ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆ. 28ರ ಕರ್ನಾಟಕ ಬಂದ್; ಕೆಎಸ್ಆರ್‌ಟಿಸಿಯ ಪ್ರಕಟಣೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 27: ರೈತ, ದಲಿತ, ಕಾರ್ಮಿಕರ ಸಂಘಟನೆಗಳು ಒಟ್ಟಾಗಿ 'ಐಕ್ಯ ಹೋರಾಟ ಸಮಿತಿ' ಎಂಬ ಹೆಸರಿನಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಸೆಪ್ಟೆಂಬರ್ 28ರ ಸೋಮವಾರ ಬೆಳಗ್ಗೆ 6 ರಿಂದ ಸಂಜೆ 6ರ ತನಕ ಬಂದ್ ನಡೆಯಲಿದೆ.

ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಕೆಎಸ್ಆರ್‌ಟಿಸಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. 'ಬಂದ್‌ಗೆ ಸಂಬಂಧಪಟ್ಟಂತೆ, ಕೆ‌ಎಸ್ಆರ್‌ಟಿಸಿ ಬಸ್ಸುಗಳ ಕಾರ್ಯಾಚರಣೆಯಲ್ಲಿ‌ ಯಾವುದೇ ವ್ಯತ್ಯಯವಾಗುವುದಿಲ್ಲ, ಎಂದಿನಂತೆ ಕಾರ್ಯಾಚರಣೆ‌‌ ಇರಲಿದೆ' ಎಂದು ಹೇಳಿದೆ.

ಸೋಮವಾರ ಕರ್ನಾಟಕ ಬಂದ್; ಏನಿರುತ್ತೆ, ಏನಿರಲ್ಲ? ಸೋಮವಾರ ಕರ್ನಾಟಕ ಬಂದ್; ಏನಿರುತ್ತೆ, ಏನಿರಲ್ಲ?

Karnataka Bandh: KSRTC To Run Buses As Normal

'ಪ್ರಯಾಣಿಕರಲ್ಲಿ ಯಾವುದೇ ಗೊಂದಲ ಹಾಗೂ ಆತಂಕ ಬೇಡ. ಸಾರಿಗೆ ವ್ಯವಸ್ಥೆಯು ಅಗತ್ಯ ಸೇವೆಯಾಗಿರುವುದರಿಂದ, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ,‌ ಪ್ರಯಾಣಿಕರ ಬೇಡಿಕೆ ಹಾಗೂ ಅಗತ್ಯನುಸಾರ ಬಸ್ಸುಗಳ ಕಾರ್ಯಾಚರಣೆಯನ್ನು ಮಾಡಲಾಗುವುದು' ಎಂದು ಸ್ಪಷ್ಟಪಡಿಸಲಾಗಿದೆ.

ರೈತರ ಜೊತೆಗಿನ ಸಿಎಂ ಸಭೆ ವಿಫಲ; ಸೋಮವಾರ ಕರ್ನಾಟಕ ಬಂದ್ ರೈತರ ಜೊತೆಗಿನ ಸಿಎಂ ಸಭೆ ವಿಫಲ; ಸೋಮವಾರ ಕರ್ನಾಟಕ ಬಂದ್

ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ, ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಬಂದ್‌ಗೆ ಕರೆ ನೀಡಿರುವ ವಿವಿಧ ಸಂಘಟನೆಗಳ ನಿಯೋಗದ ಜೊತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಡೆಸಿದ ಸಭೆ ವಿಫಲವಾಗಿದೆ.

ಶಿವಮೊಗ್ಗ: ಸೋಮವಾರದ ಕರ್ನಾಟಕ ಬಂದ್ ಗೆ ಸಹಕರಿಸಲು ರೈತ ಸಂಘ ಕರೆಶಿವಮೊಗ್ಗ: ಸೋಮವಾರದ ಕರ್ನಾಟಕ ಬಂದ್ ಗೆ ಸಹಕರಿಸಲು ರೈತ ಸಂಘ ಕರೆ

ರೈತರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದ ಹಿನ್ನಲೆಯಲ್ಲಿ ಸಭೆ ವಿಫಲವಾಯಿತು. ಸಭೆ ವಿಫಲವಾದ ಹಿನ್ನಲೆಯಲ್ಲಿ ಕರ್ನಾಟಕ ಬಂದ್‌ ನಡೆಸುವ ತೀರ್ಮಾನವನ್ನು ಕೈಗೊಳ್ಳಲಾಗಿದೆ.

English summary
Farmers called Karnataka bandh on September 28, 2020 to protest against farmer and labor against move by the government. KSRTC said that it will bus a as normal service.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X