ಬಾಳೆ ಬೆಳೆದು ಬದುಕು ಕಟ್ಟಿಕೊಂಡ ಕೊಪ್ಪಳದ ರೈತ!
ಕೊಪ್ಪಳ, ಜೂನ್ 09; ಕೊಪ್ಪಳ ತಾಲೂಕಿನ ಹ್ಯಾಟಿ ಗ್ರಾಮ ಬಾಳೆ ಬೆಳೆಗೆ ಖ್ಯಾತಿ ಪಡೆದಿದೆ. ಇಲ್ಲಿಯ ಮಸಾರಿ ಮಣ್ಣು ಹಾಗೂ ನೀರು ಬಾಳೆ ಬೆಳೆಗೆ ಉತ್ತಮವಾಗಿದೆ. ಗ್ರಾಮದ ರೈತ ವಿರುಪಾಕ್ಷಪ್ಪ ಒಂದು ಹೆಕ್ಟೇರ್ ಪ್ರದೇಶದಲ್ಲಿ ಬಾಳೆ ಬೆಳೆದು ಕೋವಿಡ್ ಪರಿಸ್ಥಿತಿಯಲ್ಲೂ ಆರ್ಥಿಕ ಪ್ರಗತಿ ಸಾಧಿಸಿದ್ದಾರೆ.
ವಿರುಪಾಕ್ಷಪ್ಪ ಇಲ್ಲಿನ ನೈಸರ್ಗಿಕ ಸಂಪತ್ತಿನ ಜತೆಗೆ 2020-21ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಂಡು ಹಾಗೂ ತೋಟಗಾರಿಕೆ ಇಲಾಖೆ ಯೋಜನೆಯನ್ನು ಸದುಪಯೋಗ ಪಡೆದುಕೊಂಡು ಬಾಳೆ ಬೆಳೆದಿದ್ದಾರೆ.
ಹೋಬಳಿ ಅಧಿಕಾರಿ ಕೃಷ್ಣಮೂರ್ತಿ ಪಾಟೀಲ್ ಮಾರ್ಗದರ್ಶನ ನೀಡಿದ್ದು, 2020ರ ಜೂನ್ ತಿಂಗಳಿನಲ್ಲಿ ಬೆಂಗಳೂರಿನ ಖಾಸಗಿ ಕಂಪನಿಯಿಂದ ಬಾಳೆ ಸಸಿಗಳನ್ನು 13 ರೂ. ಗಳಿಗೆ ಒಂದರಂತೆ ತಂದು 6x6 ಅಡಿ ಅಂತರದಲ್ಲಿ 2 ಎಕರೆಯಲ್ಲಿ 3000 ಗಿಡಗಳನ್ನು ನಾಟಿ ಮಾಡಿದ್ದಾರೆ.

ಬಾಳೆ ನಾಟಿ, ಸಸ್ಯ ಸಂರಕ್ಷಣೆ ಬಗ್ಗೆ ಮತ್ತು ನೀರು ಹಾಗೂ ಪೋಷಕಾಂಶಗಳ ನಿರ್ವಹಣೆ ಬಗ್ಗೆ ಹಾರ್ಟಿ ಕ್ಲಿನಿಕ್ ವಿಷಯ ತಜ್ಞರಿಂದ ವಿರುಪಾಕ್ಷಪ್ಪ ಸಲಹೆ ಪಡೆದಿದ್ದಾರೆ. ಜೂನ್ನಲ್ಲಿ ನಾಟಿ ಮಾಡಿದ ಬಾಳೆ ಈಗ ಕೊಯ್ಲಿಗೆ ಬಂದಿದ್ದು ಸುಮಾರು 5 ಕ್ವಿಂಟಲ್ ಕಾಯಿಗಳನ್ನು 5 ರೂ. ಗೆ ಒಂದು ಕೆಜಿಯಂತೆ ಸ್ಥಳೀಯ ಮಾರುಕಟ್ಟೆಗೆ ಮಾರಾಟ ಮಾಡಿದ್ದಾರೆ.
