ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷಿ ಡಿಜಿಟಲೀಕರಣದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ; ಸಿಎಂ ಬಸವರಾಜ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಅ. 07: 'ಕೃಷಿ ಕ್ಷೇತ್ರದ ಡಿಜಿಟಲೀಕರಣದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ. ಈವರೆಗೆ ರೈತರು, ಸರ್ವೆ ನಂಬರ್ ಹಾಗೂ ಆಧಾರ್‌ಗಳನ್ನು ಜೋಡಿಸಲಾಗಿದ್ದು, 78 ಲಕ್ಷ ರೈತರನ್ನು ಈ ವ್ಯಾಪಿಗೆ ತರಲಾಗಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ ನೈಸರ್ಗಿಕ ‌ಕೃಷಿ ಮತ್ತು ಡಿಜಿಟಲ್ ಕೃಷಿ ಕುರಿತ ವಿಡಿಯೊ ಸಂವಾದದಲ್ಲಿ ಗೃಹ ಕಚೇರಿ ಕೃಷ್ಣಾದಿಂದ ಪಾಲ್ಗೊಂಡು ಮಾತನಾಡಿದ್ದಾರೆ.

ಕೃಷಿ ಡಿಜಿಟಲೀಕರಣದಲ್ಲಿ ಕರ್ನಾಟಕ ಮುಂದಿರುವ ಬಗ್ಗೆ ಕೇಂದ್ರ ಕೃಷಿ ಪ್ರಧಾನ ಕಾರ್ಯದರ್ಶಿಗಳು ಪ್ರಸ್ತಾಪಿಸಿದ್ದನ್ನು ಉಲ್ಲೇಖಿಸಿರುವ ಮುಖ್ಯಮಂತ್ರಿಗಳು, "ಭೂಮಿ ತಂತ್ರಜ್ಞಾನದಡಿ ಈ ಹಿಂದೆಯೇ ಡಿಜಿಟಲೀಕರಣವಾಗಿದೆ. 62 ಲಕ್ಷ ಭೂಮಿಯುಳ್ಳ ಹಾಗೂ 16 ಲಕ್ಷ ಭೂ ರಹಿತರನ್ನೂ ತಂತ್ರಾಂಶದಲ್ಲಿ ಸೇರಿಸಲಾಗಿದೆ. ಫ್ರೂಟ್ಸ್ ಯೋಜನೆಯನ್ನು ಎಲ್ಲಾ ರಾಜ್ಯಗಳೂ ಅಳವಡಿಸಿಕೊಳ್ಳುತ್ತಿವೆ" ಎಂದು ಮಾಹಿತಿ ನೀಡಿದ್ದಾರೆ.

ಅಕ್ರಮ ಗಣಿಗಾರಿಕೆ ಕೇಸ್; ಇಬ್ಬರು ಅಧಿಕಾರಿಗಳ ಆರೋಪಮುಕ್ತ ಆದೇಶ ಎತ್ತಿಹಿಡಿದ ಹೈಕೋರ್ಟ್ಅಕ್ರಮ ಗಣಿಗಾರಿಕೆ ಕೇಸ್; ಇಬ್ಬರು ಅಧಿಕಾರಿಗಳ ಆರೋಪಮುಕ್ತ ಆದೇಶ ಎತ್ತಿಹಿಡಿದ ಹೈಕೋರ್ಟ್

'ಈ ತಂತ್ರಾಂಶವನ್ನು ನಿರಂತರವಾಗಿ ಸುಧಾರಣೆ ಮಾಡಲಾಗುತ್ತಿದೆ. ಇದರ ಉಪಯೋಗ ಪಡೆದು ರೈತರನ್ನು ವ್ಯಾಪ್ತಿಗೆ ಸೇರಿಸಲಾಗಿದೆ. ಕೇಂದ್ರ ಸರ್ಕಾರದ ಸ್ವಮಿತ್ವ ಯೋಜನೆಯನ್ನು ಕರ್ನಾಟಕದಲ್ಲಿ ಅಭಿಯಾನದ ರೀತಿಯಲ್ಲಿ ಕೈಗೊಳ್ಳಲಾಗಿದೆ' ಎಂದಿದ್ದಾರೆ.

