ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಾಳೆ ಬೆಳೆದು ಬದುಕು ಕಟ್ಟಿಕೊಂಡ ಕೊಪ್ಪಳದ ರೈತ!

|
Google Oneindia Kannada News

ಕೊಪ್ಪಳ, ಜೂನ್ 09; ಕೊಪ್ಪಳ ತಾಲೂಕಿನ ಹ್ಯಾಟಿ ಗ್ರಾಮ ಬಾಳೆ ಬೆಳೆಗೆ ಖ್ಯಾತಿ ಪಡೆದಿದೆ. ಇಲ್ಲಿಯ ಮಸಾರಿ ಮಣ್ಣು ಹಾಗೂ ನೀರು ಬಾಳೆ ಬೆಳೆಗೆ ಉತ್ತಮವಾಗಿದೆ. ಗ್ರಾಮದ ರೈತ ವಿರುಪಾಕ್ಷಪ್ಪ ಒಂದು ಹೆಕ್ಟೇರ್ ಪ್ರದೇಶದಲ್ಲಿ ಬಾಳೆ ಬೆಳೆದು ಕೋವಿಡ್ ಪರಿಸ್ಥಿತಿಯಲ್ಲೂ ಆರ್ಥಿಕ ಪ್ರಗತಿ ಸಾಧಿಸಿದ್ದಾರೆ.

ವಿರುಪಾಕ್ಷಪ್ಪ ಇಲ್ಲಿನ ನೈಸರ್ಗಿಕ ಸಂಪತ್ತಿನ ಜತೆಗೆ 2020-21ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಂಡು ಹಾಗೂ ತೋಟಗಾರಿಕೆ ಇಲಾಖೆ ಯೋಜನೆಯನ್ನು ಸದುಪಯೋಗ ಪಡೆದುಕೊಂಡು ಬಾಳೆ ಬೆಳೆದಿದ್ದಾರೆ.

ಕೊಪ್ಪಳ ರೈತನ ಸಾಧನೆ; ಪಪ್ಪಾಯ ಬೆಳೆದು ಒಳ್ಳೆಯ ಆದಾಯ! ಕೊಪ್ಪಳ ರೈತನ ಸಾಧನೆ; ಪಪ್ಪಾಯ ಬೆಳೆದು ಒಳ್ಳೆಯ ಆದಾಯ!

ಹೋಬಳಿ ಅಧಿಕಾರಿ ಕೃಷ್ಣಮೂರ್ತಿ ಪಾಟೀಲ್ ಮಾರ್ಗದರ್ಶನ ನೀಡಿದ್ದು, 2020ರ ಜೂನ್ ತಿಂಗಳಿನಲ್ಲಿ ಬೆಂಗಳೂರಿನ ಖಾಸಗಿ ಕಂಪನಿಯಿಂದ ಬಾಳೆ ಸಸಿಗಳನ್ನು 13 ರೂ. ಗಳಿಗೆ ಒಂದರಂತೆ ತಂದು 6x6 ಅಡಿ ಅಂತರದಲ್ಲಿ 2 ಎಕರೆಯಲ್ಲಿ 3000 ಗಿಡಗಳನ್ನು ನಾಟಿ ಮಾಡಿದ್ದಾರೆ.

ಲಾಕ್‌ಡೌನ್ ಎಫೆಕ್ಟ್: ಹಿರಿಯೂರಿನಲ್ಲಿ ಬಾಳೆ ತೋಟವನ್ನೇ ನಾಶಮಾಡಿದ ರೈತಲಾಕ್‌ಡೌನ್ ಎಫೆಕ್ಟ್: ಹಿರಿಯೂರಿನಲ್ಲಿ ಬಾಳೆ ತೋಟವನ್ನೇ ನಾಶಮಾಡಿದ ರೈತ

Koppal Farmer Get Profit In Banana Cultication

ಬಾಳೆ ನಾಟಿ, ಸಸ್ಯ ಸಂರಕ್ಷಣೆ ಬಗ್ಗೆ ಮತ್ತು ನೀರು ಹಾಗೂ ಪೋಷಕಾಂಶಗಳ ನಿರ್ವಹಣೆ ಬಗ್ಗೆ ಹಾರ್ಟಿ ಕ್ಲಿನಿಕ್ ವಿಷಯ ತಜ್ಞರಿಂದ ವಿರುಪಾಕ್ಷಪ್ಪ ಸಲಹೆ ಪಡೆದಿದ್ದಾರೆ. ಜೂನ್‌ನಲ್ಲಿ ನಾಟಿ ಮಾಡಿದ ಬಾಳೆ ಈಗ ಕೊಯ್ಲಿಗೆ ಬಂದಿದ್ದು ಸುಮಾರು 5 ಕ್ವಿಂಟಲ್ ಕಾಯಿಗಳನ್ನು 5 ರೂ. ಗೆ ಒಂದು ಕೆಜಿಯಂತೆ ಸ್ಥಳೀಯ ಮಾರುಕಟ್ಟೆಗೆ ಮಾರಾಟ ಮಾಡಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಬೆಲೆ ಕಡಿಮೆ ಆಗಿ ಹಾಗೂ ಖರೀದಿದಾರರೇ ಇಲ್ಲದ ಸಮಯದಲ್ಲಿ ತೋಟಗಾರಿಕೆ ಇಲಾಖೆ ಮಧ್ಯ ಪ್ರವೇಶಿಸಿ, ಸ್ಥಳೀಯವಾಗಿ ಮಾರುಕಟ್ಟೆ ಕಲ್ಪಿಸಿಕೊಟ್ಟಿದ್ದಾರೆ. ಮುಂದಿನ ದಿನಮಾನಗಳಲ್ಲಿ ಬೇರೆ ಜಿಲ್ಲೆಗಳಿಗೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.

