ಮತ್ತೆ ಒಂದು ಲಕ್ಷ ಸಾಲಮನ್ನಾ ಮಾಡುತ್ತಿದ್ದಾರೆ ಕುಮಾರಸ್ವಾಮಿ
Recommended Video

ಬೆಂಗಳೂರು, ಜುಲೈ 12: ಈಗಾಗಲೇ 34000 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ಮತ್ತೊಂದು ಸುತ್ತು ಸಾಲಮನ್ನಾ ಮಾಡುವ ಬಗ್ಗೆ ಘೋಷಣೆ ಮಾಡಿದರು.
ಸುಸ್ತಿ ಸಾಲಮನ್ನಾ ಘೋಷಿಸಿದ್ದ ಕುಮಾರಸ್ವಾಮಿ ಅವರು, ಇಂದು ಬಜೆಟ್ ಕುರಿತು ಪ್ರಶ್ನೆಗಳಿಗೆ ಉತ್ತರ ನೀಡಿ ರೈತರ ಚಾಲ್ತಿ ಸಾಲವನ್ನೂ ಮನ್ನಾ ಮಾಡುವುದಾಗಿ ಹೇಳಿದರು.
ರಾಷ್ಟ್ರೀಕೃತ, ಸಹಕಾರಿ, ಕಿಸಾನ್ ಕಾರ್ಡ್‌ಗಳ 2 ಲಕ್ಷದ ವರೆಗಿನ ಸುಸ್ತಿ ಸಾಲವನ್ನು ಈಗಾಗಲೇ ಮನ್ನಾ ಮಾಡಿ ಘೋಷಣೆ ಹೊರಡಿಸಿದ್ದಾರೆ. ಆದರೆ ಚಾಲ್ತಿ ಸಾಲದ ರೈತರಿಗೆ ಅನ್ಯಾಯವಾಗಬಾರದೆಂದು ರೈತರ ಚಾಲ್ತಿ ಸಾಲವನ್ನೂ ಮನ್ನಾ ಮಾಡುತ್ತಿದ್ದಾರೆ.

ಒಂದು ಲಕ್ಷದ ವರೆಗಿನ ಚಾಲ್ತಿ ಖಾತೆಯ ಸಾಲವನ್ನು ಸರ್ಕಾರ ಮಾಡುತ್ತದೆ ಎಂದು ಕುಮಾರಸ್ವಾಮಿ ಘೋಷಿಸಿದರು. ಆದರೆ ಇದು ಸಹಕಾರಿ ವಲಯದ ಸಾಲಗಳಿಗೆ ಮಾತ್ರವೇ ಅನ್ವಯಿಸಲಿದ್ದು, ರಾಷ್ಟ್ರೀಕೃತ ಬ್ಯಾಂಕು ಅಥವಾ ಕಿಸಾನ್ ಕಾರ್ಡ್‌ಗೆ ಅನ್ವಯಿಸುವುದಿಲ್ಲ.
ಇಂದು ಬಜೆಟ್ ಉತ್ತರದಲ್ಲಿ ಕುಮಾರಸ್ವಾಮಿ ಅವರು ಘೋಷಿಸಿದ್ದು, ಕೆಲವೇ ದಿನಗಳಲ್ಲಿ ರಾಜಪತ್ರಕ್ಕೆ ಸೇರಿಸಲಾಗುವುದು ಎಂದು ಅವರು ಹೇಳಿದ್ದಾರೆ.












Click it and Unblock the Notifications