Karnataka Dam Water Level: ಮುಂದುವರೆದ ವರುಣನ ಆರ್ಭಟ, ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ಸಂಪೂರ್ಣ ವಿವರ
ಬೆಂಗಳೂರು, ಮೇ. 17: ಕಳೆದ ಮೂರು ತಿಂಗಳಿನಿಂದ ಬಿರು ಬಿಸಿಲಿನಿಂದ ಹೈರಾಣಾಗಿದ್ದ ರಾಜ್ಯದ ಜನ ವರುಣನ ಕೃಪೆಯಿಂದ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು ನಾಡಿನ ಕೆರೆ, ಕಟ್ಟೆ ತುಂಬುತ್ತಿವೆ. ನದಿಗಳಿಗೆ ಮರುಜೀವ ಬಂದಿದ್ದು, ಜಲಾಶಯಗಳು ಮತ್ತೆ ಮರುಜೀವ ಪಡೆಯುತ್ತಿವೆ.
ಕಳೆದ ವರ್ಷ ಮಳೆ ಇಲ್ಲದೆ ಸೊರಗಿದ್ದ ಜಲಾಶಯಗಳು ಈಗ ನಿಧಾನವಾಗಿ ಮರುಜೀವ ಪಡೆಯುತ್ತಿವೆ. ರಾಜ್ಯದ ಕೆಆರ್‌ಎಸ್, ಹಾರಂಗಿ, ಆಲಮಟ್ಟಿ, ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಮೇ. 17ರ ಶುಕ್ರವಾರ ಬೆಳ್ಳಂ ಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಮಳೆ ಕಾಣಿಸಿಕೊಂಡಿದೆ. ಹೀಗಾಗಿ ಈ ಮೇ 17 ರಂದು ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂಬುದನ್ನು ತಿಳಿಯುವುದು ಅವಶ್ಯಕವಾಗಿದೆ. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಮೇ 17 ರಂದು ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ
1. ಕೆಆರ್‌ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 10.78 ಟಿಎಂಸಿ
ಒಳಹರಿವು - 1771 ಕ್ಯೂಸೆಕ್
ಹೊರಹರಿವು - 153 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ - 2.94 ಟಿಎಂಸಿ
ಒಳಹರಿವು - 172 ಕ್ಯೂಸೆಕ್
ಹೊರಹರಿವು - 200 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.60 ಮೀಟರ್
ಇಂದಿನ ನೀರಿನ ಮಟ್ಟ - 26.27 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 4594 ಕ್ಯೂಸೆಕ್

4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 3.41 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 40 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 7.69 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 1394 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 16.81 ಟಿಎಂಸಿ
ಒಳಹರಿವು - 388 ಕ್ಯೂಸೆಕ್
ಹೊರಹರಿವು - 2064 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 696.13 ಮೀಟರ್
ಇಂದಿನ ನೀರಿನ ಮಟ್ಟ - 19.52 ಟಿಎಂಸಿ
ಒಳಹರಿವು - 43 ಕ್ಯೂಸೆಕ್
ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 13.39 ಟಿಎಂಸಿ
ಒಳಹರಿವು - 467 ಕ್ಯೂಸೆಕ್
ಹೊರಹರಿವು - 375 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -13.11 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 3026 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ -890.58 ಮೀಟರ್
ಇಂದಿನ ನೀರಿನ ಮಟ್ಟ - 9.08 ಟಿಎಂಸಿ
ಒಳಹರಿವು -63 ಕ್ಯೂಸೆಕ್
ಹೊರಹರಿವು - 250 ಕ್ಯೂಸೆಕ್












Click it and Unblock the Notifications