ರಾಜ್ಯ ಸರ್ಕಾರ ರೈತರ ನೆರವಿಗೆ ಬರಲಿ; ಎಚ್ ಡಿ ಕೆ ಆಗ್ರಹ
ಬೆಂಗಳೂರು, ಮಾರ್ಚ್ 30; ಕೊರೊನಾದಿಂದ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ರೈತರು ತೀವ್ರ ತೊಂದರೆಗಿಡಾಗಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ, ರೈತರಿಗೆ ಆಸರೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಸೋಮವಾರ ಟ್ವೀಟ್ ಮಾಡಿರುವ ಅವರು, ಸರ್ಕಾರವೇ ರೈತರ ಉತ್ಪನ್ನಗಳನ್ನು ಖರೀದಿಸಬೇಕು. ಇಲ್ಲದಿದ್ದರೆ ತೀವ್ರ ಸಂಕಷ್ಟವನ್ನು ರೈತರು ಅನುಭವಿಸಬೇಕಾಗುತ್ತದೆ. ಅದರ ಪರಿಣಾಮ ಇನ್ನೂ ಭೀಕರ ಎಂದು ಎಚ್ಚರಿಕೆ ನೀಡಿದ್ದಾರೆ.
ಸರ್ಕಾರ ಕೃಷಿ ಉತ್ಪನ್ನಗಳ ಸಾಗಾಟಕ್ಕೆ ನಿರ್ಬಂಧ ವಿಧಿಸಬಾರದು. ತರಕಾರಿ ಹಣ್ಣುಗಳನ್ನು ವಾರ್ಡ್ ನಲ್ಲಿ ಮಾರಾಟ ಮಾಡಿಸಲು ಕ್ರಮ ಕೈಗೊಳ್ಳಬೇಕು. ಈ ಸಂದರ್ಭದಲ್ಲಿ ರೈತರ ಪರ ಅಗತ್ಯ ಕ್ರಮಗಳನ್ನು ಕೈಗೊಳ್ಳದಿದ್ದರೆ ತೀವ್ರ ಆರ್ಥಿಕ ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ರೈತರ ಉತ್ಪನ್ನಗಳನ್ನು ಸರ್ಕಾರವೇ ಸ್ವಯಂಸೇವಕರ ಮೂಲಕ ಖರೀದಿಸಿ ಮಾರಾಟ ಮಾಡಿಸಬೇಕು ಎಂದು ಒತ್ತಾಯಿಸಿದ್ದಾರೆ.












Click it and Unblock the Notifications