ಬೆಂಗಳೂರಿನಲ್ಲಿ ಮೊದಲ ನ್ಯಾನೋ ಯೂರಿಯಾ ಘಟಕ

ಬೆಂಗಳೂರಿನಲ್ಲಿ ಮೊದಲ ನ್ಯಾನೋ ಯೂರಿಯಾ ಘಟಕ

ಕೃಷಿ ಕ್ಷೇತ್ರದಲ್ಲಿ ನ್ಯಾನೋ ಯೂರಿಯಾ ಕ್ರಾಂತಿಯನ್ನು ಉಂಟುಮಾಡಿದ್ದು, ಮೊದಲ ನ್ಯಾನೋ ಯೂರಿಯಾ ಘಟಕ ಬೆಂಗಳೂರಿನಲ್ಲಿದೆ. ಅಧ್ಯಯನ ಮಾಡಿ, ರೈತರಿಗೂ ಪರಿಚಯಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಉತ್ತಮ ಪ್ರತಿಕ್ರಿಯೆ ಹಾಗೂ ಬೆಂಬಲ ದೊರೆಯಲಿದೆ ಎಂದು ಮುಖ್ಯಮಂತ್ರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಡಿಜಿಟಲ್ ತಂತ್ರಜ್ಞಾನದ ಮೂಲಕ ರೈತರೇ ತಮ್ಮ ಭೂಮಿಯ ಸಮೀಕ್ಷೆ ಮಾಡುತ್ತಿದ್ದಾರೆ. ಈವರೆಗೆ 212 ಕೋಟಿ ಭೂ ಪ್ರದೇಶವನ್ನು ಡಿಜಿಟಲೀಕರಣಗೊಳಿಸಲಾಗಿದೆ. ಬೆಳೆ ಸಮೀಕ್ಷೆಯನ್ನು ರೈತರೇ ಮಾಡುತ್ತಿದ್ದಾರೆ. 212 ಕೋಟಿ ಪೈಕಿ 16,584 ಬೆಳೆಗಳನ್ನು ರೈತರೇ ಸಮೀಕ್ಷೆ ಮಾಡಿದ್ದಾರೆ. 1.61ಕೋಟಿ ಪ್ರದೇಶವನ್ನು ಇಲಾಖೆ ಮಾಡಿದೆ. ಯಾವುದೇ ವ್ಯಾಜ್ಯಕ್ಕೆ ಎಡೆ ಮಾಡಿಕೊಡದಿರಲು ಶೇ. 100 ರಷ್ಟು ರೈತರೇ ಸಮೀಕ್ಷೆ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದರು. ರೈತರು ಅತ್ಯಂತ ಪ್ರಾಮಾಣಿಕವಾಗಿ ಇದನ್ನು ನಡೆಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಕರ್ನಾಟಕ ನೈಸರ್ಗಿಕ ಕೃಷಿಯಲ್ಲಿ ಸಕ್ರಿಯ

ಕರ್ನಾಟಕ ನೈಸರ್ಗಿಕ ಕೃಷಿಯಲ್ಲಿ ಸಕ್ರಿಯ

ನೈಸರ್ಗಿಕ ಕೃಷಿ ದೀರ್ಘಕಾಲಿಕ ಯೋಜನೆಯಾಗಿದ್ದು ಈ ಕುರಿತು ಸಂಶೋಧನೆ ಹಾಗೂ ಪ್ರಮಾಣೀಕರಣ ಅತ್ಯಂತ ಪ್ರಮುಖ ಅಂಶಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

'ಪ್ರಧಾನಿ ನರೇಂದ್ರ ಮೋದಿಯವರ ರೈತರ ಆದಾಯ ದ್ವಿಗುಣಗೊಳಿಸುವ ಆಶಯದಂತೆ ಕರ್ನಾಟಕ ರಾಜ್ಯ ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳೊಂದಿಗೆ ನೈಸರ್ಗಿಕ ಕೃಷಿ ಯನ್ನು ಸಕ್ರಿಯವಾಗಿ ಕೈಗೊಂಡಿದೆ. ರಾಜ್ಯದಲ್ಲಿ 5 ಕೃಷಿ ಹಾಗೂ ತೋಟಗಾರಿಕಾ ವಿಶ್ವ ವಿದ್ಯಾಲಯಗಳಿದ್ದು, ವಿಶ್ವವಿದ್ಯಾಲಯಗಳ ನಿರಂತರ ಮೇಲ್ವಿಚಾರಣೆಯಲ್ಲಿ ನೈಸರ್ಗಿಕ ಕೃಷಿಯನ್ನು ತಲಾ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಕೈಗೊಳ್ಳಲಾಗಿದೆ. ಬೆಳೆಗಳ ಗುಣಮಟ್ಟದಿಂದ ಹಿಡಿದು, ಉತ್ಪನ್ನ, ಪರೀಕ್ಷೆಗಳನ್ನು ಕೃಷಿ ಪ್ರಯೋಗಾಲಯದಲ್ಲಿ ಕೈಗೊಳ್ಳಲಾಗಿದೆ' ಎಂದು ವಿವರಿಸಿದ್ದಾರೆ.

