ಕೃಷಿ ವಾಣಿಜ್ಯ ಸಮ್ಮೆಳನದಲ್ಲಿ 1.10 ಲಕ್ಷ ಕೋಟಿ ಹೂಡಿಕೆಗೆ ಒಪ್ಪಂದ

ಎರಡು ದಿನಗಳ ಕಾಲ ನಡೆದ ಸಮ್ಮೇಳನದ ಮುಕ್ತಾಯ ಸಂದರ್ಭದಲ್ಲಿ ಮಾತನಾಡಿದ ಅವರು ಸರ್ಕಾರ ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ 42 ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಒಡಂಬಡಿಕೆಗೆ ಸಹಿ ಹಾಕಿರುವುದಾಗಿ ತಿಳಿಸಿದರು.
ಈ ಸಮ್ಮೇಳನ ನಮ್ಮ ರಾಜ್ಯದ ರೈತರಿಗೆ ಮತ್ತು ಉದ್ಯಮಿಗಳಿಗೂ ಲಾಭ ತರುವಲ್ಲಿ ಯಶಸ್ವಿಯಾಗುವುದಕ್ಕೆ ಮುನ್ನುಡಿಯಾಗಿದೆ ಎಂದ ಅವರು, ಈ ಸಮ್ಮೇಳನದಲ್ಲಿ ನಡೆದ ಕೃಷಿ ಮೂಲಭೂತ ವಯಲ, ಹೈನುಗಾರಿಕೆ, ಮೀನುಗಾರಿಕೆ, ರೇಷ್ಮೆ ಸಾಕಾಣಿಕೆ ಮತ್ತು ಪಶು ಸಂಗೋಪನೆ ಮತ್ತು ಆಹಾರ ಸಂಸ್ಕರಣೆ ಬಗೆಗಿನ ವಿಚಾರಣೆ ಭಾರೀ ಅವಕಾಶಗಳಿಗೆ ಎಡೆ ಮಾಡಿಕೊಡುತ್ತದೆ ಎಂದು ತಿಳಿಸಿದ್ದಾರೆ.
ಈ ಸಮ್ಮೇಳನಕ್ಕೆ ಸಂಬಂಧಿಸಿದಂತೆ ರೈತರು ಪ್ರದರ್ಶಿಸಿದ ಆತಂಕದ ಕುರಿತು ಮಾತನಾಡಿದ ಅವರು, ಹೆಚ್ಚು ಉತ್ಪಾದನೆಗೆ ಅವಶ್ಯಕ ತಂತ್ರಜ್ಞಾನದ ಬಳಕೆ ಕುರಿತು ರೈತರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ಸಮ್ಮೇಳನ ಹಮ್ಮಿಕೊಂಡಿದ್ದು, ಸಮ್ಮೇಳನದಿಂದ ಉತ್ಪಾದನೆ, ಉದ್ಯಮ ಮತ್ತು ರೈತರ ಆರ್ಥಿಕ ಸ್ಥಿತಿ ಉತ್ತಮಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಕೃಷಿ ಮತ್ತು ಕೃಷಿ ಆಧಾರಿತ ಕೈಗಾರಿಕೆಗಳ ಅಭಿವೃದ್ಧಿಗೆ ರೈತರ ಮತ್ತು ಕೈಗಾರಿಕೆಗಳ ನಡುವಣ ಹೊಂದಾಣಿಕೆಯೇ ಮುಖ್ಯ ಎಂದು ತಿಳಿಸಿದ್ದಾರೆ.












Click it and Unblock the Notifications