ರೈತರ ಸಾಲಮನ್ನಾ : ಬಿಜೆಪಿಯಿಂದ ರಾಜ್ಯವ್ಯಾಪಿ ಹೋರಾಟ
ಬೆಂಗಳೂರು, ಡಿಸೆಂಬರ್ 20 : ಕರ್ನಾಟಕ ಸರ್ಕಾರದ ವಿರುದ್ಧ ಹೋರಾಟ ನಡೆಸುವಂತೆ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚನೆ ನೀಡಿದೆ. ಸಾಲಮನ್ನಾ ಬೇಡಿಕೆ ಮುಂದಿಟ್ಟುಕೊಂಡು ಮೈತ್ರಿ ಸರ್ಕಾರದ ವಿರುದ್ಧ ಹೋರಾಟ ನಡೆಸಲಿದೆ.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಕರ್ನಾಟಕದಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದೆ. ಆದರೆ, ಇದು ಸಂಪೂರ್ಣವಾಗಿ ಜಾರಿಗೆ ಬಂದಿಲ್ಲ ಎಂದು ಆರೋಪಿಸಿ ಬಿಜೆಪಿ ರಾಜ್ಯಾದ್ಯಂತ ಹೋರಾಟ ಮಾಡಲಿದೆ.

ರೈತರ ಸಾಲವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಬೇಕು ಎಂದು ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಚ್ಚರಿಕೆ ನೀಡಿದೆ. ಆದ್ದರಿಂದ, ಮೈತ್ರಿ ಸರ್ಕಾರದ ವಿರುದ್ಧ ಹೋರಾಟ ಮಾಡಲು ಬಿಜೆಪಿ ಸೂಚನೆ ನೀಡಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ಇದುವರೆಗೂ 800 ಜನ ರೈತರ ಸಾಲಮನ್ನಾ ಮಾಡಲಾಗಿದೆ ಎಂದು ಹೇಳಿದೆ. ರಾಜ್ಯ ಬಿಜೆಪಿ ನಾಯಕರು ಈ ವಿಷಯವನ್ನು ಮುಂದಿಟ್ಟುಕೊಂಡು ಹೋರಾಟ ಮಾಡಲಿದೆ.
ಸಾಲಮನ್ನಾ ಯೋಜನೆ ಘೋಷಣೆ ನಡುವೆಯೂ ಸರ್ಕಾರ ಅದನ್ನು ಸಮರ್ಪಕವಾಗಿ ಜಾರಿಗೆ ತರಲು ವಿಫಲವಾಗಿದೆ ಎಂದು ಬಿಜೆಪಿ ಆರೋಪಿಸಿದ್ದು, ಇದೇ ವಿಚಾರ ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲಿದೆ.












Click it and Unblock the Notifications