Karnataka Bandh Live Updates: ಕರ್ನಾಟಕ ಬಂದ್: ಕೃಷಿ ವಿರೋಧಿ ನೀತಿಗೆ ರೈತರ ಆಕ್ರೋಶ
ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಇಂದು ಸೆಪ್ಟೆಂಬರ್ 28ರ ಸೋಮವಾರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು. ರೈತರು ಕರೆ ನೀಡಿರುವ ಬಂದ್‌ಗೆ ಕನ್ನಡಪರ ಸಂಘಟನೆಗಳು ಸೇರಿದಂತೆ ರಾಜ್ಯ ವಿವಿಧ ಸಂಘಟನೆಗಳು ಬೆಂಬಲ ಘೋಷಣೆ ಮಾಡಿವೆ.
ರೈತ, ದಲಿತ, ಕಾರ್ಮಿಕರ ಸಂಘಟನೆಗಳು ಒಟ್ಟಾಗಿ "ಐಕ್ಯ ಹೋರಾಟ ಸಮಿತಿ' ಎಂಬ ಹೆಸರಿನಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಸೋಮವಾರ ಬೆಳಗ್ಗೆ 6 ರಿಂದ ಸಂಜೆ 6ರ ತನಕ ಬಂದ್ ನಡೆಯಲಿದೆ. ತುರ್ತು ಸೇವೆಗಳಿಗೆ ಬಂದ್‌ನಿಂದ ವಿನಾಯಿತಿ ನೀಡಲಾಗಿದೆ. ಶುಕ್ರವಾರ ಮುಖ್ಯಮಂತ್ರಿಗಳ ಜೊತೆಗಿನ ಸಭೆ ವಿಫಲವಾದ ಹಿನ್ನಲೆಯಲ್ಲಿ ಕರ್ನಾಟಕ ಬಂದ್ ನಡೆಸುವ ತೀರ್ಮಾನವನ್ನು ಕೈಗೊಳ್ಳಲಾಗಿದೆ.
ಈಗಾಗಲೇ ಮೈಸೂರಿನ ಬಂಡಿಪಾಳ್ಯದ ಎಪಿಎಂಸಿ ಮಾರುಕಟ್ಟೆ ಬಂದ್ ಮಾಡಿ, ವರ್ತಕರ ಸಂಘ, ಕಾರ್ಮಿಕರ ಸಂಘಟನೆ, ದಲಿತ ಸಂಘರ್ಷ ಸಮಿತಿಯಿಂದಲೂ ಬೆಂಬಲ ಸಿಕ್ಕಿದೆ.

ಮೈಸೂರು ಜಿಲ್ಲಾ ಕಾಂಗ್ರೆಸ್, ಜೆಡಿಎಸ್, ರೈತ, ಕಾರ್ಮಿಕ, ದಲಿತ ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ. ಕೃಷಿ ಮಸೂದೆಗಳನ್ನು ವಿರೋಧಿಸಿ ಐಕ್ಯ ಹೋರಾಟಕ್ಕೆ ಹೋಟೆಲ್ ಮಾಲೀಕರ ಸಂಘ, ಕ್ಯಾಬ್, ಟ್ಯಾಕ್ಸಿ, ಲಾರಿ ಮಾಲೀಕರು ಸೇರಿ ಹಲವರಿಂದ ಬೆಂಬಲ ವ್ಯಕ್ತವಾಗಿದೆ.















Click it and Unblock the Notifications