಹೆಚ್ಚೆಚ್ಚು ಬಳಕೆ ಮಾಡಿ ಇದರ ಲಾಭ ಪಡೆದುಕೊಳ್ಳಬೇಕು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಕರೆ ನೀಡಿದರು.

ಈ ವರ್ಷ 350 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬೇಕಾಗಬಹುದು

ಈ ವರ್ಷ 350 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬೇಕಾಗಬಹುದು

ಭಾರತದಲ್ಲಿ ಈ ವರ್ಷ 350 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬೇಕಾಗಬಹುದು ಎಂದು ಅಂದಾಜು ಮಾಡಲಾಗಿದೆ. ಆದರೆ ಈಗ ನ್ಯಾನೋ ಯೂರಿಯಾ ಮಾರುಕಟ್ಟೆಗೆ ಬರುತ್ತಿರುವದರಿಂದ ಮಾಮೂಲಿ ಯೂರಿಯಾ ಬಳಕೆ ಗಣನೀಯವಾಗಿ ಕಡಿಮೆಯಾಗಲಿದ್ದು ಸುಮಾರು 600 ಕೋಟಿ ರೂ ಸಬ್ಸಿಡಿ ಉಳಿತಾಯವಾಗಲಿದೆ. ಯೂರಿಯಾ ಆಮದು ಕಡಿಮೆಯಾಗಿ ವಿದೇಶಿ ವಿನಿಮಯ ಉಳಿಯಲಿದೆ. ಎಲ್ಲ ದೃಷ್ಟಿಯಿಂದಲೂ ನ್ಯಾನೋ ಯೂರಿಯಾ ಲಾಭಕರವಾಗಿದ್ದು ಇದನ್ನು ಜನಪ್ರಿಯಗೊಳಿಸಲು ಸರ್ಕಾರವು ಗಮನಹರಿಸಲಿದೆ ಎಂದರು.

ಈ ಶತಮಾನ ನ್ಯಾನೋ ತಂತ್ರಜ್ಞಾನಕ್ಕೆ ಸೇರಿದ್ದಾಗಿದೆ

ಈ ಶತಮಾನ ನ್ಯಾನೋ ತಂತ್ರಜ್ಞಾನಕ್ಕೆ ಸೇರಿದ್ದಾಗಿದೆ

ಈ ಶತಮಾನ ನ್ಯಾನೋ ತಂತ್ರಜ್ಞಾನಕ್ಕೆ ಸೇರಿದ್ದಾಗಿದೆ. ಈಗ ಕೃಷಿಯಲ್ಲೂ ಇದರ ಪ್ರವೇಶವಾಗಿದೆ. ನ್ಯಾನೋ ಯೂರಿಯಾ ಕೃಷಿಗೆ ಹೊಸ ಆಯಾಮ ನೀಡಲಿದೆ. ಮಣ್ಣಿನ ಪೌಷ್ಟಿಕಾಂಶ ಕಾಪಾಡಿಕೊಳ್ಳುವುದರ ಜೊತೆಗೆ ಸಾಗುವಳಿ ಹಾಗೂ ಸಾಗಣೆ ವೆಚ್ಚದಲ್ಲಿ ಅಪಾರ ಉಳಿತಾಯ ಮಾಡಲಿದೆ ಎಂದು ಇಫ್ಕೊ ವ್ಯವಸ್ಥಾಪಕ ನಿರ್ದೇಶಕ ಡಾ. ಯು.ಎಸ್. ಅವಸ್ಥಿ ತಿಳಿಸಿದರು

ಇಫ್ಕೋ ನಿರ್ದೇಶಕ (ಮಾರುಕಟ್ಟೆ) ಯೋಗೇಂದ್ರಕುಮಾರ್ ಮಾತನಾಡಿ ಆರಂಭಿಕವಾಗಿ 28 ಕೋಟಿ ಬಾಟಲಿ (500 ಎಂಎಲ್) ನ್ಯಾನೋ ಯೂರಿಯಾ ಉತ್ಪಾದಿಸಲಾಗುತ್ತಿದೆ. ಇದರ ಬೆಲೆ ಬಾಟಲಿಗೆ 240 ರೂ. ಯಾವುದೇ ರೀತಿಯ ಸಬ್ಸಿಡಿ ಇಲ್ಲದಿರುವುದರಿಂದ ಇದನ್ನು ಯಾವುದೇ ಕಾಗದಪತ್ರ ಇಲ್ಲದೆ ಯಾರೂ ಬೇಕಾದರೂ ಖರೀದಿಸಬಹುದು ಎಂದರು.

ಕೀಟನಾಶಕ ಸಲಕರಣೆಯನ್ನೇ ಬಳಸಿ ಇದನ್ನು ಸಿಂಪಡಿಸಿ

ಇಫ್ಕೋ ಕರ್ನಾಟಕ ಮಾರುಕಟ್ಟೆ ವ್ಯವಸ್ಥಾಪಕ ಡಾ ಸಿ ನಾರಾಯಣಸ್ವಾಮಿ ಮಾತನಾಡಿ - ನ್ಯಾನೋ ಯೂರಿಯಾವನ್ನು ಕೀಟನಾಶಕ ಸಿಂಪರಣೆ ಮಾಡಿದಂತೆಯೇ ಮಾಡಬೇಕಾಗುತ್ತದೆ. ಮಾಮೂಲಿ ರಸಗೊಬ್ಬರಗಳನ್ನು ಮಣ್ಣಿನಲ್ಲಿ ಬೆರೆಸಿದಂತೆ ಬೆರೆಸುವುದು ಅಲ್ಲ. ಒಂದು ಲೀಟರ್ ನೀರಿಗೆ ಕೇವಲ 2 ಎಂಎಲ್ ನ್ಯಾನೋ ಯೂರಿಯಾ ಮಿಶ್ರಣ ಮಾಡಿದರೆ ಸಾಕು. ಕೀಟನಾಶಕ ಸಲಕರಣೆಯನ್ನೇ ಬಳಸಿ ಇದನ್ನು ಸಿಂಪಡಿಸಬಹುದು ಎಂದು ವಿವರಿಸಿದರು.

English summary
Indian Farmers Fertiliser Cooperative (IFFCO) will launch Nano Urea in the market next month. 500-ml Nano Urea, which costs 240 rupees, is equivalent to 45kg of normal urea.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X