ಲಾಕ್ಡೌನ್ನಿಂದಾಗಿ ಬೆಲೆ ಕಡಿಮೆ ಆಗಿ ಹಾಗೂ ಖರೀದಿದಾರರೇ ಇಲ್ಲದ ಸಮಯದಲ್ಲಿ ತೋಟಗಾರಿಕೆ ಇಲಾಖೆ ಮಧ್ಯ ಪ್ರವೇಶಿಸಿ, ಸ್ಥಳೀಯವಾಗಿ ಮಾರುಕಟ್ಟೆ ಕಲ್ಪಿಸಿಕೊಟ್ಟಿದ್ದಾರೆ. ಮುಂದಿನ ದಿನಮಾನಗಳಲ್ಲಿ ಬೇರೆ ಜಿಲ್ಲೆಗಳಿಗೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ಮಾರಾಟ ಮಾಡುವುದು ಸವಾಲಾಗಿದೆ. ಮಾರಾಟವಾಗದಿದ್ದಲ್ಲಿ ಹಣ್ಣುಗಳು ಹಾಳಾಗುತ್ತವೆ, ಮೊದಲೇ ಗಾಳಿಯಿಂದಾಗಿ ನೂರಾರು ಗಿಡಗಳು ಬಿದ್ದು ನಷ್ಟವಾಗಿವೆ, ಈಗ ಮತ್ತಷ್ಟು ನಷ್ಟವಾಗುವುದು ಬೇಡ ಎಂದು ಅಧಿಕಾರಿಗಳ ಸಲಹೆ ನೀಡಿದ್ದಾರೆ.
"ತೋಟಗಾರಿಕೆ ಇಲಾಖೆ ಅಧಿಕಾರಿಗಳ ಸಲಹೆಯಂತೆ ಬೆಳೆದ ಬಾಳೆ ಉತ್ತಮವಾಗಿದೆ, ಮುಂದಿನ ದಿನಗಳಲ್ಲಿ ಉತ್ತಮ ದರ ಸಿಗುವ ನಿರೀಕ್ಷೆ ಇದೆ" ಎನ್ನುತ್ತಾರೆ ವಿರುಪಾಕ್ಷಪ್ಪ.
ಇಲಾಖೆಯ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಅಧಿಕಾರಿಗಳ ಸಲಹೆ ಪಡೆದ ವಿರುಪಾಕ್ಷಪ್ಪ ಉತ್ತಮ ಫಸಲು ಪಡೆದಿದ್ದಾರೆ. ಲಾಕ್ಡೌನ್ನಿಂದಾಗಿ ಇವರಿಗೆ ಮಾರುಕಟ್ಟೆ ತೊಂದರೆ ಆಗಿತ್ತು, ಸದ್ಯ ಕಡಿಮೆ ದರ ಇದ್ದರೂ ಸ್ಥಳೀಯ ವ್ಯಾಪಾರಸ್ಥರು ತಾವೇ ಕೊಯ್ಲು ಮಾಡಿ ಕಾಯಿಗಳನ್ನು ಒಯ್ಯುತ್ತಿದ್ದಾರೆ" ಎನ್ನುತ್ತಾರೆ ಹಿರಿಯ ಸಹಾಯಕ ತೋಟಗಾರಿಗೆ ನಿರ್ದೇಶಕರಾದ ಜಗನ್ನಾಥ ರೆಡ್ಡಿ.
"ವಿರುಪಾಕ್ಷಪ್ಪ ಮುಂದಿನ ದಿನಗಳಲ್ಲಿ ಹೆಚ್ಚಿನ ದರವನ್ನು ಪಡೆಯಬಹುದು. ರೈತರು ಎದೆಗುಂದಬಾರದು. ತೋಟಗಾರಿಕೆ ಇಲಾಖೆ ಸದಾ ರೈತರ ನೆರವಿಗೆ ಇರುತ್ತದೆ" ಎಂದು ಅವರು ಹೇಳಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ತೋಟಗಾರಿಕೆ ಅಧಿಕಾರಿ ಕೃಷ್ಣಮೂರ್ತಿ 9008995397, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಜಗನ್ನಾಥರೆಡ್ಡಿ 9945924898 ಅವರನ್ನು ಸಂಪರ್ಕಿಸಬಹುದು.
-
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ












Click it and Unblock the Notifications