Karnataka: ತೆಂಗು ಉತ್ಪಾದನೆ; ಕೇರಳ ಹಿಂದಿಕ್ಕಿದ ಕರ್ನಾಟಕ ರಾಜ್ಯಕ್ಕೆ ದೇಶದಲ್ಲೇ ಅಗ್ರಸ್ಥಾನ
ಕರ್ನಾಟಕ, ಭಾರತದ ಅಭಿವೃದ್ಧಿಗೆ ತನ್ನದೇ ಆದ ಹಲವು ಕೊಡುಗೆ ನೀಡುತ್ತಿರುವ ಪ್ರಮುಖ ರಾಜ್ಯಗಳಲ್ಲಿ ಒಂದು. ಹಲವು ವಿಚಾರಗಳಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಭಾರತ ಇರಲಿ ಇಡೀ ಏಷ್ಯಾದಲ್ಲೇ ಮೊದಲು ವಿದ್ಯುತ್ ದೀಪ ಬೆಳಗಿದ್ದು ಬೆಂಗಳೂರಿನಲ್ಲಿ, ಭಾರತದ ಐಟಿ ಕ್ಯಾಪಿಟಲ್ ಬೆಂಗಳೂರು.
ಕೃಷಿ ವಿಚಾರದಲ್ಲಿ ಕೂಡ ಹಿಂದೆ ಬಿದ್ದಿಲ್ಲ, ಭಾರತದಲ್ಲಿ ಅತಿ ಹೆಚ್ಚು ಕಾಫಿ ಉತ್ಪಾದನೆ ಮಾಡುವ ರಾಜ್ಯ ಕರ್ನಾಟಕ. ಚಿಕ್ಕಮಗಳೂರು, ಕೊಡಗು ಕಾಫಿ ದೇಶ ವಿದೇಶಗಳಲ್ಲೂ ಪ್ರಸಿದ್ಧಿ ಪಡೆದಿದೆ. ಇದೀಗ ತೆಂಗು ಉತ್ಪಾದನೆ ವಿಚಾರದಲ್ಲಿ ಕೂಡ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನ ಪಡೆದುಕೊಂಡಿದೆ.

ಈವರೆಗೆ ತೆಂಗು ಉತ್ಪಾದನೆಯಲ್ಲಿ ಕೇರಳ ಮೊದಲ ಸ್ಥಾನದಲ್ಲಿತ್ತು, ಇದೀಗ ಕೇರಳವನ್ನು ಹಿಂದಿಕ್ಕಿರುವ ಕರ್ನಾಟಕ ದೇಶದಲ್ಲಿ ಅತಿ ಹೆಚ್ಚು ತೆಂಗು ಉತ್ಪಾದನೆ ಮಾಡುವ ದೇಶವಾಗಿದೆ. ತೆಂಗಿನಕಾಯಿ ಅಭಿವೃದ್ಧಿ ಮಂಡಳಿ (CDB) ಪ್ರಕಾರ, 2022-23 ರಲ್ಲಿ ಕೇರಳ 563 ಕೋಟಿ ತೆಂಗಿನಕಾಯಿಗಳನ್ನು ಉತ್ಪಾದನೆ ಮಾಡಿದ್ದರೆ, ಕರ್ನಾಟಕ 595 ಕೋಟಿ ತೆಂಗಿನಕಾಯಿಗಳನ್ನು ಉತ್ಪಾದನೆ ಮಾಡುವ ಮೂಲಕ ಕೇರಳವನ್ನು ಹಿಂದಿಕ್ಕಿದೆ.
2021-22ರಲ್ಲಿ ಕೇರಳ 552 ಕೋಟಿ ತೆಂಗಿನಕಾಯಿಗಳನ್ನು ಉತ್ಪಾದನೆ ಮಾಡಿತ್ತು ಮತ್ತು ಇದೇ ಅವಧಿಯಲ್ಲಿ ಕರ್ನಾಟಕ 518 ಕೋಟಿ ತೆಂಗಿನಕಾಯಿಗಳನ್ನು ಉತ್ಪಾದಿಸಿತ್ತು. 2023-24 ಮೊದಲ ಎರಡು ತ್ರೈಮಾಸಿಕದ ಅವಧಿಯಲ್ಲಿ ಕರ್ನಾಟಕ 726 ಕೋಟಿ ತೆಂಗಿನಕಾಯಿಗಳನ್ನು ಉತ್ಪಾದನೆ ಮಾಡುವ ಮೂಲಕ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ಇದೇ ಅವಧಿಯಲ್ಲಿ ತಮಿಳುನಾಡು 578 ಕೋಟಿ ತೆಂಗಿನ ಕಾಯಿಗಳನ್ನು ಉತ್ಪಾದನೆ ಮಾಡುವ ಮೂಲಕ ಎರಡನೇ ಸ್ಥಾನದಲ್ಲಿದ್ದರೆ, ಕೇರಳ 564 ಕೋಟಿ ತೆಂಗಿನಕಾಯಿ ಉತ್ಪಾದನೆ ಮಾಡುವ ಮೂಲಕ ಮೂರನೇ ಸ್ಥಾನಕ್ಕೆ ಕುಸಿದಿದೆ. 2023-2024ರ ವಾರ್ಷಿಕ ಅಂಕಿಅಂಶಗಳನ್ನು ಸಿಬಿಡಿ ಇನ್ನೂ ಬಿಡುಗಡೆ ಮಾಡಿಲ್ಲ.
ತುಮಕೂರು, ಹಾಸನ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ತೆಂಗಿನ ಕೃಷಿಯನ್ನು ಮಾಡಲಾಗುತ್ತಿದೆ. ಕೃಷಿ ತಂತ್ರಗಳ ಸುಧಾರಣೆಯಿಂದಾಗಿ ಬೆಂಗಳೂರಿನಲ್ಲಿ ಉದ್ಯೋಗ ಮಾಡುವ ಯುವ ಜನತೆ ಕೂಡ ತೆಂಗು ಕೃಷಿಯತ್ತ ಗಮನ ಹರಿಸಿದ್ದು ಉತ್ಪಾದನೆಯನ್ನು ಹೆಚ್ಚಿಸಿದೆ.
ಕರ್ನಾಟಕದಲ್ಲಿ ತುಮಕೂರು ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೆಂಗು ಬೆಳೆಯಲಾಗುತ್ತಿದೆ. ಕೊಬ್ಬರಿ ಉತ್ಪಾದನೆಯಲ್ಲಿ ಕೂಡ ತುಮಕೂರು ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಏಷ್ಯಾದಲ್ಲೇ ದೊಡ್ಡ ಕೊಬ್ಬರಿ ಮಾರುಕಟ್ಟೆ ತಿಪಟೂರಿನಲ್ಲಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications