ತೆಂಗಿನಮರ ಏರುವವರಿಗೆ ವಿಮಾ ಸೌಲಭ್ಯ: ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ
ಮಂಡ್ಯ, ಜನವರಿ 22: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೇರಾ ಸುರಕ್ಷಾ ವಿಮಾ ಯೋಜನೆಯು ತೆಂಗಿನ ಮರಗಳನ್ನು ಏರುವ ಕೆಲಸ ನಂಬಿರುವವರಿಗೆ ಸದ್ಯ ವರದಾನವಾಗಿದೆ. ತೆಂಗು ಅಭಿವೃದ್ಧಿ ಮಂಡಳಿ (ಸಿಡಿಬಿ), ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ದಿ ನ್ಯೂ ಇಂಡಿಯಾ ಅಶೂರೆನ್ಸ್ ಕಂಪನಿ ಈ ವಿಮಾ ಯೋಜನೆಯನ್ನು ಅನುಷ್ಠಾನಕ್ಕೆ ತರಲಿದೆ. ಇದರಿಂದ ದೇಶದಲ್ಲಿ ತೆಂಗು ಬೆಳೆಗೆ ಪ್ರೋತ್ಸಾಹ ನೀಡಿದಂತಾಗುತ್ತಿದೆ.
ಈ ವಿಮಾ ಯೋಜನೆಯಲ್ಲಿ ತೆಂಗಿನ ಮರಗಳನ್ನು ಏರಿ ಎಳನೀರು, ಕಾಯಿ ಕೀಳುವವರಿಗೆ, ನೀರಾ ತಂತ್ರಜ್ಞರಿಗೆ, ತೆಂಗಿನಕಾಯಿ ಕೊಯ್ದು ಮಾಡುವವರಿಗೆ, ಹೈಬ್ರಿಡೋನೇಶನ್ (ಸಂಕರೀಕರಣ) ಕೆಲಸಗಾರರಿಗೆ, ಡಿಎಸ್ ಪಿ (ಪ್ರಾತ್ಯಕ್ಷಿತೆ ಹಾಗೂ ಬೀಜ ಉತ್ಪಾದನೆ) ಫಾರ್ಮ್ ಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಹಾಗೂ ಎಫ್‌ಸಿಟಿ (ಫ್ರೆಂಡ್ಸ್ ಆಫ್ ಕೋಕೋನಟ್ ಟೀ) ಕೌಶಲ್ಯ-ತರಭೇತಿ ಕಾರ್ಯಕ್ರಮದಲ್ಲಿ ತೊಡಗಿರುವ ಕಾರ್ಮಿಕರಿಗೆ ಸಮಗ್ರ ವಿಮಾ ರಕ್ಷಣೆ ದೊರೆಯಲಿದೆ. ಹೀಗಾಗಿ ಈ ಯೋಜನೆಯ ಬಗ್ಗೆ ಪ್ರತಿಯೊಬ್ಬರು ತಿಳಿಯಬೇಕಾಗಿದ್ದು, ಈ ಬಗ್ಗೆ ಸಂಪೂರ್ಣ ವಿವರ ಈ ಕೆಳಗಿನಂತಿದೆ.

ಈ ಯೋಜನೆಯಡಿ ವಿಮೆಯ ಮೊತ್ತವು ವಾರ್ಷಿಕ ರೂ 956/- ಆಗಿದ್ದು, ಶೇ.75:25ರಂತೆ ಇದರಲ್ಲಿ ರೂ.717/- ಕಂತಿನ ಮೊತ್ತವನ್ನು ತೆಂಗು ಅಭಿವೃದ್ಧಿ ಮಂಡಳಿ ವತಿಯಿಂದ ಪಾವತಿ ಮಾಡಲಾಗುವುದು ಹಾಗೂ ಉಳಿದ ರೂ 239/- ಕಂತಿನ ಮೊತ್ತವನ್ನು ಪಾಲಿಸಿದಾರರು ಪಾವತಿಸಬೇಕಾಗಿರುತ್ತದೆ. ಪ್ರತಿ ವರ್ಷವು ಈ ವಿಮಾ ಯೋಜನೆಯನ್ನು ಪಾಲಿಸಿದಾರರು ನವೀಕರಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
ಈ ಯೋಜನೆಯಡಿ ಪಾಲಿಸಿದಾರರು ಅಪಘಾತಕ್ಕೊಳಗಾಗಿ ಮರಣ ಹೊಂದಿದ್ದಲ್ಲಿ 7 ಲಕ್ಷ ರೂಪಾಯಿ, ಶಾಶ್ವತ ಭಾಗಶಃ ಅಂಗವಿಕಲತೆ ಹೊಂದಿದ್ದಲ್ಲಿ 3.50 ಲಕ್ಷ ರೂಪಾಯಿ, ಆಸ್ಪತ್ರೆ ವೆಚ್ಚ (24ಗಂಟೆ ಐಪಿ) ಗರಿಷ್ಠ 2 ಲಕ್ಷ ರೂಪಾಯಿ, ತಾತ್ಕಲಿಕ ಅಂಗವಿಕಲತೆ ಹೊಂದುವವರಿಗೆ ಪ್ರತಿ ವಾರ ರೂ.3500/-ರಂತೆ ಗರಿಷ್ಠ ರೂ 21,000/-, ಆಂಬ್ಯುಲೆನ್ಸ್ ಖರ್ಚು 3500 ರೂಪಾಯಿ ಹಾಗೂ ಪಾಲಿಸಿದಾರರು ಮೃತಪಟ್ಟರೆ ಅಂತ್ಯ ಸಂಸ್ಕಾರಕ್ಕೆ 5500 ರೂಪಾಯಿ ನೀಡಲಾಗುತ್ತದೆ.

ತೆಂಗು ಅಭಿವೃದ್ಧಿ ಮಂಡಳಿಯಿಂದ ನಿಗದಿತ ಅರ್ಜಿ ನಮೂನೆಗೆ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ರೈತರ ವಾರ್ಷಿಕ ವಂತಿಕೆ ಪಾವತಿಸಿದ ರಶೀದಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕೇರಾ ಸುರಕ್ಷಾ ವಿಮಾ ಯೋಜನೆಯ ಕುರಿತು ಜಾಲತಾಣದಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದು ಮಂಡ್ಯ ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಕೆ.ಎನ್ ರೂಪಶ್ರೀ ತಿಳಿಸಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications