ಕೊಡಗು: ವಿದ್ಯುತ್ ಮಾರ್ಗ ವಿರೋಧಿಸಿ ರೈತರ ಪ್ರತಿಭಟನೆ
ಗೋಣಿಕೊಪ್ಪ, ಏ.15: ಮೈಸೂರಿನಿಂದ ಕೊಡಗಿನ ಅರಣ್ಯ ಪ್ರದೇಶದಿಂದ ಕೇರಳಕ್ಕೆ 440 ಕೆ.ವಿ ವಿದ್ಯುತ್ ಮಾರ್ಗ ನಿರ್ಮಿಸಲು ಉದ್ದೇಶಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ವರಿಷ್ಠ ಹಾಗೂ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ನೇತೃತ್ವದಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಲಾಗಿದೆ.
ಗೋಣಿಕೊಪ್ಪ, ಪೊನ್ನಂಪೇಟೆ ರಸ್ತೆ ತಡೆದು ರೈತರು ಪ್ರತಿಭಟನೆ ನಡೆಸಿದರು. ರೈತ ಸಂಘದ ಸದಸ್ಯರನ್ನು ಬಂಧಿಸಿದ ಪೊಲೀಸರು ನಂತರ ಬಿಡುಗಡೆ ಮಾಡಿದರು.
ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ನಂಜುಂಡೇಗೌಡ, ಮಹಿಳಾ ರೈತ ಸಂಘದ ಅಧ್ಯಕ್ಷೆ ನಂದಿನಿ ಜಯರಾಮ್, ಜಿಲ್ಲಾ ರೈತಸಂಘದ ಮುಖ್ಯಸ್ಥ ಮಣು ಸೋಮಯ್ಯ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸುಮಾರು 50 ಸಾವಿರ ಮರಗಳನ್ನು ಈ ಮಾರ್ಗಕ್ಕಾಗಿ ಕಡಿಯಬೇಕಾಗುತ್ತದೆ ಎಂದು ಅಂದಾಜಿಸಲಾಗಿದೆ. ಪ್ರಕೃತಿ ನಾಶವಾದರೆ ಸಮಸ್ಯೆಗಳು ಸೃಷ್ಟಿಯಾಗಲಿವೆ. ಕಾವೇರಿ ನದಿಯನ್ನು ರಾಜ್ಯದ 8 ಜಿಲ್ಲೆಗಳು ಹಾಗೂ ತಮಿಳುನಾಡು, ಪುದುಚೇರಿ ರಾಜ್ಯಗಳು ಅವಲಂಬಿಸಿವೆ.
ಇದನ್ನೆಲ್ಲ ಗಮನಿಸಿ ಪರಿಸರಕ್ಕೆ ಹಾನಿಯುಂಟು ಮಾಡುವ ವಿದ್ಯುತ್ ಮಾರ್ಗವನ್ನು ನಿರ್ಮಿಸಿದರೆ ಅಪಾಯ ಕಟ್ಟಿಟ್ಟಬುತ್ತಿ ಎಂದು ಕೂರ್ಗ್ ವೈಲ್ಡ್ ಲೈಫ್ ಸೊಸೈಟಿ ಅಧ್ಯಕ್ಷ ಕರ್ನಲ್ ಸಿಪಿ ಮುತ್ತಣ್ಣ ಆತಂಕ ವ್ಯಕ್ತಪಡಿಸಿದ್ದಾರೆ.
#Karnataka Farmers planning mammoth rally to protest #landacquisitionbill #NDA @OneindiaKannada 28 April. #Bengaluru
— Shama Sundara S K (@shamsundar_sk) April 15, 2015 ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿ, ಈ ಹಿಂದಿನ ಸರ್ಕಾರ ಮಾರ್ಗ ನಿರ್ಮಾಣಕ್ಕೆ ಅನುಮತಿ ನೀಡಿದೆ. ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿರುವ ವಿದ್ಯುತ್ ಗ್ರಿಡ್ ನಿಂದ ಕೇರಳಕ್ಕೆ ವಿದ್ಯುತ್ ಸರಬರಾಜು ಮಾಡಲು ಈ ಮಾರ್ಗವನ್ನು ನಿರ್ಮಿಸಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ರಾಜ್ಯದ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದಿದ್ದಾರೆ.












Click it and Unblock the Notifications