ಕಲಬುರಗಿ: ಸರ್ಕಾರದ ವಿರುದ್ಧ ಬಿಜೆಪಿಯಿಂದ ಉಪವಾಸ ಸತ್ಯಾಗ್ರಹ

ಕಲಬುರಗಿ, ನವೆಂಬರ್ 20: ರೈತರ ಸಮಸ್ಯೆ ಸೇರಿದಂತೆ ಬಗೆಹರಿಸುವುದು ಸೇರಿದಂತೆ ರಾಜ್ಯದ ಹಲವು ಸಮಸ್ಯೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕಲಬುರಗಿಯಲ್ಲಿ ಬಿಜೆಪಿಯು ಆಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದೆ.

ಕಲಬುರಗಿ ಬಿಜೆಪಿ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ನೇತೃತ್ವದಲ್ಲಿ ಇಂದು ಬೆಳಿಗ್ಗೆ 11 ಗಂಟೆಯಿಂದ ಜೇವರ್ಗಿಯ ಮಿನಿ ವಿಧಾನಸೌಧದ ಆವರಣದಲ್ಲಿ ಬಿಜೆಪಿಯು ಉಪವಾಸ ಸತ್ಯಾಗ್ರಹ ಆರಂಭಿಸಲಿದೆ.

ಜೇವರ್ಗಿಯನ್ನು ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿದ್ದರೂ ಸಹ ಈ ವರೆಗೆ ಬರ ನಿರ್ಮೂಲನಾ ಕಾಮಗಾರಿಗಳು ಪ್ರಾರಂಭವಾಗಿಲ್ಲ, ಇಲ್ಲಿನ ರೈತರ ಸಂಕಷ್ಟಗಳ ಬಗ್ಗೆ ಪದೇ-ಪದೇ ಸರ್ಕಾರದ ಗಮನಕ್ಕೆ ತಂದರೂ ಸಹ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಬೆಜೆಪಿ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ.

Kalburagi BJP hunger protest against coalition government

ಜೇವರ್ಗಿಯ ಡಿಸಿಸಿ ಬ್ಯಾಂಕ್‌ನಲ್ಲಿ ರೈತರ ಸಾಲಮನ್ನಾ ಮಾಡುವಲ್ಲಿ ಅವ್ಯವಹಾರ ನಡೆದಿದ್ದು, ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು ಎಂದು ಸಹ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.

ಉಪವಾಸಕ್ಕೆ ಬಿಜೆಪಿ ಕಾರ್ಯಕರ್ತರು, ಸ್ಥಳೀಯ ಮುಖಂಡರು, ಬಿಜೆಪಿ ಮುಖಂಡ ಮಾಲಿಕಯ್ಯ ಗುತ್ತೇದಾರ್ ಅವರುಗಳು ಭಾಗವಹಿಸಲಿದ್ದಾರೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+