ಸೋಮವಾರ ಕರ್ನಾಟಕ ಬಂದ್ : ಏನಿರುತ್ತೆ?, ಏನಿರಲ್ಲ?

ಬೆಂಗಳೂರು, ಮೇ 27 : ಸೋಮವಾರ ಕರ್ನಾಟಕ ಬಂದ್ ಇದೆಯೇ?, ಇಲ್ಲವೇ? ಎಂಬ ಕುರಿತು ಹಲವಾರು ಗೊಂದಲಗಳಿವೆ. ಬಂದ್ ಕುರಿತು ಒಬ್ಬೊಬ್ಬರು ಒದೊಂದು ಹೇಳಿಕೆ ನೀಡುತ್ತಿದ್ದಾರೆ. ಆದರೆ, ಬಂದ್‌ಗೆ ಅಧಿಕೃತವಾಗಿ ಯಾವುದೇ ಸಂಘಟನೆಗಳು ಬೆಂಬಲ ಕೊಟ್ಟಿಲ್ಲ.

'ಸಾಲ ಮನ್ನಾ ಮಾಡದೇ ಇದ್ದರೆ ರೈತರು ಸ್ವಯಂ ಪ್ರೇರಿತವಾಗಿ ಬಂದ್ ನಡೆಸುತ್ತಾರೆ ಎಂದು ಹೇಳಿದ್ದೆ. ಬಂದ್‌ಗೆ ಬಿಜೆಪಿ ಕರೆ ನೀಡಿಲ್ಲ. ನಾನು ಕರ್ನಾಟಕ ಬಂದ್ ಮಾಡುವೆ ಎಂದು ಹೇಳಿಲ್ಲ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಅವರು, 'ರೈತ ಸಂಘ ಕರೆ ಕರೆ ಕೊಟ್ಟಿರುವ ಕರ್ನಾಟಕ ಬಂದ್‌ಗೆ ಬಿಜೆಪಿ ಬೆಂಬಲ ನೀಡಲಿದೆ' ಎಂದು ಹೇಳಿದ್ದಾರೆ. ಹಲವು ಜಿಲ್ಲೆಗಳಲ್ಲಿ ಬಿಜೆಪಿ ಸಾಂಕೇತಿಕವಾಗಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

'ಸೋಮವಾರ ಯಾವುದೇ ಬಂದ್‌ಗೆ ಅವಕಾಶವಿಲ್ಲ. ಒಂದು ವೇಳೆ ಬಂದ್‌ ಮಾಡಲು ಮುಂದಾದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಹೇಳಿದ್ದಾರೆ.

ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಎಂದಿನಂತೆ ತೆರೆದಿರಲಿವೆ. ಖಾಸಗಿ ಶಾಲಾ-ಕಾಲೇಜುಗಳು ಸಹ ರಜೆಯನ್ನು ಘೋಷಣೆ ಮಾಡಿಲ್ಲ.

ಬಿಜೆಪಿಯಿಂದ ಬಂದ್ ಕರೆ

ಬಿಜೆಪಿಯಿಂದ ಬಂದ್ ಕರೆ

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಭಾನುವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, 'ಸ್ವಯಂಪ್ರೇರಿತ ಬಂದ್‌ಗೆ ಎಲ್ಲರೂ ಬೆಂಬಲ ನೀಡಬೇಕು ಎಂದು ಕರೆ ನೀಡಿದ್ದಾರೆ. ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಎಚ್.ಡಿ.ಕುಮಾರಸ್ವಾಮಿ ಅವರು 24 ಗಂಟೆಯಲ್ಲಿ ಸಾಲಮನ್ನಾ ಮಾಡಬೇಕಿತ್ತು. ಆದರೆ, ಈಗ ಸಮ್ಮಿಶ್ರ ಸರ್ಕಾರ ಬಂದಿದೆ ಕೊಟ್ಟ ಮಾತನ್ನು ಮರೆತಿದ್ದಾರೆ' ಎಂದು ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

ಬಂದ್‌ಗೆ ಅವಕಾಶವಿಲ್ಲ

ಬಂದ್‌ಗೆ ಅವಕಾಶವಿಲ್ಲ

'ಸೋಮವಾರ ಯಾವುದೇ ಬಂದ್‌ಗೆ ಅವಕಾಶವಿಲ್ಲ. ಒಂದು ವೇಳೆ ಬಂದ್ ನಡೆಸಲು ಮುಂದಾದರೆ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕರ್ನಾಟಕ ಬಂದ್ ಮಾಡದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರಿಗೆ ಮನವಿ ಮಾಡಲಾಗಿದ್ದು, ನಗರದ ಎಲ್ಲಾ ಡಿಸಿಪಿಗಳಿಗೆ ಬಂದ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ' ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಹೇಳಿದ್ದಾರೆ.

ಹೋಟೆಲ್ ತೆರೆದಿರುತ್ತದೆ

ಹೋಟೆಲ್ ತೆರೆದಿರುತ್ತದೆ

ಸೋಮವಾರದ ಕರ್ನಾಟಕ ಬಂದ್‌ಗೆ ಹೋಟೆಲ್ ಮಾಲೀಕರು ಬೆಂಬಲ ನೀಡಿಲ್ಲ. ಆದ್ದರಿಂದ, ಹೋಟೆಲ್, ದರ್ಶಿನಿಗಳು ಬಾಗಿಲು ಮುಚ್ಚುವುದಿಲ್ಲ. 'ನಾಳೆಯ ಬಂದ್‌ಗೆ ಬೆಂಬಲವಿಲ್ಲ' ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ಹೆಬ್ಬಾರ್ ಹೇಳಿದ್ದಾರೆ.

ಬಸ್, ಮೆಟ್ರೋ ಸಂಚಾರ ಎಂದಿನಂತೆ

ಬಸ್, ಮೆಟ್ರೋ ಸಂಚಾರ ಎಂದಿನಂತೆ

ಸೋಮವಾರ ಬಸ್, ಮೆಟ್ರೋ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ. ನಮ್ಮ ಮೆಟ್ರೋ, ಬಿಎಂಟಿಸಿ, ಕೆಎಸ್ಆರ್‌ಟಿಸಿ ಬಸ್ಸುಗಳು ಎಂದಿನಂತೆ ಸಂಚಾರ ನಡೆಸಲಿವೆ.

ಬೆಂಗಳೂರಿನ ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡುವುದಿಲ್ಲ ಎಂದು ಹೇಳಿವೆ. ಆದರೆ, ಆಟೋ ಚಾಲಕರು ಮಾತ್ರ ಬಂದ್ ಬಗ್ಗೆ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.

ಚಿತ್ರ ಪ್ರದರ್ಶನ, ಶೂಟಿಂಗ್ ಇದೆ

ಚಿತ್ರ ಪ್ರದರ್ಶನ, ಶೂಟಿಂಗ್ ಇದೆ

'ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಸೋಮವಾರದ ಬಂದ್‌ಗೆ ಸಹಕಾರ ನೀಡುವುದಿಲ್ಲ. ಎಂದಿನಂತೆ ಚಲನಚಿತ್ರ ಪ್ರದರ್ಶನ ಹಾಗೂ ಚಿತ್ರೀಕರಣಕ್ಕೆ ಯಾವುದೇ ರೀತಿಯಲ್ಲಿ ಅಡ್ಡಿ ಇಲ್ಲ' ಎಂದು ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+