ತೋಟಗಾರಿಕೆ ಮೇಳದಲ್ಲಿ ಅರ್ಥಪೂರ್ಣ ಹೆಣ್ಣು ಮಕ್ಕಳ ವಿಜ್ಞಾನ ದಿನಾಚರಣೆ!
ಬೆಂಗಳೂರು, ಫೆ. 11: ರಾಷ್ಟ್ರೀಯ ತೋಟಗಾರಿಕೆ ಮೇಳದಲ್ಲಿ ನಾಲ್ಕನೇ ದಿನವಾದ ಗುರುವಾರ ನಡೆದ ತಾಂತ್ರಿಕ ಗೋಷ್ಠಿಯಲ್ಲಿ, ಐಐಹೆಚ್‌ಆರ್‌ನ ಕಿರಿಯ ಮಹಿಳಾ ವಿಜ್ಞಾನಿಯೊಬ್ಬರಿಗೆ ಗೋಷ್ಠಿಯ ನೇತೃತ್ವವನ್ನು ನೀಡುವ ಮೂಲಕ ಅಂತರಾಷ್ಟ್ರೀಯ ಮಹಿಳಾ ಮತ್ತು ಹೆಣ್ಣು ಮಕ್ಕಳ ವಿಜ್ಞಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಐಐಹೆಚ್ಆರ್ ಹಣ್ಣು ಬೆಳೆ ವಿಭಾಗದ ಕಿರಿಯ ಸಂಶೋಧಕಿ ಡಾ. ಪಿ.ಎಲ್ ಅನುಷ್ಮಾ ಅವರು ತೋಟಗಾರಿಕೆ ಬೆಳೆಗೆ ಸಂಬಂಧಿಸಿದಂತೆ ನಡೆದ ತಾಂತ್ರಿಕಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು.
ತೋಟಗಾರಿಕೆ, ಕೃಷಿ, ಹೈನುಗಾರಿಕೆ, ಮೀನುಗಾರಿಕೆ ಮತ್ತು ಇದಕ್ಕೆ ಸಂಬಂಧಿಸಿದ ಉಪ ಉದ್ಯಮದಲ್ಲಿ ಹೆಣ್ಣು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಹಾಗೆಯೇ ಕೃಷಿ ಮತ್ತು ತೋಟಗಾರಿಕೆಯಲ್ಲಿ ಪದವಿ ಪಡೆಯತ್ತಿರುವ ಹೆಣ್ಣು ಮಕ್ಕಳ ಸಂಖ್ಯೆ ಪ್ರತಿ ರಾಜ್ಯದಲ್ಲಿ ಶೇ 35 ರಷ್ಟಿದೆ, ಕೇರಳದಲ್ಲಿ ಶೇ 65 ಕ್ಕೂ ಹೆಚ್ಚಿನ ಹೆಣ್ಣು ಮಕ್ಕಳು ಕೃಷಿ ಮತ್ತು ತೋಟಗಾರಿಕೆ ವಿಭಾಗದಲ್ಲಿ ಪದವಿ ಕಲಿಯುತ್ತಿದ್ದಾರೆ ಎಂದು ಅನುಷ್ಮಾ ತಿಳಿಸಿದರು.
ಹೆಣ್ಣು ಮಕ್ಕಳು ಇತ್ತೀಚಿನ ದಿನಗಳಲ್ಲಿ ತೋಟಗಾರಿಕೆಯನ್ನು ಒಂದು ಉದ್ಯಮವನ್ನಾಗಿ ಸ್ವೀಕರಿಸಿದ್ದಾರೆ. ಸ್ವಸಹಾಯ ಸಂಘಗಳು ಮತ್ತು ಮನೆಯ ವಾತಾವರಣದಲ್ಲಿ ಹೆಣ್ಣು ಮಕ್ಕಳಿಗೆ ತೋಟಗಾರಿಕೆ ಮತ್ತು ಕೃಷಿಯಲ್ಲಿ ಅನುಭವ ಸಿಗುವುದರಿಂದ ಅವರು ತೋಟಗಾರಿಕೆ ಮತ್ತು ಕೃಷಿಯಲ್ಲಿ ಪದವಿ ಪಡೆಯಲು ಆಸಕ್ತಿ ತೋರಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಅನುಷ್ಮಾ ಪ್ರಕಾರ ತೋಟಗಾರಿಕೆ ಮತ್ತು ಕೃಷಿಯಲ್ಲಿ ಇತ್ತೀಚೆಗೆ ಹಚ್ಚಿನ ಉದ್ಯೋಗವಕಾಶಗಳು ಸಿಗುವುದರಿಂದ ಹೆಚ್ಚಿನ ಹೆಣ್ಣು ಮಕ್ಕಳ ಪ್ರವೇಶಕ್ಕೆ ಇದೂ ಒಂದು ಕಾರಣ ಎಂದರು.