ಮಾರ್ಚ್ ಒಳಗೆ ಹೊಸ 1 ಲಕ್ಷ ಎಕರೆ ನೈಸರ್ಗಿಕ ಕೃಷಿಗೆ ಪರಿವರ್ತನೆ

ಮಾರ್ಚ್ ಒಳಗೆ ಹೊಸ 1 ಲಕ್ಷ ಎಕರೆ ನೈಸರ್ಗಿಕ ಕೃಷಿಗೆ ಪರಿವರ್ತನೆ

ರಾಜ್ಯದಲ್ಲಿ 2.4 ಲಕ್ಷ ಎಕರೆ ಭೂ ಪ್ರದೇಶದಲ್ಲಿ ಕೈಗೊಂಡಿರುವ ಸಾವಯವ ಕೃಷಿ ಭೂಮಿಯನ್ನು ನೈಸರ್ಗಿಕ ಕೃಷಿಗೆ ಕ್ರಮೇಣ ಪರಿವರ್ತಿಸಲಾಗುತ್ತಿದೆ. ಮುಂದಿನ ಮಾರ್ಚ್ ಒಳಗೆ ಹೊಸದಾಗಿ 1 ಲಕ್ಷ ಎಕರೆ ಪ್ರದೇಶವನ್ನು ನೈಸರ್ಗಿಕ ಕೃಷಿಗೆ ಪರಿವರ್ತನೆ ಮಾಡಲು ಗುರಿ ನಿಗದಿ ಪಡಿಸಲಾಗಿದೆ ಎಂದಿದ್ದಾರೆ.

ನೈಸರ್ಗಿಕ ಕೃಷಿಗೆ 41, 434 ಕೃಷಿಕರನ್ನು ಆಯ್ಕೆ ಮಾಡಲಾಗಿದ್ದು, 1,100 ತರಬೇತಿ ಕಾರ್ಯಕ್ರಮಗಳು, 200 ಕ್ಷೇತ್ರ ಭೇಟಿಗಳನ್ನು ಕೈಗೊಂಡಿದೆ ಹಾಗೂ ಕಾರ್ಯಾಗಾರಗಳನ್ನು ಕೈಗೊಳ್ಳಲಾಗಿದೆ. ಒಟ್ಟಾರೆ ಯೋಜನೆಯನ್ನು ಮಿಷನ್ ಮಾದರಿಯಲ್ಲಿ ಕಾರ್ಯಗತ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಪೈಟೋಸೈನಾಸಿಸಿಸ್ ಪರಿಣಾಮದ ಬಗ್ಗೆ ಅಧ್ಯಯನ

ಪೈಟೋಸೈನಾಸಿಸಿಸ್ ಪರಿಣಾಮದ ಬಗ್ಗೆ ಅಧ್ಯಯನ

ನೈಸರ್ಗಿಕ ಕೃಷಿಯಲ್ಲಿ ವೈಜ್ಞಾನಿಕ ಅಂಶಗಳನ್ನು ಕೂಡ ಗಮನದಲ್ಲಿಟ್ಟುಕೊಂಡು ಮಣ್ಣಿನ ಫಲವತ್ತತೆ ಕಾಯ್ದುಕೊಳ್ಳಲು ಒತ್ತು ನೀಡಲಾಗಿದೆ. ಮಣ್ಣಿನಲ್ಲಿ ಸಾರಾಜನಕ ಹಾಗೂ ಕಾರ್ಬನ್ ಪ್ರಮಾಣ ಸೇರಿದಂತೆ ನೈಸರ್ಗಿಕ ಗೊಬ್ಬರ ಬಳಕೆಗೂ ಮಹತ್ವ ನೀಡಲಾಗಿದೆ. ಪೈಟೋಸೈನಾಸಿಸಿಸ್ ಪರಿಣಾಮದ ಬಗ್ಗೆ ಅಧ್ಯಯನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಜೊತೆಗೆ ಈ ಕುರಿತಂತೆ ಅಧ್ಯಯನಗಳು ನಡೆಸಿದ್ದು, ಇವು ಉತ್ತಮ ಇಳುವರಿ ಹಾಗೂ ಉತ್ಪಾದನೆಗೆ ಎಡೆ ಮಾಡಿಕೊಡುತ್ತದೆ , ಇದಕ್ಕೆ ರೈತರು ಕೂಡ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

English summary
Karnataka has been in the forefront of digitalisation in agriculture sector said Chief Minister Basavaraj Bommai. He also added 78 lakh farmers are brought under this ambit. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X