ಬರಪೀಡಿತ ಜಗಳೂರು ತಾಲೂಕಿನ 48 ಗ್ರಾಮಗಳ ಜನರಿಗೆ ಪ್ಲೋರೈಡ್ ನೀರೇ ಗತಿ: ಈ ಬಗ್ಗೆ ಸಚಿವ S.S.ಮಲ್ಲಿಕಾರ್ಜುನ್ ಹೇಳಿದ್ದೇನು?
ದಾವಣಗೆರೆ, ನವೆಂಬರ್, 22: ಜಗಳೂರು ತಾಲ್ಲೂಕಿನಲ್ಲಿ 409 ಮೀ.ಮೀ ವಾಡಿಕೆಗೆ 361 ಮೀ.ಮೀ ಮಳೆಯಾಗಿದೆ. ಜುಲೈ ತಿಂಗಳಲ್ಲಿ ಮಾತ್ರ ಹೆಚ್ಚು ಮಳೆಯಾಗಿದ್ದು, ಆಗಸ್ಟ್, ಸೆಪ್ಟೆಂಬರ್‌ನಲ್ಲಿ ಮಳೆ ತೀವ್ರ ಕೊರತೆಯಿಂದ ಶೇಕಡಾ 80ರಷ್ಟು ಬೆಳೆ ನಷ್ಟವಾಗಿದೆ. ಈ ವರ್ಷ 18,250 ರೈತರು ಫಸಲ್ ಭೀಮಾ ಯೋಜನೆಗೆ ನೊಂದಾಯಿಸಿದ್ದಾರೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದರು. ಇನ್ನು ತಾಲೂಕಿನ 48 ಗ್ರಾಮಗಳು ಪ್ಲೋರೈಡ್‌ನಿಂದ ಕೂಡಿದ್ದು, ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭರವಸೆ ನೀಡಿದರು.
ದಾವಣಗೆರೆ ಜಿಲ್ಲೆಯನ್ನು ಈಗಾಗಲೇ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲಾಗಿದೆ. ಕೇಂದ್ರದ ಕೇಂದ್ರ ಬರ ಅಧ್ಯಯನ ತಂಡ ಜಿಲ್ಲೆಗೆ ಬಂದಾಗ ಎನ್‍ಡಿಆರ್‌ಎಫ್ ಮಾರ್ಗಸೂಚಿನ್ವಯ 259 ಕೋಟಿ ರೂಪಾಯಿ ಬೆಳೆ ನಷ್ಟದ ವರದಿಯನ್ನು ನೀಡಲಾಗಿದೆ. ಜಗಳೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಉಪಸ್ಥಿತಿಯಲ್ಲಿ ನಡೆದ ತಾಲ್ಲೂಕಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ನೀಡಿರುವ ಮಾಹಿತಿ ಇದು.

ಈ ವೇಳೆ ಮಾತನಾಡಿದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು, ಕೂಡಲೇ ಕೇಂದ್ರ ಸರ್ಕಾರವು 38 ಕೋಟಿ ರೂಪಾಯಿ ಬೆಳೆ ಪರಿಹಾರ ಬಿಡುಗಡೆ ಮಾಡಬೇಕಾಗಿದೆ. ಬೆಳೆವಿಮೆ ಮಾಡಿಸಿದ ರೈತರಿಗೆ ವಿಮಾ ಪರಿಹಾರ ಸಿಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಶುದ್ದ ಕುಡಿಯುವ ನೀರಿನ ಘಟಕ ನಿವಾರಣೆ
ಜಗಳೂರು ತಾಲ್ಲೂಕು ಬರ ಪೀಡಿತ ಪ್ರದೇಶವಾಗಿದ್ದು, 48 ಗ್ರಾಮಗಳು ಪ್ಲೋರೈಡ್ ನಿಂದ ಕೂಡಿವೆ, ಈ ಗ್ರಾಮಗಳಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಿ ಮತ್ತು ಈಗಾಗಲೇ ಸ್ಥಾಪಿಸಲಾಗಿರುವ ಘಟಕಗಳನ್ನುಸರಿಯಾದ ನಿರ್ವಹಣೆ ಮಾಡಿ ಜನರಿಗೆ ತೊಂದರೆಯಾಗದಂತೆ ನೀರು ಪೂರೈಕೆ ಮಾಡಲು ಸೂಚಿಸಿದ ಅವರು, ತಾಲ್ಲೂಕಿನಲ್ಲಿ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅನುಷ್ಠಾನವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಫ್ಲೋರೈಡ್ ಸಮಸ್ಯೆ ನಿವಾರಣೆ ಆಗಲಿದೆ ಎಂದರು.
ಜಿಲ್ಲೆಗೆ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಸಹಾಯಧನ ಯೋಜನೆಯಡಿ ಈ ವರ್ಷ 50 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ಆದರಲ್ಲಿ ಜಗಳೂರು ತಾಲ್ಲೂಕಿಗೆ 5 ಕೋಟಿ ರೂಪಾಯಿ ಅನುದಾನ ನೀಡಲಾಗುತ್ತಿದೆ. ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಅನುದಾನವನ್ನು ಬೇಡಿಕೆಗೆ ಅನುಸಾರವಾಗಿ ಒದಗಿಸಲಾಗುತ್ತದೆ. ಯಾವುದೇ ಅನುದಾನದ ಕೊರತೆ ಇರುವುದಿಲ್ಲ ಎಂದರು.