ತಾಂತ್ರಿಕ ಗೋಷ್ಠಿ: ಮೆಘಾಲಯ, ಮಣಿಪುರ, ಮಿಜೋರಾಂ, ನಾಗಲ್ಯಾಂಡ್, ಮಹಾರಾಷ್ಟ್ರ, ಗುಜರಾತ್ , ಮಧ್ಯಪ್ರದೇಶ ಮತ್ತು ಛತ್ತಿಸಘಢ ರಾಜ್ಯಗಳ ರೈತರು ಆನ್ ಲೈನ್ ನಲ್ಲಿ ನಡೆದ ತಾಂತ್ರಿಕ ಗೋಷ್ಠಿಯಲ್ಲಿ ಪಾಲ್ಗೊಂಡರು. ಮಾವು ಬೆಳೆಗೆ ಸಂಬಂಧಿಸಿದಂತೆ ವಿಜ್ಞಾನಿಗಳಿಂದ ಮಾಹಿತಿ ಪಡೆದರು. ನಾಗಲ್ಯಾಂಡ್, ಮಿಜೋರಾಂ, ಮೇಘಾಲಯ ಮತ್ತು ಮಣಿಪುರು ರೈತರಿಗೆ ಬಾಳೆ ಗಿಡ ರೋಗ ತಡೆಗಟ್ಟುವ ಸಂಬಂಧ ವಿಜ್ಞಾನಿಗಳು ಮಾಹಿತಿ ನೀಡಿದರು. ಬಾಳೆಗಿಡವನ್ನು ಕಾಡುವ ಸಿಗೋಟಕ ರೋಗವನ್ನು ತಡೆಗಟ್ಟುವುದು ಹೇಗೆ ಎನ್ನುವ ಕುರಿತು ರಾಷ್ಟ್ರೀಯ ಸಂಶೋಧನಾ ಕೇಂದ್ರದ ವಿಜ್ಞಾನಿ ಡಾ.ರಾಮಜಯಮ್ ರೈತರಿಗೆ ಈಶಾನ್ಯ ರಾಜ್ಯಗಳ ರೈತರಿಗೆ ಮಾಹಿತಿ ಒದಗಿಸಿದರು. ರೈತರಿಂದ ಮುಂಚಿತವಾಗಿ ಪ್ರಶ್ನೆಗಳನ್ನು ತರಿಸಿಕೊಳ್ಳಲಾಗಿತ್ತು.
ಮಹಾರಾಷ್ಟ್ರ, ಗುಜರಾತ್ ಮತ್ತು ಗೋವ ರಾಜ್ಯಗಳ ರೈತರು ಸೀಬೆ, ಮಾವು, ದ್ರಾಕ್ಷಿ, ದಾಳಿಂಬೆ, ಕಿತ್ತಲೆ, ಹಲಸು ಮತ್ತಿತರ ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ವಿಜ್ಞಾನಿಗಳಿಗೆ ಕೇಳಿದ್ದರು. ಐಸಿಎಆರ್ ನ ವಿಜ್ಞಾನಿಗಳು ಈ ಕುರಿತು ಮಾಹಿತಿಯನ್ನು ರೈತರಿಗೆ ಪೂರೈಸಿದರು.
ಮಹಾರಾಷ್ಟ್ರದ ರೈತರು ದಾಳಿಂಬೆಗೆ ಬರುವ ಗಂಟು ಹುಳ ತಡೆ ಕುರಿತು ವಿಜ್ಞಾನಿಗಳಿಂದ ಮಾಹಿತಿ ಆಪೇಕ್ಷಿಸಿದ್ದರು. ಉತ್ತರವನ್ನು ಆನ್ ಲೈನ್ ಸಂವಾದದಲ್ಲಿ ನೀಡಲಾಯಿತು. ಮಧ್ಯಪ್ರದೇಶ ರೈತರಿಗೆ ಹಲಸು , ಮಾವು, ಪಪ್ಪಾಯಿ ಬೆಳೆಗಳಿಗೆ ಸಂಬಂಧಿಸಿದ ರೋಗ ತಡೆ, ಕೊಯ್ಲೋತ್ತರ ನಿರ್ವಹಣೆ ಕುರಿತು ಮಾಹಿತಿ ಒದಗಿಸಲಾಯಿತು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications