ಸಕ್ಕರೆ ಕಾರ್ಖಾನೆಗಳಿಗೆ ಕೇಂದ್ರದ ಬಂಪರ್ ಕೊಡುಗೆ!

ನವದೆಹಲಿ, ಡಿ.6 : ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದ ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನೀಡುವ ವಿವಾದ ಬಗೆಹರಿದಿದೆ. ಸಕ್ಕರೆ ಕಾರ್ಖಾನೆಗಳ ಸಮಸ್ಯೆಗಳಿಗೆ ಸ್ಪಂಧಿಸಿರುವ ಕೇಂದ್ರ ಸರ್ಕಾರ, ಸಕ್ಕರೆ ಕಾರ್ಖಾನೆಗಳಿಗೆ ಸುಮಾರು 7,200 ಕೋಟಿ ಪ್ಯಾಕೇಜ್ ಅನ್ನು ಘೋಷಿಸಿದೆ. ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಇದನ್ನು ಖಚಿತಪಡಿಸಿದ್ದಾರೆ.

ಶುಕ್ರವಾರ ದೆಹಲಿಯ ಕೃಷಿ ಭವನದಲ್ಲಿ ನಡೆದ ಕೇಂದ್ರ ಸಚಿವರ ಉನ್ನತಾಧಿಕಾರಿಗಳ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ನಂತರ ಮಾಡನಾಡಿದ ಕೇಂದ್ರ ಕೃಷಿ ಸಚಿವ ಶರದ್ ಪವಾರ್, ಸಕ್ಕರೆ ಕಾರ್ಖಾನೆಗಳನ್ನು ಹೆಚ್ಚು ಸದೃಡಗೊಳಿಸುವ ಆಶಯವನ್ನು ಕೇಂದ್ರ ಸರ್ಕಾರ ಹೊಂದಿದ್ದು, ಇದಕ್ಕಾಗಿ ಸುಮಾರು 7,200 ಕೋಟಿಯಷ್ಟು ಪ್ಯಾಕೇಜ್ ಅನ್ನು ಘೋಷಿಸಲಾಗಿದೆ ಎಂದರು. (ಸಕ್ಕರೆ ಕಾಯಿಲೆ ಶಮನಗೊಳಿಸಿದ ಸಿದ್ದರಾಮಯ್ಯ)

Sharad Pawar

ಈ ಪ್ಯಾಕೇಜ್ ಹಣವನ್ನು ಕಾರ್ಖಾನಗಳಿಗೆ ಬಡ್ಡಿ ರಹಿತ ಸಾಲವಾಗಿ ನೀಡಲಾಗುವುದು ಎಂದು ಹೇಳಿದ ಅವರು, ಕಚ್ಚಾ ಸಕ್ಕರೆಗೂ ಸಹ ಪ್ರೋತ್ಸಾಹ ಧನ ನೀಡಲು ಕೇಂದ್ರ ನಿರ್ಧರಿಸಿದೆ ಎಂದು ತಿಳಿಸಿದರು. ಸಕ್ಕರೆ ಕಾರ್ಖಾನೆಗಳನ್ನು ಆರ್ಥಿಕವಾಗಿ ಸಮರ್ಥಗೊಳಿಸಲು ಸರ್ಕಾರ ಬದ್ಧವಾಗಿದೆ. ಆರ್ಥಿಕವಾಗಿ ಕಾರ್ಖಾನೆಗಳು ಹೆಚ್ಚು ಸದೃಡಗೊಂಡರೆ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ಸಕ್ಕರೆ ಕಾರ್ಖನೆಗಳು ಬ್ಯಾಂಕುಗಳಲ್ಲಿ ಪಡೆಯುವ ಸಾಲಕ್ಕೆ ಸರ್ಕಾರವೇ ಬಡ್ಡಿ ಕಟ್ಟುತ್ತದೆ. ಆದ್ದರಿಂದ ಬಡ್ಡಿ ರಹಿತವಾಗಿ ಸಾಲ ಪಡೆದ ಕಾರ್ಖಾನೆಗಳು ಕಬ್ಬು ಬೆಳೆಯುವ ರೈತರಿಗೆ ಹೆಚ್ಚಿನ ಬೆಲೆ ನೀಡಬೇಕು ಎಂದು ಹೇಳಿದ್ದಾರೆ. ಇದರಿಂದ ಕರ್ನಾಟಕ ಸೇರಿದಂತೆ ಕಬ್ಬು ಬೆಳೆಯುವ ರಾಜ್ಯಗಳ ಸಕ್ಕರೆ ಕಾರ್ಖನೆಗಳಿಗೆ ಕೇಂದ್ರ ಬಂಪರ್ ಕೊಡುಗೆ ನೀಡಿದೆ.

ಕರ್ನಾಟಕದಲ್ಲಿ ಕಬ್ಬಿಗೆ ಬೆಂಬಲ ಬೆಲೆ ನೀಡಬೇಕು ಎಂಬ ರೈತರ ಒತ್ತಾಯಕ್ಕೆ ಮಣಿದಿದ್ದ ಸರ್ಕಾರ, ಪ್ರತಿ ಟನ್ ಕಬ್ಬಿಗೆ 2,650 ರುಪಾಯಿ ಬೆಂಬಲ ಬೆಲೆಯನ್ನು ಘೋಷಿಸಿತ್ತು. ಇದಕ್ಕೆ ಸಕ್ಕರೆ ಕಾರ್ಖಾನೆಗಳು ವಿರೋಧ ವ್ಯಕ್ತಪಡಿಸಿದ್ದವು. ಈ ಸಮಸ್ಯೆಯ ಪರಿಹಾರಕ್ಕೆ ಮುಂದಾಗುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದರು. ಸದ್ಯ ಕೇಂದ್ರದ ಪ್ಯಾಕೇಜ್ ಘೋಷಣೆಯಿಂದಾಗಿ ಸಕ್ಕರೆ ಕಾರ್ಖನೆಗಳ ಸಮಸ್ಯೆ ಬಗೆಹರಿದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+