ಬರ ಹಿನ್ನೆಲೆಯಲ್ಲಿ ಜನರಿಗೆ ಹೆಚ್ಚಿನ ಉದ್ಯೋಗ ನೀಡಬೇಕಾಗಿದೆ. ಪ್ರತಿ ಕುಟುಂಬಕ್ಕೆ ಈಗಿರುವ 100 ದಿನಗಳಿಂದ 150 ದಿನಗಳಿಗೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆಯಾಗಿಲ್ಲ. ಆದರೂ ಸಹ ಬೇಡಿಕೆಗೆ ಅನುಗುಣವಾಗಿ ಹೆಚ್ಚು ಖಾತರಿ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಸೂಚನೆ ನೀಡಿದರು. ಬಿಸ್ತುವಳ್ಳಿ, ದೇವಿಕೆರೆ, ಗುರುಸಿದ್ದಾಪುರ, ಹನುಮಂತಪುರ, ಇಲ್ಲಿ ಶೇಕಡಾ 25ಕ್ಕಿಂತ ಕಡಿಮೆ ಉದ್ಯೋಗ ಖಾತರಿ ಕೆಲಸ ಮಾಡಲಾಗಿದೆ. ಇದರ ಪ್ರಗತಿಯನ್ನು ತಕ್ಷಣವೇ ಕೈಗೊಳ್ಳಲು ಸೂಚಿಸಿದರು.
ತಾಲ್ಲೂಕಿನಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಟಾಸ್ಕ್ ಪೋರ್ಸ್ ಅಡಿ ಶಾಸಕರು ಸೂಚಿಸುವ ಗ್ರಾಮಗಳಿಗೆ ತಕ್ಷಣವೇ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು. ಈ ವೇಳೆ ಗ್ರಾಮೀಣ ಕುಡಿಯುವ ನೀರು ಪೂರೈಕೆ ವಿಭಾಗದ ಅಧಿಕಾರಿಗಳು ತಾಲ್ಲೂಕಿನ 168 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 472 ಕೋಟಿ ರೂಗಳಿಗೆ ಯೋಜನೆ ತಯಾರಿಸಿದ್ದು, ಇದು ಅನುಮೋದನೆಯ ಹಂತದಲ್ಲಿ ಇದೆ ಎಂದು ತಿಳಿಸಿದರು.
ಜಗಳೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 63 ಕೊಳವೆ ಬಾವಿಗಳು ಮತ್ತು ಶಾಂತಿ ಸಾಗರ ಯೋಜನೆ ಮೂಲಕ ನೀರು ಪೂರೈಕೆ ಮಾಡಲಾಗುತ್ತದೆ ಎಂದು ಮುಖ್ಯಾಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಈ ವೇಳೆ ಸಚಿವರು ಪಟ್ಟಣಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡಲು ಸೂಚನೆ ನೀಡಿದರು.
ತಾಲ್ಲೂಕಿನಲ್ಲಿ 38,024 ಗೃಹ ಲಕ್ಷ್ಮೀ ಫಲನುಭವಿಗಳಿಗೆ ಮಾಸಿಕ 2000 ರೂಪಾಯಿ ಪಾವತಿಸಲಾಗಿದೆ. ಆದರೆ 1106 ಫಲಾನುಭವಿಗಳಿಗೆ ಆಧಾರ್ ಲಿಂಕ್ ಆಗದ ಕಾರಣ ಪಾವತಿ ಆಗಿರುವುದಿಲ್ಲ. ಇವರಿಗೆ ಆಧಾರ್ ಲಿಂಕ್ ಮಾಡಿಸಿ ಯೋಜನೆಯನ್ನು ತಲುಪಿಸಲು ಸೂಚನೆ ನೀಡಿದರು.
ಶಾಸಕ ಬಿ.ದೇವೆಂದ್ರಪ್ಪ ಮಾತಾನಾಡಿ, ತಾಲ್ಲೂಕಿನ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಸಮಸ್ಯೆ ಇದ್ದ ಕಡೆ ತುರ್ತು ಕ್ರಮಗಳು ಆಗಬೇಕು. ಮುಂದಿನ ದಿನಗಳಲ್ಲಿ ನೀರಿನ ಅಭಾವ ಆಗುತ್ತದೆ. ಹೊಸ ಕೊಳವೆ ಬಾವಿ ಸಫಲತೆ ಶೇಕಡಾ 50ಕ್ಕೆ ಇಳಿದಿದೆ. ಅಗತ್ಯವಿದ್ದಲ್ಲಿ ಖಾಸಗಿ ಕೊಳವೆ ಬಾವಿ ಗುರಿತಿಸಿಟ್ಟುಕೊಳ್ಳಲು ತಿಳಿಸಿ, ಇತ್ತಿಚೀನ ದಿನಗಳಲ್ಲಿ ಬರದ ಜೊತೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚುತ್ತಿದೆ. ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಕೈಗೆ ಸಿಗುತ್ತಿಲ್ಲ, ಅವರ ಮೊಬೈಲ್ ಸ್ವಿಚ್ ಆಪ್ ಆಗಿರುತ್ತದೆ. ತಮ್ಮ ಕಾರ್ಯವೈಖರಿಯನ್ನು ಸರಿಪಡಿಸಿಕೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳುವ ಎಚ್ಚರಿಕೆ ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುರೇಶ್ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಹಾಗೂ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications