ದೇಶದ ಎದುರು ಗಂಭೀರ ಬರ : ಪ್ರಣಬ್

Pranab Mukharjee
ನವದೆಹಲಿ, ಆ. 11 : ಮುಂಗಾರುಮಳೆ ತೀವ್ರವಾದ ಕೊರತೆಯ ಹಿನ್ನೆಲೆಯಲ್ಲಿ ದೇಶ ಹಿಂದೆಂದೂ ಕಾಣದಂತಹ ಬರ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ. ಮಳೆ ಕೊರತೆಯಿಂದ ಮುಂದಿನ ದಿನಗಳಲ್ಲಿ ರೈತರಿಗೆ ಬದುಕು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿವೆ ಎಂದು ಕೇಂದ್ರ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬರ ಪರಿಸ್ಥಿತಿ ಎದುರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ರೈತರು ಸಹನೆಯಿದ್ದರೆ ಎಲ್ಲವೂ ಸುಸೂತ್ರವಾಗಲಿದೆ ಎಂದರು. ಬರ ಪರಿಸ್ಥಿತಿ ದೇಶದ ಆರ್ಥಿಕತೆ ಮೇಲೆ ಗಂಭೀರ ಪರಿಣಾಮ ಬೀರಲಿದ್ದು, ಸದ್ಯದ ಮಾಹಿತಿ ಪ್ರಕಾರ ದೇಶದ 161 ಜಿಲ್ಲೆಗಳಲ್ಲಿ ಬರದ ಛಾಯೆ ಖಚಿತವಾಗಿದೆ.

ಕೇಂದ್ರದ ಹವಾಮಾನ ಇಲಾಖೆ ಪ್ರಕಾರ ಜೂನ್ 1 ರಿಂದ ಅಗಸ್ಟ್ 5ರ ವರೆಗೆ ಮುಂಗಾರು ಮಳೆ ಶೇ. 25 ರಷ್ಟು ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಪಂಜಾಬ ಮತ್ತು ಹರಿಯಾಣ ರಾಜ್ಯಗಳ ಸ್ಥಿತಿ ಇನ್ನಷ್ಟು ದಾರುಣವಾಗಲಿದೆ. ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಕರೆದು ಚರ್ಚಿಸಲಾಗಿದೆ. 13 ನೇ ಹಣಕಾಸು ಆಯೋಗದ ಚೇರಮನ್ ವಿಜಯ್ ಕೇಲ್ಕರ್, ಯೋಜನಾ ಆಯೋಗದ ಕಾರ್ಯದರ್ಶಿ ಸುಧಾ ಪಿಳ್ಳೆ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಬರ ಪರಿಸ್ಥಿತಿಗೆ ಎದುರಿಸುವ ಎಲ್ಲ ಸಾಧ್ಯಾಸಾಧ್ಯತೆಗಳನ್ನು ಚರ್ಚಿಸಲಾಗಿದೆ ಎಂದು ಪ್ರಣಬ್ ಮುಖರ್ಜಿ ಹೇಳಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+