ಕಬ್ಬು ಬೆಳೆಗಾರರ ಆತ್ಮಹತ್ಯೆ ಸರಣಿಗೆ ಕೊನೆಯಿಲ್ಲ
ಬೆಂಗಳೂರು,ಆ.03: ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಮಾಂಜರಿಯಲ್ಲಿ ಸೋಮವಾರ ಮಧ್ಯಾಹ್ನ ಕಬ್ಬು ಬೆಳೆಗಾರ ತಾತೋಬ ಕುಂಬಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಭಾನುವಾರ ರಾಜ್ಯದಲ್ಲಿ ಒಟ್ಟು ಆರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಇಬ್ಬರು ರೈತರು ಸಾಲದ ಶೂಲಕ್ಕೆ ಸಿಲುಕಿ ಪ್ರಾಣ ಕ:ಳೆದುಕೊಂಡಿದ್ದಾರೆ. ಚಿಕ್ಕಬಳ್ಳಾಪುರ, ಯಾದಗಿರಿ ಜಿಲ್ಲೆಯಲ್ಲೂ ಅನ್ನದಾತ ಸಾವಿಗೆ ಶರಣಾಗಿದ್ದಾನೆ. ಮಂಡ್ಯ ಜಿಲ್ಲೆ ಮಾವಳ್ಳಿ ತಾಲೂಕಿನ ಕಲ್ಲಕಟ್ಟ ನಿವಾಸಿ ಉಮೇಶ್, ಪಂಡವಪುರ ತಾಲೂಕಿನ ಚಿಕ್ಕಬ್ಯಾಡರಹಳ್ಳಿ ನಿವಾಸಿ ದೇವರಾಜ (23) ಬೆಳೆನಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.[ರೈತರ ಆತ್ಮಹತ್ಯೆ ಕಾಯಿಲೆಗೆ ಸಿದ್ದು ಚುಚ್ಚುಮದ್ದು]

ಉತ್ತರ ಕರ್ನಾಟಕ ಭಾಗದಲ್ಲೂ ಅನ್ನದಾತ ಸಾವಿಗೆ ಶರಣಾಗುತ್ತಿದ್ದಾನೆ. ಯಾದಗಿರಿ ತಾಲೂಕಿನ ಗುಂಜನೂರು ಗ್ರಾಮದ ತಾಯಮ್ಮ (40) ಎಂಬ ರೈತ ಮಹಿಳೆ ಬೆಳೆ ನಷ್ಟ ಹಾಗೂ ಸಾಲದ ಬಾಧೆಯಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಎಣ್ಣಂದೂರು ಗ್ರಾಮದ ಮುನಿಸ್ವಾಮಪ್ಪ (40) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಂಜನಗೂಡು ತಾಲೂಕಿನ ಸಿದ್ದೇಗೌಡನಹುಂಡಿಯಲ್ಲಿ ರೈತ ಸ್ವಾಮಿ (40) ಮನೆ ಸಮೀಪವೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಂದಾಯ ಸಚಿವ ವಿ.ಶ್ರೀನಿವಾಸ್ ಪ್ರಸಾದ್‌ರವರ ಅಳಿಯ ರಾಜ್ಯ ಯುವ ಕಾಂಗ್ರೆಸ್ ಮುಖಂಡ ಹರ್ಷವರ್ಧನ್ ಆತ್ಮಹತ್ಯೆ ಮಾಡಿಕೊಂಢ ರೈತರ ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರ ವಿತರಿಸುತ್ತಿದ್ದಾರೆ.[ಕರ್ನಾಟಕದಲ್ಲಿ ರೈತರ ಸಾವಿಗೆ ಕಾರಣವೇನು? ಇಲ್ಲಿದೆ ಉತ್ತರ]
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬೆಂಚಘಟ್ಟದ ಲಕ್ಕನಹಳ್ಳಿ ನಿವಾಸಿ ನಾಗರಾಜು (55) ವಿವಿಧ ಬ್ಯಾಂಕ್‌ಗಳಿಂದ ಪಡೆದುಕೊಂಡಿದ್ದ 5 ಲಕ್ಷ ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಏಪ್ರಿಲ್ ಜುಲೈ ಅವಧಿಯಲ್ಲಿ 32 ರೈತ ಆತ್ಮಹತ್ಯೆಗಳಾಗಿವೆ.












Click it and Unblock the Notifications