ಫಸಲ್ ಭೀಮಾ ಯೋಜನೆ ಸಂಪೂರ್ಣ ವಿಫಲ: ಕೇಂದ್ರದ ವಿರುದ್ಧ ಖಂಡ್ರೆ ಕಿಡಿ

ಬೆಂಗಳೂರು, ಸೆಪ್ಟೆಂಬರ್ 4: ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಿಂದ ರೈತರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಸಲ್ ಭೀಮಾ ಯೋಜನೆಯಿಂದ ರೈತರಿಗೆ ಯಾವುದೇ ಪ್ರಯೋಜನವಿಲ್ಲ, ಈ ಯೋಜನೆ ಕೇವಲ ಖಾಸಗಿ ವಿಮಾ ಸಂಸ್ಥೆಗಳಿಗೆ ಸಹಾಯವಾಗುತ್ತಿದೆ, ಈ ಬಗ್ಗೆ ಕೂಡಲೇ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ರೈತರ ಹೆಸರಿನಲ್ಲಿ ಖಾಸಗಿ ವಿಮಾ ಕಂಪನಿಗಳಿಂದ ಮೋಸ ಮಾಡಲಾಗುತ್ತಿದೆ.ರೈತರು ಕಷ್ಟ ಅನುಭವಿಸುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಕೇವಲ ಭಾಷಣಕ್ಕೆ ಸೀಮಿತವಾಗಿದ್ದಾರೆ, 2018-19ನೇ ಸಾಲಿನ ಬಜೆಟ್ ನಲ್ಲಿ 13ಸಾವಿರ ಕೋಟಿ ನೀಡಲಾಗಿದೆ. ಆದರೆ ಇದರಲ್ಲಿ 10-15ಸಾವಿರ ಕೋಟಿ ಲಾಭವಾಗುತ್ತಿದೆ. ಆದರೆ ರೈತರಿಗೆ ಇದರಿಂದ ಯಾವುದೇ ಲಾಭವಿಲ್ಲ ಎಂದರು.

Khandre criticizes crop insurance scheme is a failure one

1999-2000ರಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಯ ಕೃಷಿ ವಿಮೆ ಯೋಜನೆ ಜಾರಿಗೆ ತಂದಿತ್ತು. 2016ರಲ್ಲಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಜಾರಿಗೆ ತಂದಿತು. ಆದರೂ ಈ ಯೋಜನೆಯ ಪಾಲ್ಗೊಳ್ಳ್ಳುವಿಕೆ ನಿರೀಕ್ಷಿತ ಮಟ್ಟ ತಲುಪಿಲ್ಲ. ರೈತರು ಬೆಳೆ ವಿಮೆ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+