ಒಂದು ಜಿಲ್ಲೆ, ಒಂದು ಉತ್ಪನ್ನಕ್ಕೆ ಮೈಸೂರಿನ ಬಾಳೆ, ಕೊಡಗಿನ ಕಾಫಿ ಆಯ್ಕೆಒಂದು ಜಿಲ್ಲೆ, ಒಂದು ಉತ್ಪನ್ನಕ್ಕೆ ಮೈಸೂರಿನ ಬಾಳೆ, ಕೊಡಗಿನ ಕಾಫಿ ಆಯ್ಕೆ

ಸದ್ಯದ ಪರಿಸ್ಥಿತಿಯಲ್ಲಿ ಮಾರಾಟ ಮಾಡುವುದು ಸವಾಲಾಗಿದೆ. ಮಾರಾಟವಾಗದಿದ್ದಲ್ಲಿ ಹಣ್ಣುಗಳು ಹಾಳಾಗುತ್ತವೆ, ಮೊದಲೇ ಗಾಳಿಯಿಂದಾಗಿ ನೂರಾರು ಗಿಡಗಳು ಬಿದ್ದು ನಷ್ಟವಾಗಿವೆ, ಈಗ ಮತ್ತಷ್ಟು ನಷ್ಟವಾಗುವುದು ಬೇಡ ಎಂದು ಅಧಿಕಾರಿಗಳ ಸಲಹೆ ನೀಡಿದ್ದಾರೆ.

"ತೋಟಗಾರಿಕೆ ಇಲಾಖೆ ಅಧಿಕಾರಿಗಳ ಸಲಹೆಯಂತೆ ಬೆಳೆದ ಬಾಳೆ ಉತ್ತಮವಾಗಿದೆ, ಮುಂದಿನ ದಿನಗಳಲ್ಲಿ ಉತ್ತಮ ದರ ಸಿಗುವ ನಿರೀಕ್ಷೆ ಇದೆ" ಎನ್ನುತ್ತಾರೆ ವಿರುಪಾಕ್ಷಪ್ಪ.

ಇಲಾಖೆಯ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಅಧಿಕಾರಿಗಳ ಸಲಹೆ ಪಡೆದ ವಿರುಪಾಕ್ಷಪ್ಪ ಉತ್ತಮ ಫಸಲು ಪಡೆದಿದ್ದಾರೆ. ಲಾಕ್‌ಡೌನ್‌ನಿಂದಾಗಿ ಇವರಿಗೆ ಮಾರುಕಟ್ಟೆ ತೊಂದರೆ ಆಗಿತ್ತು, ಸದ್ಯ ಕಡಿಮೆ ದರ ಇದ್ದರೂ ಸ್ಥಳೀಯ ವ್ಯಾಪಾರಸ್ಥರು ತಾವೇ ಕೊಯ್ಲು ಮಾಡಿ ಕಾಯಿಗಳನ್ನು ಒಯ್ಯುತ್ತಿದ್ದಾರೆ" ಎನ್ನುತ್ತಾರೆ ಹಿರಿಯ ಸಹಾಯಕ ತೋಟಗಾರಿಗೆ ನಿರ್ದೇಶಕರಾದ ಜಗನ್ನಾಥ ರೆಡ್ಡಿ.

"ವಿರುಪಾಕ್ಷಪ್ಪ ಮುಂದಿನ ದಿನಗಳಲ್ಲಿ ಹೆಚ್ಚಿನ ದರವನ್ನು ಪಡೆಯಬಹುದು. ರೈತರು ಎದೆಗುಂದಬಾರದು. ತೋಟಗಾರಿಕೆ ಇಲಾಖೆ ಸದಾ ರೈತರ ನೆರವಿಗೆ ಇರುತ್ತದೆ" ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ತೋಟಗಾರಿಕೆ ಅಧಿಕಾರಿ ಕೃಷ್ಣಮೂರ್ತಿ 9008995397, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಜಗನ್ನಾಥರೆಡ್ಡಿ 9945924898 ಅವರನ್ನು ಸಂಪರ್ಕಿಸಬಹುದು.

English summary
With the help of horticulture department Koppal based farmer Veerupkshappa get profit in banana cultivation. In the time of lockdown he get huge demand on local market.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X