ಸೆ. 28ರ ಕರ್ನಾಟಕ ಬಂದ್; ಕೆಎಸ್ಆರ್‌ಟಿಸಿಯ ಪ್ರಕಟಣೆ
ಬೆಂಗಳೂರು, ಸೆಪ್ಟೆಂಬರ್ 27: ರೈತ, ದಲಿತ, ಕಾರ್ಮಿಕರ ಸಂಘಟನೆಗಳು ಒಟ್ಟಾಗಿ 'ಐಕ್ಯ ಹೋರಾಟ ಸಮಿತಿ' ಎಂಬ ಹೆಸರಿನಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಸೆಪ್ಟೆಂಬರ್ 28ರ ಸೋಮವಾರ ಬೆಳಗ್ಗೆ 6 ರಿಂದ ಸಂಜೆ 6ರ ತನಕ ಬಂದ್ ನಡೆಯಲಿದೆ.
ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಕೆಎಸ್ಆರ್‌ಟಿಸಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. 'ಬಂದ್‌ಗೆ ಸಂಬಂಧಪಟ್ಟಂತೆ, ಕೆಎಸ್ಆರ್‌ಟಿಸಿ ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ, ಎಂದಿನಂತೆ ಕಾರ್ಯಾಚರಣೆ ಇರಲಿದೆ' ಎಂದು ಹೇಳಿದೆ.

'ಪ್ರಯಾಣಿಕರಲ್ಲಿ ಯಾವುದೇ ಗೊಂದಲ ಹಾಗೂ ಆತಂಕ ಬೇಡ. ಸಾರಿಗೆ ವ್ಯವಸ್ಥೆಯು ಅಗತ್ಯ ಸೇವೆಯಾಗಿರುವುದರಿಂದ, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ, ಪ್ರಯಾಣಿಕರ ಬೇಡಿಕೆ ಹಾಗೂ ಅಗತ್ಯನುಸಾರ ಬಸ್ಸುಗಳ ಕಾರ್ಯಾಚರಣೆಯನ್ನು ಮಾಡಲಾಗುವುದು' ಎಂದು ಸ್ಪಷ್ಟಪಡಿಸಲಾಗಿದೆ.
ಆದ್ಯ ಗಮನಕ್ಕೆ:
— KSRTC (@KSRTC_Journeys) September 27, 2020
ನಾಳೆಯ ಬಂದ್ ಗೆ ಸಂಬಂಧಪಟ್ಟಂತೆ, ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ, ಎಂದಿನಂತೆ ಕಾರ್ಯಾಚರಣೆ ಇರಲಿದೆ.
ಪ್ರಯಾಣಿಕರಲ್ಲಿ ಯಾವುದೇ ಗೊಂದಲ ಹಾಗೂ ಆತಂಕ ಬೇಡ.
(1/2)
ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ, ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಬಂದ್‌ಗೆ ಕರೆ ನೀಡಿರುವ ವಿವಿಧ ಸಂಘಟನೆಗಳ ನಿಯೋಗದ ಜೊತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಡೆಸಿದ ಸಭೆ ವಿಫಲವಾಗಿದೆ.
ರೈತರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದ ಹಿನ್ನಲೆಯಲ್ಲಿ ಸಭೆ ವಿಫಲವಾಯಿತು. ಸಭೆ ವಿಫಲವಾದ ಹಿನ್ನಲೆಯಲ್ಲಿ ಕರ್ನಾಟಕ ಬಂದ್ ನಡೆಸುವ ತೀರ್ಮಾನವನ್ನು ಕೈಗೊಳ್ಳಲಾಗಿದೆ.












Click it and Unblock the Notifications