ಬಜೆಟ್: ಸಿಎಂ ಸಿದ್ದುಗೆ ಕುಮಾರಸ್ವಾಮಿ ಪತ್ರ

ಬೆಂಗಳೂರು, ಮಾ. 10: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ವರಿಷ್ಠ ಎಚ್. ಡಿ.ಕುಮಾರಸ್ವಾಮಿ ರಾಜ್ಯ ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು ಹಲವಾರು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಯನ್ನು ಗಮನದಲ್ಲಿಟ್ಟುಕೊಂಡು ಅನೇಕ ಯೋಜನೆಗಳನ್ನು ವಿಸ್ತರಿಸಲು ಮತ್ತು ಹೊಸ ಯೋಜನೆಗಳನ್ನು ಜಾರಿ ಮಾಡುವಂತೆ ಆಗ್ರಹಿಸಿದ್ದಾರೆ.[ನಾಚಿಕೆಯಾಯಿತು, ನಾನೇ ತಲೆತಗ್ಗಿಸಿಬಿಟ್ಟೆ: ಕುಮಾರಸ್ವಾಮಿ]

jds

ಕುಮಾರಸ್ವಾಮಿ ಇಟ್ಟಿರುವ ಪ್ರಮುಖ ಬೇಡಿಕೆಗಳ ಪಟ್ಟಿ ಇಂತಿದೆ.
1. ಕೇಂದ್ರ ಸರ್ಕಾರ ಆಹಾರ ಭದ್ರತಾ ಕಾಯ್ದೆ ಜಾರಿ ಮಾಡಿರುವುದರಿಂದ ರಾಜ್ಯ ಸರ್ಕಾರ ಬಡತನ ರೇಖೆಗಿಂತ ಮೇಲಿರುವವರಿಗೂ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ ವಿತರಿಸಬೇಕು.
2. ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವವರಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಲೀಟರ್ ಗೆ 8 ರೂಪಾಯಿಗೆ ಏರಿಸಬೇಕು.
3. ರೈತರಿಗೆ ವೈಜ್ಞಾನಿಕ ಬೆಲೆ ನೀಡಲು ಕೃಷಿ ಬೆಲೆ ಆಯೋಗ ನೇಮಕವಾಗಬೇಕು.
4. ಹಾಪ್ ಕಾಮ್ಸ್ ಮಾದರಿ ಮಳಿಗೆಗಳನ್ನು ರಾಜ್ಯಾದ್ಯಂತ ತೆರೆಯಬೇಕು.[ಅರ್ಕಾವತಿ ಕರ್ಮಕಾಂಡ : ಕುಮಾರಸ್ವಾಮಿ ಪುಸ್ತಕದಲ್ಲೇನಿದೆ?]
5. ಕೃಷ್ಣ ನ್ಯಾಯಾಧೀಕರಣಕ್ಕೆ 25 ಸಾವಿರ ಕೋಟಿ ರೂ. ಮೀಸಲಿಡಬೇಕು
6. ಕಳಸಾ ಬಂಡೂರಿ ಮತ್ತು ಕಾರಂಜಾ ಯೋಜನೆಗಳಿಗೆ ಅಗತ್ಯ ಆರ್ಥಿಕ ಸಂಪನ್ಮೂಲ ಒದಗಿಸಬೇಕು.
7. ಪರಮಶಿವಯ್ಯ ವರದಿ ಅನುಷ್ಠಾನಕ್ಕೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗೆ 20 ಸಾವಿರ ಕೋಟಿ ರೂ ಮೀಸಲಿಡಬೇಕು.
8. ವಿವಿಧ ಇಲಾಖೆಗಳಲ್ಲಿ ಖಾಳಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು.
9. ತೈಲ ಬೆಲೆಯಲ್ಲಿ ಇಳಿಕೆಯಾಗಿರುವುದರಿಂತ ಬಸ್ ದರ ಕಡಿಮೆ ಮಾಡಬೇಕು.
10. ಹೊಸ ತಾಲೂಕುಗಳ ರಚನೆ, ನನೆಗಿದಿಗೆ ಬಿದ್ದಿರುವ ಯೋಜನೆಗಳಿಗೆ ಚಾಲನೆ, ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ತತ್ತರಿಸಿರುವ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು.

ಇದಲ್ಲದೇ ಇನ್ನು ಅನೇಕ ಬೇಡಿಕೆಗಳನ್ನು ಕುಮಾರಸ್ವಾಮಿ ಮುಂದಿಟ್ಟಿದ್ದು, ಬೆಂಗಳೂರಿನ ಕಸ ಮತ್ತು ಒಳಚರಂಡಿ ಸಮಸ್ಯೆಗೆ ಸೂಕ್ತ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+