ರೈತರ ಹೋರಾಟದ ವೇಳೆ ಸಚಿವ ಕಾಗೋಡು ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಶಿವಮೊಗ್ಗ, ಜನವರಿ 14: ಹೊಸನಗರ ತಾಲೂಕಿನ ನಗರ ನಾಡಕಚೇರಿ ಎದುರು ನಡೆಯುತ್ತಿದ್ದ ರೈತರ ಹೋರಾಟದಲ್ಲಿ ಪಾಲ್ಗೊಂಡಿದ್ದ ಮಾಜಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥಗೊಂಡಿದ್ದಾರೆ.
ಹೋರಾಟದಲ್ಲಿ ಪಾಲ್ಗೊಂಡಿದ್ದ ಕಾಗೋಡು ತಿಮ್ಮಪ್ಪ ವಾಂತಿ ಮಾಡಿಕೊಂಡು ಪ್ರಜ್ಞೆ ಕಳೆದುಕೊಂಡು ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ಆಗ ಸ್ಥಳಕ್ಕೆ ಬಂದ ವೈದ್ಯರು ಪ್ರಾಥಮಿಕ ಆರೈಕೆ ಮಾಡಿ ಸೂಕ್ತ ಚಿಕಿತ್ಸೆ ನೀಡಿ ನಗರ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳುಹಿಸಿರುವುದಾಗಿ ವೈದ್ಯರು ತಿಳಿಸಿದ್ದಾರೆ. ತೀವ್ರವಾಗಿ ಅಸ್ವಸ್ಥರಾಗಿರುವ ಕಾಗೋಡು ತಿಮ್ಮಪ್ಪ ಅರೆ ಪ್ರಜ್ಞಾವಸ್ಥೆಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.












Click it and Unblock the Notifications